ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧದ ಸೀಮಿತ ಓವರ್ ಸರಣಿಗಳಿಗೆ 2 ಪ್ರತ್ಯೇಕ ತಂಡ ಪ್ರಕಟಿಸಿದ ಇಂಗ್ಲೆಂಡ್; ಹೊಸ ನಾಯಕನ ನೇಮಕ

IND vs ENG: England announced squads for T20I and ODI series against India

ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಆತಿಥೇಯ ಇಂಗ್ಲೆಂಡ್ ವಿರುದ್ಧ ಕಳೆದ ವರ್ಷದಿಂದ ಮುಂದೂಡಲ್ಪಟ್ಟು ಈ ವರ್ಷ ಆಯೋಜನೆಯಾಗಿರುವ ಐದನೇ ಟೆಸ್ಟ್ ಪಂದ್ಯ, 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗಳಲ್ಲಿ ಸೆಣಸಾಟ ನಡೆಸಲಿದೆ.

IND vs ENG: 3 ಪಂದ್ಯಗಳ ODI ಸರಣಿಗೆ ಮರಳಿದ ಪಾಂಡ್ಯ, ಜಡೇಜಾ; ಹೀಗಿದೆ ಭಾರತ ತಂಡIND vs ENG: 3 ಪಂದ್ಯಗಳ ODI ಸರಣಿಗೆ ಮರಳಿದ ಪಾಂಡ್ಯ, ಜಡೇಜಾ; ಹೀಗಿದೆ ಭಾರತ ತಂಡ

ಈಗಾಗಲೇ ಎಡ್ಜ್ ಬಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಜುಲೈ 5ರಂದು ಈ ಪಂದ್ಯ ಮುಕ್ತಾಯಗೊಳ್ಳಲಿದೆ. ಹಾಗೂ ನಂತರ ಜುಲೈ 7ರಿಂದ 10ರವರೆಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು ಜುಲೈ 12ರಿಂದ 17ರವರೆಗೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಹಳ್ಳಿ ದಾರಿಯಲ್ಲಿ ನಾಟಿ ವೈದ್ಯರಿಂದ ಮೊಣಕಾಲು ನೋವಿಗೆ 40 ರೂ. ಚಿಕಿತ್ಸೆ ಪಡೆದ ಎಂಎಸ್ ಧೋನಿಹಳ್ಳಿ ದಾರಿಯಲ್ಲಿ ನಾಟಿ ವೈದ್ಯರಿಂದ ಮೊಣಕಾಲು ನೋವಿಗೆ 40 ರೂ. ಚಿಕಿತ್ಸೆ ಪಡೆದ ಎಂಎಸ್ ಧೋನಿ

ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ಈ ಎರಡೂ ಸರಣಿಗಳಿಗೂ ಪ್ರತ್ಯೇಕ ತಂಡಗಳನ್ನು ಪ್ರಕಟಿಸಿದೆ. ಇನ್ನು ಇಂಗ್ಲೆಂಡ್ ತಂಡದ ನಾಯಕನಾಗಿದ್ದ ಇಯಾನ್ ಮಾರ್ಗನ್ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಕಾರಣ ಇದೀಗ ಇಂಗ್ಲೆಂಡ್ ತಂಡದ ನಾಯಕತ್ವ ಜೋಸ್ ಬಟ್ಲರ್ ಹೆಗಲಿಗೆ ಬಿದ್ದಿದೆ. ಹೀಗೆ ಜೋಸ್ ಬಟ್ಲರ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿರುದ್ಧದ ಸೀಮಿತ ಓವರ್ ಸರಣಿಗಳಲ್ಲಿ ಕಣಕ್ಕಿಳಿಯಲಿರುವ ಇಂಗ್ಲೆಂಡ್ ತಂಡ ಈ ಕೆಳಕಂಡಂತಿದೆ.

ಇಂಗ್ಲೆಂಡ್ ಟಿ ಟ್ವೆಂಟಿ ಸ್ಕ್ವ್ಯಾಡ್

ಇಂಗ್ಲೆಂಡ್ ಟಿ ಟ್ವೆಂಟಿ ಸ್ಕ್ವ್ಯಾಡ್

ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ರಿಚರ್ಡ್ ಗ್ಲೀಸನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ಮಲನ್, ಟೈಮಲ್ ಮಿಲ್ಸ್, ಮ್ಯಾಥ್ಯೂ ಪಾರ್ಕಿನ್ಸನ್, ಜೇಸನ್ ರಾಯ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ.

ಇಂಗ್ಲೆಂಡ್ ಏಕದಿನ ಸ್ಕ್ವ್ಯಾಡ್

ಇಂಗ್ಲೆಂಡ್ ಏಕದಿನ ಸ್ಕ್ವ್ಯಾಡ್

ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರೇಗ್ ಓವರ್‌ಟನ್, ಮ್ಯಾಥ್ಯೂ ಪಾರ್ಕಿನ್ಸನ್, ಜೋ ರೂಟ್, ಜೇಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ.

Cheteshwar Pujara ಅವರ ವಿರುದ್ಧ ಅಭಿಮಾನಿಗಳ ಆಕ್ರೋಶ | *Cricket | OneIndia Kannada
ಟೀಮ್ ಇಂಡಿಯಾ ಸ್ಕ್ವ್ಯಾಡ್

ಟೀಮ್ ಇಂಡಿಯಾ ಸ್ಕ್ವ್ಯಾಡ್

ಇಂಗ್ಲೆಂಡ್ ಇಂದು ( ಜುಲೈ 1 ) ತಂಡವನ್ನು ಪ್ರಕಟಿಸಿದ್ದರೆ, ಬಿಸಿಸಿಐ ನಿನ್ನೆಯೇ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ ಸರಣಿಗಳಿಗೆ ಭಾರತ ತಂಡವನ್ನು ಪ್ರಕಟಿಸಿತ್ತು. ಹೀಗೆ ಪ್ರಕಟವಾದ ಟೀಮ್ ಇಂಡಿಯಾ ಕೆಳಕಂಡಂತಿದೆ.

ಮೊದಲ ಟಿ20 ಪಂದ್ಯಕ್ಕೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋ ಪಟೇಲ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್


2 ಮತ್ತು 3ನೇ ಟಿ20 ಪಂದ್ಯಕ್ಕೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್ ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್


ಏಕದಿನ ಸರಣಿಗೆ ಪ್ರಕಟವಾಗಿರುವ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್

Story first published: Friday, July 1, 2022, 18:29 [IST]
Other articles published on Jul 1, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X