ಮತ್ತೊಂದು ಭರ್ಜರಿ ಶತಕ ಸಿಡಿಸಿದ ಬೈರ್‌ಸ್ಟೋವ್: ಇಂಗ್ಲೆಂಡ್ ಪರ ಏಕಾಂಗಿ ಹೋರಾಟ

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿದ್ದು ತೀವ್ರ ಪೈಪೊಟಿಯ ಪ್ರದರ್ಶನ ನಡೆಯುತ್ತಿದೆ. ಇಂಗ್ಲೆಂಡ್ ಪರವಾಗಿ ಜಾನಿ ಬೈರ್‌ಸ್ಟೋವ್ ಮತ್ತೊಂದು ಭರ್ಜರಿ ಶತಕ ಸಿಡಿಸಿದ್ದು ಕುಸಿಯುತ್ತಿದ್ದ ಇಂಗ್ಲೆಂಡ್ ತಂಡಕ್ಕೆ ಮತ್ತೊಮ್ಮೆ ಆಸರೆಯಾಗಿದ್ದಾರೆ.
ನಿಧಾನವಾಗಿ ಬ್ಯಾಟಿಂಗ್ ಆರಂಭಿಸಿದ್ದ ಜಾನಿ ಬೈರ್‌ಸ್ಟೋವ್ ನಂತರ ತಮ್ಮ ಎಂದಿನ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಇದರಲ್ಲಿ ಯಶಸ್ಸು ಸಾಧಿಸಿದ ಬೈರ್‌ಸ್ಟೋವ್ ಸತತ ಮೂರನೇ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ಪರವಾಗಿ ಉಳಿದ ಯಾವೊಬ್ಬ ದಾಂಡಿಗ ಕೂಡ ದೊಡ್ಡ ಮೊತ್ತ ಗಳಿಸಲು ವಿಫಲವಾಗಿದ್ದಾರೆ.

ಕುಸಿದ ಇಂಗ್ಲೆಂಡ್‌ಗೆ ಬೈರ್‌ಸ್ಟೋವ್ ಆಸರೆ
ಇಂಗ್ಲೆಂಡ್ ತಂಡ ಮೊದಲ ದಿನದಾಟದಲ್ಲಿ ಭಾರೀ ಹಿನ್ನಡೆ ಅನುಭವಿಸಿತ್ತು. 83 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಈ ಹಂತದಲ್ಲಿ ಬೈರ್‌ಸ್ಟೋವ್ ಹಾಗೂ ಬೆನ್ ಸ್ಟೋಕ್ಸ್ ಸೇರಿಕೊಮಡು ಕುಸಿತದಿಂದ ತಡೆಯುವಲ್ಲಿ ಒಂದು ಹಂತಕ್ಕೆ ಯಶಸ್ವಿಯಾಗಿದ್ದರು. ನಂತರ ಬೆನ್ ಸ್ಟೋಕ್ಸ್ ವಿಕೆಟ್ ಕಳೆದುಕೊಂಡರಾದರೂ ಬೈರ್‌ಸ್ಟೋವ್‌ಗೆ ತಡೆಯೊಡ್ಡಲು ಭಾರತೀಯ ಬೌಲರ್‌ಗಳು ವಿಪಲವಾದರು.

ಅಮೋಘ ಫಾರ್ಮ್‌ನಲ್ಲಿರುವ ಬೈರ್‌ಸ್ಟೋವ್
ಈ ವರ್ಷ ಜಾನಿ ಬೈರ್‌ಸ್ಟೋವ್ ಅಮೋಘ ಫಾರ್ಮ್‌ನಲ್ಲಿದ್ದಾರೆ. ಸತತ ಮೂರನೇ ಶತಕ ಬಾರಿಸಿರುವ ಜಾನಿ ಬೈರ್‌ಸ್ಟೋವ್ ಈ ವರ್ಷ ಸಿಡಿಸಿದ 5ನೇ ಟೆಸ್ಟ್ ಶತಕವಾಗಿದೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಅಂತಿಮ ಎರಡು ಪಂದ್ಯಗಳಲ್ಲಿ ಶತಕ ಬಾರಿಸಿದ್ದರು. ಅಲ್ಲದೆ ಈ ಪಂದ್ಯದ ಮೂಲಕ ಈ ವರ್ಷದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇದು ಜಾನಿ ಬೈರ್‌ಸ್ಟೋವ್ ಅವರ ಒಟ್ಟಾರೆ 11ನೇ ಟೆಸ್ಟ್ ಶತಕವಾಗಿದೆ.

ಇತ್ತಂಡಗಳ ಆಡುವ ಬಳಗ
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಬೆನ್ ಫೋಕ್ಸ್, ಕ್ರೇಗ್ ಓವರ್ಟನ್, ಜೇಮೀ ಓವರ್ಟನ್, ಹ್ಯಾರಿ ಬ್ರೂಕ್
ಭಾರತ: ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ (ನಾಯಕ)
ಬೆಂಚ್: ಉಮೇಶ್ ಯಾದವ್, ಶ್ರೀಕರ್ ಭರತ್, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications