For Quick Alerts
ALLOW NOTIFICATIONS  
For Daily Alerts
 

IND vs ENG 1st Test: ಕೈಕೊಟ್ಟ ಬ್ಯಾಟಿಂಗ್, ಸುಲಭವಾದ ಪಂದ್ಯ ಕೈಚೆಲ್ಲಿದ ಭಾರತ; ಗೆದ್ದುಬೀಗಿದ ಇಂಗ್ಲೆಂಡ್

ಭಾನುವಾರ, ಜನವರಿ 28ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ಭಾರತ ತಂಡದ ವಿರುದ್ಧ ಪ್ರವಾಸಿ ಇಂಗ್ಲೆಂಡ್ ತಂಡವು 28 ರನ್‌ಗಳಿಂದ ರೋಚಕ ಗೆಲುವು ಸಾಧಿಸಿತು.

ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ವಿರುದ್ಧ ಇಂಗ್ಲೆಂಡ 1-0 ಅಂತರದ ಮುನ್ನಡೆ ಸಾಧಿಸಿದೆ. ಚೊಚ್ಚಲ ಟೆಸ್ಟ್ ಪಂದ್ಯವಾಡಿದ ಇಂಗ್ಲೆಂಡ್‌ನ ಟಾಮ್ ಹಾರ್ಟ್ಲಿ ಅವರ ಮಾರಕ ಬೌಲಿಂಗ್‌ಗೆ ತತ್ತರಿಸಿದ ಭಾರತದ ಬ್ಯಾಟರ್‌ಗಳು ಯಾವುದೇ ಹಂತದಲ್ಲೂ ಪ್ರತಿರೋಧ ಒಡ್ಡಲು ವಿಫಲರಾದರು.

IND vs ENG: England Beat India By 28 Runs In 1st Test Match

ಪಂದ್ಯದ ನಾಲ್ಕನೇ ದಿನವಾದ ಭಾನುವಾರದಂದು ಇಂಗ್ಲೆಂಡ್ ತಂಡವನ್ನು 420 ರನ್‌ಗಳಿಗೆ ಆಲೌಟ್ ಮಾಡಿದ ನಂತರ, ಗೆಲ್ಲಲು 231 ರನ್‌ಗಳ ಸವಾಲಿನ ಗುರಿ ಪಡೆದ ಭಾರತ ತಂಡ 69.2 ಓವರ್‌ಗಳಲ್ಲಿ 202 ರನ್‌ಗಳಿಗೆ ಸರ್ವಪತನ ಕಂಡಿತು.

ಭಾರತದ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್‌ಗೆ 42 ರನ್‌ಗಳ ಜೊತೆಯಾಟದೊಂದಿಗೆ ತಂಡಕ್ಕೆ ಉತ್ತಮ ಆರಂಭ ನೀಡಿದರು.

ಈ ವೇಳೆ 15 ರನ್ ಗಳಿಸಿ ಆಡುತ್ತಿದ್ದ ಯಶಸ್ವಿ ಜೈಸ್ವಾಲ್ ಅವರು ಟಾಮ್ ಹಾರ್ಟ್ಲಿ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರೆ, ನಂತರ ಬಂದ ಶುಭ್ಮನ್ ಗಿಲ್ ಅವರನ್ನು ಕೂಡ ಟಾಮ್ ಹಾರ್ಟ್ಲಿ ಡಕ್‌ಗೆ ಔಟ್ ಮಾಡಿದರು.

ಆಗ ನಾಯಕ ರೋಹಿತ್ ಶರ್ಮಾ 58 ಎಸೆತಗಳಲ್ಲಿ 7 ಬೌಂಡರಿ ಸಮೇತ 39 ರನ್ ಗಳಿಸಿ ಆಡುತ್ತಿದ್ದ ನಾಯಕ ರೋಹಿತ್ ಶರ್ಮಾ ಅವರನ್ನು ಟಾಮ್ ಹಾರ್ಟ್ಲಿ ಎಲ್‌ಬಿಡಬ್ಲ್ಯು ಬಲೆಗೆ ಕೆಡವಿದರು. ಇನ್ನು ಕೆಎಲ್ ರಾಹುಲ್ 22 ರನ್, ಅಕ್ಷರ್ ಪಟೇಲ್ 17 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

IND vs ENG: England Beat India By 28 Runs In 1st Test Match

ಉಳಿದಂತೆ ಶ್ರೇಯಸ್ ಅಯ್ಯರ್ 13 ರನ್, ರವೀಂದ್ರ ಜಡೇಜಾ 2 ರನ್ ಗಳಿಸಿ ಔಟಾಗುತ್ತಿದ್ದಂತೆಯೇ ಭಾರತದ ಗೆಲುವಿನ ಆಸೆ ಮರೀಚಿಕೆಯಾಗಿತ್ತು. ಆಗ ತಂಡದ ಮೊತ್ತ 119 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿತ್ತು.

ಈ ವೇಳೆ ಜೊತೆಯಾದ ರವಿಚಂದ್ರನ್ ಅಶ್ವಿನ್ ಮತ್ತು ಕೆಎಸ್ ಭರತ್ 8ನೇ ವಿಕೆಟ್‌ಗೆ 55 ರನ್‌ಗಳ ಜೊತೆಯಾಟ ನೀಡಿ ಭಾರತಕ್ಕೆ ಗೆಲುವಿನ ಆಸೆ ಮೂಡಿಸಿದ್ದರು. ಆದರೆ, 28 ರನ್ ಗಳಿಸಿ ಆಡುತ್ತಿದ್ದ ಕೆಎಸ್ ಭರತ್ ಕ್ಲೀನ್ ಬೌಲ್ಡ್ ಆದರು.

ನಂತರ ರವಿಚಂದ್ರನ್ ಅಶ್ವಿನ್ ಕೂಡ 28 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಮೊಹಮ್ಮದ್ ಸಿರಾಜ್ 12 ರನ್ ಮತ್ತು ಜಸ್ಪ್ರೀತ್ ಬುಮ್ರಾ 6 ರನ್ ಗಳಿಸಿದರು.

ಇಂಗ್ಲೆಂಡ್ ತಂಡದ ಪರ ಮಾರಕ ಬೌಲಿಂಗ್ ಪ್ರದರ್ಶನ ನೀಡಿದ ಟಾಮ್ ಹಾರ್ಟ್ಲಿ 26.2 ಓವರ್‌ಗಳಲ್ಲಿ 62 ರನ್ ನೀಡಿ 7 ವಿಕೆಟ್ ಕಬಳಿಸಿದರು. ಉಳಿದಂತೆ ಜೋ ರೂಟ್ ಮತ್ತು ಜ್ಯಾಕ್ ಲೀಚ್ ತಲಾ ಒಂದೊಂದು ವಿಕೆಟ್ ಪಡೆದರು.

IND vs ENG: England Beat India By 28 Runs In 1st Test Match

ಇದಕ್ಕೂ ಮುನ್ನ ತಮ್ಮ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡವು 420 ರನ್‌ಗಳ ಬೃಹತ್ ಮೊತ್ತ ಕಲೆಹಾಕಿ, ಭಾರತಕ್ಕೆ 231 ರನ್‌ಗಳ ಸವಾಲಿನ ಗುರಿ ನೀಡುವಲ್ಲಿ ಯಶಸ್ವಿಯಾಯಿತು.

ಇದಕ್ಕೆ ಪ್ರಮುಖ ಕಾರಣ, ಒಲ್ಲಿ ಪೋಪ್ ಅವರ ಭರ್ಜರಿ ಶತಕ. ಕೇವಲ 4 ರನ್‌ಗಳಿಂದ ದ್ವಿಶತಕ ವಂಚಿತರಾದ ಒಲ್ಲಿ ಪೋಪ್ 278 ಎಸೆತಗಳನ್ನು ಎದುರಿಸಿ 21 ಬೌಂಡರಿಗಳ ನೆರವಿನಿಂದ 196 ರನ್ ಗಳಿಸಿ ಕೊನೆಯವರಾಗಿ ಔಟಾದರು.

ಪಂದ್ಯದ ಸಂಕ್ಷಿಪ್ತ ವಿವರ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 64.3 ಓವರ್‌ಗಳಲ್ಲಿ 246 ರನ್‌ಗಳಿಗೆ ಸರ್ವಪತನ ಕಂಡಿತು. ಈ ವೇಳೆ ನಾಯಕ ಬೆನ್ ಸ್ಟೋಕ್ಸ್ 70 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿದ್ದರು.

ನಂತರ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ 121 ಓವರ್‌ಗಳಲ್ಲಿ 436 ರನ್ ಕಲೆಹಾಕಿ, 190 ರನ್‌ಗಳ ದೊಡ್ಡ ಮುನ್ನಡೆ ಸಾಧಿಸಿತ್ತು. ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ತಲಾ ಅರ್ಧಶತಕ ಸಿಡಿಸಿದ್ದರು.

ಪಂದ್ಯದ ಮೂರನೇ ಹಾಗೂ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಒಲ್ಲಿ ಪೋಪ್ ಅವರ ಭರ್ಜರಿ ಶತಕದ ಸಹಾಯದಿಂದ 102.1 ಓವರ್‌ಗಳಲ್ಲಿ 420 ರನ್‌ಗಳಿಗೆ ಆಲೌಟ್ ಆಯಿತು ಮತ್ತು ಭಾರತದ ಗೆಲುವಿಗೆ 230 ರನ್‌ಗಳ ಗುರಿ ನೀಡಿತ್ತು.

ಆದರೆ, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದಾಗಿ ಭಾರತ ತಂಡ 69.2 ಓವರ್‌ಗಳಲ್ಲಿ 202 ರನ್‌ಗಳಿಗೆ ಸರ್ವಪತನ ಕಂಡು, 22 ರನ್‌ಗಳ ಸೋಲು ಅನುಭವಿಸಿತು. ಕೇವಲ 4 ರನ್‌ಗಳಿಂದ ದ್ವಿಶತಕ ವಂಚಿತರಾದ ಒಲ್ಲಿ ಪೋಪ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Story first published: Sunday, January 28, 2024, 17:49 [IST]
Other articles published on Jan 28, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+