ನಾಲ್ಕನೇ ಟೆಸ್ಟ್‌ಗೂ ಮುನ್ನ ಭಾರತಕ್ಕೆ ಸಿಹಿ ಸುದ್ದಿ; ಇಂಗ್ಲೆಂಡ್‌ನ ಈ ಬಲಿಷ್ಠ ಆಟಗಾರ ಹೊರಬೀಳುವ ಸಾಧ್ಯತೆ!

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿವೆ. ಈ ಮೂರು ಪಂದ್ಯಗಳ ಪೈಕಿ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು, ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 151 ರನ್‌ಗಳ ಗೆಲುವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿತ್ತು ಹಾಗೂ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಇಂಗ್ಲೆಂಡ್ ಭಾರತದ ವಿರುದ್ಧ 76 ರನ್‌ಗಳ ಸರಣಿ ಗೆಲುವನ್ನು ಸಾಧಿಸಿತು. ಹೀಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ 3 ಪಂದ್ಯಗಳ ನಂತರ 1-1 ಸಮಬಲವನ್ನು ಎರಡೂ ತಂಡಗಳು ಸಾಧಿಸಿದ್ದು ಇದೀಗ ಎಲ್ಲರ ಚಿತ್ತ ಸೆಪ್ಟೆಂಬರ್ 2 ರಿಂದ ಓವಲ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದತ್ತ ಇದೆ.
ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಳ್ಳಬೇಕೆಂಬ ಹಂಬಲದಲ್ಲಿ ಎರಡೂ ತಂಡಗಳು ಸಹ ಇವೆ. ಹೀಗಾಗಿ ತಂಡಕ್ಕೆ ಅಗತ್ಯವಾದ ಬದಲಾವಣೆಗಳನ್ನು ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳು ಸಹ ಮಾಡಿಕೊಳ್ಳುತ್ತಿದ್ದು ಇದರ ನಡುವೆಯೇ ತಂಡಗಳ ಕೆಲ ಬಲಿಷ್ಠ ಆಟಗಾರರಿಗೆ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ವಿಶ್ರಾಂತಿ ನೀಡುವ ಚಿಂತನೆಯನ್ನೂ ಸಹ ನಡೆಸಲಾಗುತ್ತಿದೆ. ಇತ್ತೀಚೆಗಷ್ಟೇ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿರಾಟ್ ಕೊಹ್ಲಿ ಕೂಡ ತಮ್ಮ ತಂಡದ ಕೆಲ ಆಟಗಾರರಿಗೆ ಮುಂಬರುವ ಎರಡು ಪಂದ್ಯಗಳಲ್ಲಿ ವಿಶ್ರಾಂತಿ ನೀಡುವ ಕುರಿತು ಮಾತನಾಡಿದ್ದರು.
ಇದೀಗ ಇಂಗ್ಲೆಂಡ್ ತಂಡದ ಪ್ರಮುಖ ಕೋಚ್ ಕ್ರಿಸ್ ಸಿಲ್ವರ್‌ವುಡ್ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ತಂಡದ ಕುರಿತು ಮಾತನಾಡಿದ್ದು ತಂಡದ ಕೆಲ ಆಟಗಾರರಿಗೆ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ವಿಶ್ರಾಂತಿ ನೀಡುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಾಲು ಸಾಲು ಟೆಸ್ಟ್ ಪಂದ್ಯಗಳಲ್ಲಿ ಆಟಗಾರರು ಯಾವುದೇ ವಿಶ್ರಾಂತಿಯಿಲ್ಲದೇ ಆಟವಾಡುತ್ತಿರುವುದು ನಿಜಕ್ಕೂ ಕಷ್ಟದ ಕೆಲಸ ಎಂದು ಹೇಳಿಕೆ ನೀಡಿರುವ ಇಂಗ್ಲೆಂಡ್ ತಂಡದ ಪ್ರಮುಖ ಕೋಚ್ ಕ್ರಿಸ್ ಸಿಲ್ವರ್‌ವುಡ್ ಈ ಕೆಳಕಂಡ ಇಂಗ್ಲೆಂಡ್ ಆಟಗಾರನನ್ನು ಓವಲ್ ಟೆಸ್ಟ್ ಪಂದ್ಯದಿಂದ ಹೊರಗಿಟ್ಟು ವಿಶ್ರಾಂತಿ ನೀಡುವ ಸೂಚನೆಯನ್ನು ನೀಡಿದ್ದಾರೆ.

ಜೇಮ್ಸ್ ಆ್ಯಂಡರ್ಸನ್ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಬೀಳುವ ಸಾಧ್ಯತೆ
ಹೀಗೆ ತಮ್ಮ ತಂಡದ ಆಟಗಾರರಿಗೆ ವಿಶ್ರಾಂತಿ ನೀಡುವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಇಂಗ್ಲೆಂಡ್ ತಂಡದ ಹೆಡ್ ಕೋಚ್ ಕ್ರಿಸ್ ಸಿಲ್ವರ್‌ವುಡ್ ಭಾರತದ ವಿರುದ್ಧ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಜೇಮ್ಸ್ ಆ್ಯಂಡರ್ಸನ್ ಅವರನ್ನು ತಂಡದಿಂದ ಹೊರಗಿಡುವ ಸುಳಿವನ್ನು ನೀಡಿದ್ದಾರೆ. ಪ್ರಸ್ತುತ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಆಟಗಾರರನ್ನು ನಾಲ್ಕನೇ ಟೆಸ್ಟ್ ಪಂದ್ಯದಿಂದ ಕೈಬಿಟ್ಟು ವಿಶ್ರಾಂತಿ ನೀಡುವುದಾಗಿ ಕ್ರಿಸ್ ಸಿಲ್ವರ್‌ವುಡ್ ತಿಳಿಸಿದ್ದಾರೆ. ಇಂಗ್ಲೆಂಡ್ ತಂಡದ ಹೆಡ್ ಕೋಚ್ ಕ್ರಿಸ್ ಸಿಲ್ವರ್‌ವುಡ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಜೇಮ್ಸ್ ಆ್ಯಂಡರ್ಸನ್ ಅವರನ್ನು ನಾಲ್ಕನೇ ಟೆಸ್ಟ್ ಪಂದ್ಯದಿಂದ ಕೈಬಿಟ್ಟು ವಿಶ್ರಾಂತಿ ನೀಡುವ ಚಿಂತನೆಯಲ್ಲಿ ಇರುವುದನ್ನು ತಿಳಿಸಿದ್ದಾರೆ.

ವಿಶ್ರಾಂತಿ ತೆಗೆದುಕೊಳ್ಳಲು ಆ್ಯಂಡರ್ಸನ್ ಒಪ್ಪುವುದು ಕಷ್ಟ
ಇಂಗ್ಲೆಂಡ್ ತಂಡದ ಹೆಡ್ ಕೋಚ್ ಕ್ರಿಸ್ ಸಿಲ್ವರ್‌ವುಡ್ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಿಂದ ಜೇಮ್ಸ್ ಆ್ಯಂಡರ್ಸನ್ ಅವರನ್ನು ಕೈಬಿಟ್ಟು ವಿಶ್ರಾಂತಿ ನೀಡುವ ಚಿಂತನೆಯಲ್ಲಿ ಇದ್ದಾರೆ. ಆದರೆ, ಜೇಮ್ಸ್ ಆ್ಯಂಡರ್ಸನ್ ಅವರನ್ನು ನಾಲ್ಕನೇ ಟೆಸ್ಟ್ ಪಂದ್ಯದಿಂದ ಕೈ ಬಿಡುವುದು ಅಷ್ಟು ಸುಲಭದ ಮಾತಲ್ಲ. ಏಕೆಂದರೆ ಸರಣಿ ಆರಂಭವಾಗುವ ಮುನ್ನವೇ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ಜೇಮ್ಸ್ ಆ್ಯಂಡರ್ಸನ್ ಭಾರತದ ವಿರುದ್ಧ ನಡೆಯಲಿರುವ ಎಲ್ಲಾ 5 ಟೆಸ್ಟ್ ಪಂದ್ಯಗಳಲ್ಲಿಯೂ ನಾನು ಆಡುತ್ತೇನೆ ಎಂದು ಹೇಳಿಕೆಯನ್ನು ನೀಡಿದ್ದರು. ಅಷ್ಟೆ ಅಲ್ಲದೇ ಸದ್ಯ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಉತ್ತಮ ಫಾರ್ಮ್‌ನಲ್ಲಿರುವ ಜೇಮ್ಸ್ ಆ್ಯಂಡರ್ಸನ್ ಅವರನ್ನು ನಾಲ್ಕನೇ ಟೆಸ್ಟ್ ಪಂದ್ಯದಿಂದ ಕೈ ಬಿಡುವ ಸಾಹಸಕ್ಕೆ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಸಮ್ಮತಿಸುವುದು ಅನುಮಾನ ಎಂದೇ ಹೇಳಬಹುದು. ಇನ್ನು ಜೇಮ್ಸ್ ಆ್ಯಂಡರ್ಸನ್ ಅವರನ್ನು ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವಂತೆ ಮನವೊಲಿಸುವುದು ತುಂಬಾ ಕಷ್ಟದ ಕೆಲಸ ಎಂದು ಇಂಗ್ಲೆಂಡ್ ತಂಡದ ಹೆಡ್ ಕೋಚ್ ಕ್ರಿಸ್ ಸಿಲ್ವರ್‌ವುಡ್ ಕೂಡ ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಜೇಮ್ಸ್ ಆ್ಯಂಡರ್ಸನ್
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳ ಪೈಕಿ ಅತ್ಯುತ್ತಮ ಬೌಲಿಂಗ್ ಮಾಡಿ ಮಿಂಚಿರುವ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಜೇಮ್ಸ್ ಆ್ಯಂಡರ್ಸನ್ 13 ವಿಕೆಟ್‍ಗಳನ್ನು ಪಡೆದುಕೊಂಡು ಇಂಗ್ಲೆಂಡ್ ಗೆಲುವಿನಲ್ಲಿ ಅತೀ ದೊಡ್ಡ ಪಾತ್ರವನ್ನು ನಿರ್ವಹಿಸಿದ್ದಾರೆ. ಮೊದಲ 3 ಪಂದ್ಯಗಳ ಪೈಕಿ ಒಟ್ಟು 116.3 ಓವರ್‌ಗಳನ್ನು ಎಸೆದಿರುವ ಜೇಮ್ಸ್ ಆ್ಯಂಡರ್ಸನ್ 13 ವಿಕೆಟ್ ಪಡೆದಿದ್ದು ಯಾವುದೇ ಹೊಸ ಬೌಲರ್‌ಗೂ ಕಡಿಮೆ ಇಲ್ಲದ ರೀತಿ ಅದೇ ಉತ್ಸಾಹದೊಂದಿಗೆ ಪ್ರದರ್ಶನವನ್ನು ನೀಡುತ್ತಿದ್ದಾರೆ. ಇದೇ ರೀತಿಯ ಪ್ರದರ್ಶನವನ್ನು ಸರಣಿಯುದ್ದಕ್ಕೂ ಜೇಮ್ಸ್ ಆ್ಯಂಡರ್ಸನ್ ಮುಂದುವರೆಸಿದರೆ ಆ್ಯಂಡರ್ಸನ್ ವೃತ್ತಿ ಜೀವನದಲ್ಲಿ ಈ ಸರಣಿ ಮುಂದಿನ ದಿನಗಳಲ್ಲಿ ನೆನಪಿಟ್ಟುಕೊಳ್ಳುವಂತಹ ಸರಣಿ ಆಗುವುದು ಖಚಿತ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications