ತೃತೀಯ ಟೆಸ್ಟ್ ಗೆಲುವಿನ ಹಿಂದಿನ ಕಾರಣ ತಿಳಿಸಿದ ಇಂಗ್ಲೆಂಡ್ ತಂಡದ ಹೆಡ್ ಕೋಚ್

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿದ್ದ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟೆಸ್ಟ್ ಪಂದ್ಯದಲ್ಲಿ 76 ರನ್‌ಗಳ ಇನ್ನಿಂಗ್ಸ್ ಸೋಲನ್ನು ಅನುಭವಿಸುವುದರ ಮೂಲಕ ಸರಣಿಯಲ್ಲಿ ಮೊದಲನೇ ಸೋಲನ್ನು ಅನುಭವಿಸಿತು.
ಭಾರತ ಮತ್ತು ಇಂಗ್ಲೆಂಡ್ ನಡುವೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಕೊನೆಯ ದಿನದವರೆಗೂ ಪಂದ್ಯದ ಮೇಲೆ ಹಿಡಿತವನ್ನು ಸಾಧಿಸಿತ್ತು. ಆದರೆ ಕೊನೆಯ ದಿನದಲ್ಲಿ ಭಾರತೀಯ ಬೌಲರ್‌ಗಳ ಅತ್ಯದ್ಭುತ ಆಟದ ಮುಂದೆ ಮಂಕಾದ ಇಂಗ್ಲೆಂಡ್ ತಂಡದ ಆಟಗಾರರು ಗೆಲ್ಲುವ ಪಂದ್ಯವನ್ನು ಕೊನೆಯ ದಿನದಂದು ಕೈಚೆಲ್ಲಿದರು. ಲಾರ್ಡ್ಸ್ ಅಂಗಳದಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 151 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿತ್ತು.
ಲಾರ್ಡ್ಸ್ ಅಂಗಳದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಎರಡೂ ತಂಡಗಳ ಆಟಗಾರರ ನಡುವೆ ನಡೆದ ಮಾತಿನ ಚಕಮಕಿಯಿಂದಲೂ ಸಹ ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿತ್ತು. ಹೀಗೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳ ಆಟಗಾರರು ಸಹ ಕೋಪದಿಂದ ಹೆಚ್ಚಾಗಿ ವರ್ತಿಸಿದ್ದು ಕಂಡುಬಂದಿತ್ತು. ಲಾರ್ಡ್ಸ್ ಪಂದ್ಯದ ಸೋಲಿನ ನಂತರ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದಲ್ಲಿ ಹೇಗಾದರೂ ಜಯವನ್ನು ಸಾಧಿಸಬೇಕೆಂಬ ಯೋಜನೆಯಿಂದ ಕಣಕ್ಕಿಳಿದ ಇಂಗ್ಲೆಂಡ್ ಟೀಮ್ ಇಂಡಿಯಾವನ್ನು ಸದೆಬಡಿದು ಸರಣಿಯಲ್ಲಿ ಸಮಬಲವನ್ನು ಸಾಧಿಸಿದೆ.
ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಇಂಗ್ಲೆಂಡ್ ಗೆಲುವು ಸಾಧಿಸಿದ ನಂತರ ಇಂಗ್ಲೆಂಡ್ ತಂಡದ ಹೆಡ್ ಕೋಚ್ ಸಿಲ್ವರ್‌ವುಡ್ ಪಂದ್ಯದ ಕುರಿತು ಮಾತನಾಡಿದ್ದು ಲೀಡ್ಸ್ ಅಂಗಳದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಲು ಕಾರಣವೇನೆಂಬುದನ್ನು ಈ ಕೆಳಕಂಡಂತೆ ಬಿಚ್ಚಿಟ್ಟಿದ್ದಾರೆ..

ಕೋಪ ತಗ್ಗಿಸಿಕೊಂಡಿದ್ದೇ ಗೆಲುವಿಗೆ ಕಾರಣ
ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಆಟಗಾರರು ಕೋಪವನ್ನು ತಗ್ಗಿಸಿಕೊಂಡು ಜವಾಬ್ದಾರಿಯುತ ಆಟವನ್ನು ಪ್ರದರ್ಶಿಸಿದ್ದೇ ಪಂದ್ಯ ಗೆಲ್ಲಲು ಪ್ರಮುಖ ಕಾರಣ ಎಂದು ಇಂಗ್ಲೆಂಡ್ ತಂಡದ ಹೆಡ್ ಕೋಚ್ ಸಿಲ್ವರ್‌ವುಡ್ ಅಭಿಪ್ರಾಯಪಟ್ಟಿದ್ದಾರೆ. ದ್ವಿತೀಯ ಟೆಸ್ಟ್ ಪಂದ್ಯದಂತೆ ಹೇಡಿಂಗ್ಲೆ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರರು ರೋಷಾವೇಶದ ಪ್ರದರ್ಶನವನ್ನು ನೀಡಲಿಲ್ಲ ಬದಲಾಗಿ ಟೀಂ ಇಂಡಿಯಾ ಆಟಗಾರರ ಮೇಲೆ ಒತ್ತಡವನ್ನು ಹೇರುತ್ತಾ ಪಂದ್ಯವನ್ನು ತಮ್ಮ ಕೈವಶ ಮಾಡಿಕೊಂಡರು ಎಂದು ಸಿಲ್ವರ್‌ವುಡ್ ತಮ್ಮ ತಂಡದ ಆಟಗಾರರನ್ನು ಹೊಗಳಿದ್ದಾರೆ.

ಹೆಡಿಂಗ್ಲೆ ಪಂದ್ಯ ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದ ಇಂಗ್ಲೆಂಡ್
ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತು ಹಾಗೂ ಲಾರ್ಡ್ಸ್ ಅಂಗಳದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ತಂಡ ಸೋಲು ಕಂಡಿತ್ತು. ಹೀಗೆ ಸರಣಿಯಲ್ಲಿ ಗೆಲುವಿನ ಖಾತೆ ತೆರೆಯದೇ ಹಿನ್ನಡೆಯನ್ನು ಅನುಭವಿಸಿದ್ದ ಇಂಗ್ಲೆಂಡ್ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟೆಸ್ಟ್ ಪಂದ್ಯದಲ್ಲಿ 76 ರನ್‌ಗಳ ಇನ್ನಿಂಗ್ಸ್ ಗೆಲುವನ್ನು ದಾಖಲಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದ್ದು ಕುತೂಹಲವನ್ನು ಸಾಕಷ್ಟು ಹೆಚ್ಚಿಸಿದೆ.

ಮೂರನೇ ಟೆಸ್ಟ್ ಪಂದ್ಯ ಯಾವಾಗ ಮತ್ತು ಎಲ್ಲಿ?
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು ಎರಡೂ ತಂಡಗಳು 1-1 ಸಮಬಲ ಸಾಧಿಸಿವೆ. ಹೀಗಾಗಿ ಸರಣಿ ಮತ್ತಷ್ಟು ಕುತೂಹಲಕಾರಿ ಘಟ್ಟವನ್ನು ತಲುಪಿದ್ದು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದರ ಕುರಿತು ಈಗಾಗಲೇ ಚರ್ಚೆಗಳು ಆರಂಭವಾಗಿವೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಪ್ರತಿಷ್ಟಿತ ಓವಲ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 2ರಿಂದ ಸೆಪ್ಟೆಂಬರ್ 6 ರವರೆಗೆ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications