ಅಶ್ವಿನ್ ಬರಲಿ ಬಿಡಿ; 4ನೇ ಟೆಸ್ಟ್‌ನಲ್ಲಿ ಅಶ್ವಿನ್ ಕಣಕ್ಕಿಳಿಯುವ ಬಗ್ಗೆ ಪ್ರತಿಕ್ರಿಯೆ ನೀಡಿದ ಜೋ ರೂಟ್!

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಓವಲ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 2 ರಂದು ಆರಂಭವಾಗಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಮೊದಲ ಮೂರು ಪಂದ್ಯಗಳು ಈಗಾಗಲೇ ಮುಗಿದಿದ್ದು, ಭಾರತ ಮತ್ತು ಇಂಗ್ಲೆಂಡ್ ತಂಡಗಳೆರಡೂ ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ.
ಲಾರ್ಡ್ಸ್ ಅಂಗಳದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅತ್ಯದ್ಭುತ ಪ್ರದರ್ಶನವನ್ನು ನೀಡುವುದರ ಮೂಲಕ 151 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದ್ದ ಟೀಮ್ ಇಂಡಿಯಾ ನಂತರ ಇಂಗ್ಲೆಂಡ್ ವಿರುದ್ಧ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋಲನ್ನು ಅನುಭವಿಸಿತು. ಹೌದು, ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಇನ್ನಿಂಗ್ಸ್ ಸಹಿತ 76 ರನ್‌ಗಳ ಸೋಲನ್ನು ಅನುಭವಿಸಿದ ಟೀಮ್ ಇಂಡಿಯಾ ಸದ್ಯ ಇಂಗ್ಲೆಂಡ್ ವಿರುದ್ಧ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಯ ಗಳಿಸಲು ಸಾಕಷ್ಟು ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ.
ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಆರಂಭವಾದಾಗಿನಿಂದಲೂ ತಂಡದಲ್ಲಿ ರವಿಚಂದ್ರನ್ ಅಶ್ವಿನ್ ಅವರಿಗೆ ಸ್ಥಾನ ನೀಡಿಲ್ಲ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಆರಂಭವಾದಾಗಿನಿಂದಲೂ ಚರ್ಚೆ ಮತ್ತು ಟೀಕೆಗಳು ನಡೆಯುತ್ತಿದ್ದು ಹೆಡಿಂಗ್ಲೆ ಟೆಸ್ಟ್ ಪಂದ್ಯದ ಸೋಲಿನ ನಂತರ ರವಿಚಂದ್ರನ್ ಅಶ್ವಿನ್ ಅವರಿಗೆ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಟೀಮ್ ಇಂಡಿಯಾ ನೀಡಲಿದೆ ಎಂಬ ಸುದ್ದಿ ಹೆಚ್ಚಾಗಿ ಹರಿದಾಡುತ್ತಿದೆ.
ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಭಾಗವಹಿಸುವಿಕೆಯ ಸುದ್ದಿಯ ಕುರಿತು ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಕೂಡ ಪ್ರತಿಕ್ರಿಯೆ ನೀಡಿದ್ದು ಈ ಕೆಳಕಂಡಂತೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಅಶ್ವಿನ್ ಬರಲಿ ಅವರ ಸವಾಲುಗಳನ್ನು ಎದುರಿಸುತ್ತೇವೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಭಾಗವಹಿಸಲಿದ್ದಾರೆ ಎಂಬುದರ ಕುರಿತು ಪಂದ್ಯಕ್ಕೂ ಮುನ್ನ ನಡೆದಿರುವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ 'ಎದುರಾಳಿ ತಂಡಕ್ಕೆ ಯಾವುದೇ ನೂತನ ಆಟಗಾರ ಬರಲಿ, ಯಾವುದೇ ರೀತಿಯ ಸವಾಲುಗಳನ್ನು ಹಾಕಲಿ ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆ. ಯಾರೇ ಬಂದರೂ ಸಹ ಕೊನೆಯಲ್ಲಿ ಉಳಿಯುವುದು ಆಟಗಾರನ ಎಸೆತವನ್ನು ಸರಿಯಾದ ರೀತಿಯಲ್ಲಿ ಎದುರಿಸಬೇಕಾದ ವಿಧಾನ ಮಾತ್ರ' ಎಂದು ಹೇಳಿಕೆ ನೀಡಿದ್ದಾರೆ.

ರವೀಂದ್ರ ಜಡೇಜಾ ಬದಲು ಅಶ್ವಿನ್ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ
ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟೆಸ್ಟ್ ಪಂದ್ಯದ ವೇಳೆ ಗಾಯಕ್ಕೆ ಒಳಗಾಗಿರುವ ರವೀಂದ್ರ ಜಡೇಜಾ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ರವಿಚಂದ್ರನ್ ಅಶ್ವಿನ್ ರವೀಂದ್ರ ಜಡೇಜಾ ಸ್ಥಾನವನ್ನು ತುಂಬಲಿದ್ದಾರೆ ಎಂಬ ಸುದ್ದಿ ಹೆಚ್ಚಾಗಿ ಹರಿದಾಡುತ್ತಿದೆ.

ದಾಖಲೆಯೊಂದರ ಸನಿಹದಲ್ಲಿ ರವಿಚಂದ್ರನ್ ಅಶ್ವಿನ್
ಓವಲ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದುಕೊಂಡರೆ ದಾಖಲೆಯೊಂದನ್ನು ಸೃಷ್ಟಿಸುವ ಸಾಧ್ಯತೆಯಿದೆ. ಹೌದು, ಟೆಸ್ಟ್ ಕ್ರಿಕೆಟ್‍ನಲ್ಲಿ ಇದುವರೆಗೂ ಒಟ್ಟು 413 ವಿಕೆಟ್‍ಗಳನ್ನು ಪಡೆದಿರುವ ಅಶ್ವಿನ್ ಅತಿ ಹೆಚ್ಚು ಟೆಸ್ಟ್ ವಿಕೆಟ್‍ಗಳನ್ನು ಪಡೆದ ಭಾರತೀಯ ಸ್ಪಿನ್ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ ಹಾಗೂ 417 ವಿಕೆಟ್‍ಗಳನ್ನು ಪಡೆದುಕೊಂಡಿರುವ ಹರ್ಭಜನ್ ಸಿಂಗ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದುಕೊಂಡು 5 ವಿಕೆಟ್ ಪಡೆದುಕೊಂಡರೆ ಹರ್ಭಜನ್ ಸಿಂಗ್ ಅವರನ್ನು ಸರಿಗಟ್ಟಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಭಾರತೀಯ ಸ್ಪಿನ್ ಬೌಲರ್‌ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ದ್ವಿತೀಯ ಸ್ಥಾನಕ್ಕೇರಲಿದ್ದಾರೆ. ಇನ್ನು ಈ ದಾಖಲೆಯ ಪಟ್ಟಿಯಲ್ಲಿ 619 ವಿಕೆಟ್‍ಗಳನ್ನು ಪಡೆದುಕೊಂಡಿರುವ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications