5ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟ, ಮರಳಿದ ಜೋಸ್ ಬಟ್ಲರ್

ಭಾರತ ಹಾಗೂ ಇಂಗ್ಲೆಂಡ್ ನಡುವುನ ಟೆಸ್ಟ್ ಸರಣಿಯ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡವನ್ನು ಹೆಸರಿಸಲಾಗಿದೆ. ಇಂಗ್ಲೆಂಡ್ ತಂಡಕ್ಕೆ ನಿರ್ಣಾಯಕವಾಗಿರುವ ಈ ಪಂದ್ಯಕ್ಕೆ ಇಬ್ಬರು ಪ್ರಮುಖ ಆಟಗಾರರು ಮರಳಿದ್ದಾರೆ. ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಜೋಸ್ ಬಟ್ಲರ್ ಹಾಗೂ ಸ್ಪಿನ್ನರ್ ಜ್ಯಾಕ್ ಲೀಚ್ ತಂಡಕ್ಕೆ ವಾಪಾಸಾಗಿದ್ದಾರೆ. ಲೀಚ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಸ್ಕ್ವಾಡ್‌ನ ಭಾಗವಾಗಿದ್ದರು. ಆದರೆ ಆಡುವ ಬಳಗದಲ್ಲಿ ಅವಕಾಶ ದೊರೆತಿರಲಿಲ್ಲ. ಕಳೆದ ಮಾರ್ಚ್‌ನಿಂದ ಜಾಕ್ ಲೀಚ್ ಆಡುವ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.

ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ಭಾರತ ಎರಡು ಗೆಲುವು ಹಾಗೂ ಒಂದು ಸೋಲು ಅನುಭವಿಸಿದ್ದು ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆಯಲ್ಲಿದೆ. ಹೀಗಾಗಿ ಇಂಗ್ಲೆಂಡ್ ತಂಡ ಸರಣಿಯನ್ನು ಸಮಬಲಗೊಳಿಸಲು ಮಾತ್ರವೇ ಅವಕಾಶವಿದೆ. ಇದಕ್ಕಾಗಿ ಅಂತಿಮ ಪಂದ್ಯವನ್ನು ಜೋ ರೂಟ್ ಬಳಗ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಹೀಗಾಗಿ ಅತ್ಯುತ್ತಮ ಆಟಗಾರರ ಬಳಗದೊಮದಿಗೆ ಆಡಲು ಇಂಗ್ಲೆಂಡ್ ಪಡೆ ಸಿದ್ಧತೆಯನ್ನು ನಡೆಸುತ್ತಿದೆ.

ರೋಹಿತ್ ಶರ್ಮಾಗೆ ಗಾಯ, 5ನೇ ಟೆಸ್ಟ್‌ನಲ್ಲಿ ಆಡೋ ಬಗ್ಗೆ ಸುಳಿವಿತ್ತ ಹಿಟ್‌ಮ್ಯಾನ್ರೋಹಿತ್ ಶರ್ಮಾಗೆ ಗಾಯ, 5ನೇ ಟೆಸ್ಟ್‌ನಲ್ಲಿ ಆಡೋ ಬಗ್ಗೆ ಸುಳಿವಿತ್ತ ಹಿಟ್‌ಮ್ಯಾನ್

ಇಂಗ್ಲೆಂಡ್ ತಂಡದ ಅನುಭವಿ ಆಟಗಾರ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಿದ ಬಳಿಕ ವಿರಾಮವನ್ನು ಪಡೆದುಕೊಂಡಿದ್ದರು. ಬಟ್ಲರ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಕಾರಣ ನಾಲ್ಕನೇ ಪಂದ್ಯದಿಂದ ಹೊರಗುಳಿದಿದ್ದರು. ಈಗ ಬಟ್ಲರ್ ಐದನೇ ಪಂದ್ಯಕ್ಕೆ ಸಿದ್ಧರಾಗಿದ್ದಾರೆ. ಜೋಸ್ ಬಟ್ಲರ್ ಅಲಭ್ಯತೆಯಲ್ಲಿ ನಾಲ್ಕನೇ ಪಂದ್ಯದಲ್ಲಿ ಜಾನಿ ಬೈರ್‌ಸ್ಟೋವ್ ಇಂಗ್ಲೆಂಡ್ ತಂಡದ ಪರವಾಗಿ ವಿಕೆಟ್ ಕೀಪರ್ ಜವಾಬ್ಧಾರಿಯನ್ನು ನಿರ್ವಹಿಸಿದ್ದಾರೆ.

ಓವಲ್ ಅಂಗಳದಲ್ಲಿ ಇಂಗ್ಲೆಂಡ್‌ಗೆ ಭಾರೀ ಆಘಾತ: ಹೆಡಿಂಗ್ಲೆ ಪಂದ್ಯವನ್ನು ಗೆದ್ದು ಸಂಭ್ರಮದಲ್ಲಿದ್ದ ಇಂಗ್ಲೆಂಡ್ ತಂಡ ಅದೇ ಉತ್ಸಾಹದಲ್ಲಿ ಲಂಡನ್‌ನ ಓವಲ್ ಮೈದಾನಕ್ಕೆ ಇಳಿದಿತ್ತು. ಐವತ್ತು ವರ್ಷಗಳಿಂದ ಭಾರತ ಗೆಲುವನ್ನೇ ಕಾಣದ ಓವಲ್ ಅಂಗಳದಲ್ಲಿಯೂ ಇಂಗ್ಲೆಂಡ್ ತಂಡ ಮೇಲುಗೈ ಸಾಧಿಸುವ ಹುಮ್ಮಸ್ಸಿನಲ್ಲಿತ್ತು. ಇದಕ್ಕೆ ಪೂರಕವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಬೌಲಿಂಗ್‌ನಲ್ಲಿ ಮಿಂಚಿತ್ತು. ಭಾರತ ತಂಡವನ್ನು 191 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿತ್ತು. ನಂತರ ಮೊದಲ ಇನ್ನಿಂಗ್ಸ್‌ನ ಬ್ಯಾಟಿಂಗ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿದ ನಂತರ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಹೋರಾಟದ ಪರಿಣಾಮವಾಗಿ ಇಂಗ್ಲೆಂಡ್ 99 ರನ್‌ಗಳ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

ಓವಲ್ ಟೆಸ್ಟ್ ಪಂದ್ಯದಲ್ಲಿ ಬೃಹತ್ ದಾಖಲೆ ನಿರ್ಮಿಸಿದ ಎರಡೂ ತಂಡಗಳ ನಾಲ್ವರು ಆಟಗಾರರುಓವಲ್ ಟೆಸ್ಟ್ ಪಂದ್ಯದಲ್ಲಿ ಬೃಹತ್ ದಾಖಲೆ ನಿರ್ಮಿಸಿದ ಎರಡೂ ತಂಡಗಳ ನಾಲ್ವರು ಆಟಗಾರರು

ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ಪರಾಕ್ರಮ: ಇನ್ನಿ ಮೊದಲ ಇನ್ನಿಂಗ್ಸ್‌ನಲ್ಲಿ 99 ರನ್‌ಗಳ ಹಿನ್ನಡೆ ಅನುಬವಿಸಿದ ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆರಂಭಿಕ ಆಟಗಾರರಿಂದ ಹಿಡಿದು ಟೀಮ್ ಇಂಡಿಯಾದ ಬಹುತೇಕ ಎಲ್ಲಾ ಆಟಗಾರರು ಕೂಡ ಅದ್ಭುತ ಪ್ರದರ್ಶನ ನೀಡಿದರು. ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ತಂಡದ ಬೃಹತ್ ಮೊತ್ತಕ್ಕೆ ಮುನ್ನುಡು ಬರೆದರು. ಬಳಿಕ ಶಾರ್ದೂಲ್ ಠಾಕೂರ್ ಹಾಗೂ ರಿಷಭ್ ಪಂತ್ ಕೂಡ ಉತ್ತಮ ಪ್ರದರ್ಶನ ನೀಡಿ ಅರ್ಧ ಶತಕದ ಕೊಡುಗೆ ನೀಡಿದರು, ಈ ಮೂಲಕ ಭಾರತ 466 ರನ್‌ಗಳನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಗಳಿಸಿ ಇಂಗ್ಲೆಂಡ್‌ಗೆ ಎರಡನೇ ಇನ್ನಿಂಗ್ಸ್‌ನಲ್ಲಿ 367 ರನ್‌ಗಳ ದಾಖಲೆಯ ಗುರಿಯನ್ನು ನೀಡಿತ್ತು. ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಬೌಲಿಂಗ್‌ನಲ್ಲಿಯೂ ಅಭೂತವೂರ್ವ ಯಶಸ್ಸು ಸಾಧಿಸಿತ್ತು. ಮೊದಲ ವಿಕೆಟ್‌ಗೆ ಭರ್ಜರಿ 100 ರನ್‌ಗಳ ಜೊತೆಯಾಟ ನೀಡಿದ ಇಂಗ್ಲೆಂಡ್ ದಾಂಡಿಗರು ಬಳಿಕ ಕುಸಿಯುತ್ತಾ ಸಾಗಿದರು. ಟೀಮ್ ಇಂಡಿಯಾದ ಸಾಂಘಿಕ ಪ್ರದರ್ಶನಕ್ಕೆ ಕೇವಲ 210 ರನ್‌ಗಳಿಗೆ ಇಂಗ್ಲೆಂಡ್ ಆಲೌಟ್ ಆಗಿತ್ತು. ಈ ಮೂಲಕ ಟೀಮ್ ಇಂಡಿಯಾ 157 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಐದನೇ ಪಂದ್ಯಕ್ಕೆ ಆಯ್ಕೆಯಾಗಿರುವ ಇಂಗ್ಲೆಂಡ್ ತಂಡ: ಜೋ ರೂಟ್ (ನಾಯಕ), ಮೊಯೀನ್ ಅಲಿ, ಜೇಮ್ಸ್ ಆಂಡರ್ಸನ್, ಜಾನಿ ಬೈರ್‌ಸ್ಟೊವ್ (ವಿಕೆಟ್ ಕೀಪರ್), ರೋರಿ ಬರ್ನ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ಹಸೀಬ್ ಹಮೀದ್, ಡಾನ್ ಲಾರೆನ್ಸ್, ಜ್ಯಾಕ್ ಲೀಚ್, ಡೇವಿಡ್ ಮಲನ್, ಕ್ರೇಗ್ ಓವರ್‌ಟನ್, ಓಲ್ಲಿ ಪೋಪ್, ಒಲ್ಲಿ ರಾಬಿನ್ಸನ್ , ಕ್ರಿಸ್ ವೋಕ್ಸ್, ಮಾರ್ಕ್ ವುಡ್

Kohli ಅವರ ಈ celebration ಇಷ್ಟರ ಮಟ್ಟಿಗೆ ಚರ್ಚೆಗೆ ಗ್ರಾಸವಾಗಿದೆ | Oneindia Kannada

ಸರಣಿಯ ಅಂತಿಮ ಪಂದ್ಯ ಓಲ್ಡ್ ಟ್ರಾಫಾರ್ಡ್‌ನಲ್ಲಿ ಸೆಪ್ಟೆಂಬರ್ 10ರಿಂದ ಆರಂಭವಾಗಲಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Tuesday, September 7, 2021, 17:59 [IST]
Other articles published on Sep 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X