ಭಾರತ ವಿರುದ್ಧ ನಡೆಯುತ್ತಿರುವ 5 ಟೆಸ್ಟ್‌ಗಳ ಸರಣಿಯಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅನುಪಸ್ಥಿತಿಗೆ ಬಗ್ಗೆ ಮಾತನಾಡಿದ್ದಾರೆ. ವಿರಾಟ್ ಕೊಹ್ಲಿ ಆಡದಿರುವುದು ಈ ಸರಣಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಬೆನ್ ಸ್ಟೋಕ್ಸ್ ಹೇಳಿದ್ದಾರೆ.
ಸ್ಟೋಕ್ಸ್, ವಿರಾಟ್ ಕೊಹ್ಲಿ ಶೀಘ್ರದಲ್ಲೇ ಮೈದಾನಕ್ಕೆ ಮರಳುವುದನ್ನು ನೋಡಲು ಬಯಸುತ್ತಾರೆ ಎಂದು ತಿಳಿಸಿದ್ದಾರೆ. ಇದಕ್ಕೂ ಮೊದಲು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ವಿರಾಟ್ ಕೊಹ್ಲಿ ಐದು ಟೆಸ್ಟ್‌ಗಳ ಸರಣಿಯಿಂದ ತಮ್ಮ ಹೆಸರನ್ನು ಹಿಂಪಡೆದಿದ್ದರು.

ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ಗೂ ಮುನ್ನ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಬೆನ್ ಸ್ಟೋಕ್ಸ್ ವಿರಾಟ್ ಕೊಹ್ಲಿಯನ್ನು ಸಾಕಷ್ಟು ಹೊಗಳಿದ್ದಾರೆ. ವಿರಾಟ್ ಕೊಹ್ಲಿ ಈ ಸರಣಿಯಲ್ಲಿ ಆಡುತ್ತಿಲ್ಲ ಎಂದು ಬೆನ್ ಸ್ಟೋಕ್ಸ್ ಹೇಳಿದ್ದಾರೆ.
ಯಾವಾಗಲೂ ಉತ್ತಮ ಆಟಗಾರರ ವಿರುದ್ಧ ಆಡಲು ಬಯಸುತ್ತೇವೆ. ಅದರಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ವಿರಾಟ್ ಕೊಹ್ಲಿ ಆದಷ್ಟು ಬೇಗ ಮೈದಾನಕ್ಕೆ ಮರಳುವುದನ್ನು ನೋಡಲು ಬಯಸುತ್ತೇನೆ. ಮೈದಾನದಲ್ಲಿ ವಿರಾಟ್ ಕೊಹ್ಲಿ ಆಡುವುದನ್ನು ನೋಡಲು ಎಲ್ಲರೂ ಬಯಸುತ್ತಾರೆ. ವಿರಾಟ್ ಕೊಹ್ಲಿ ಮತ್ತೆ ಮೈದಾನಕ್ಕೆ ಮರಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಸರಣಿಯ ಆರಂಭದ ಮೊದಲು, ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದರು. ವಿರಾಟ್ ಕೊಹ್ಲಿ ಸರಣಿಯ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ಮರಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ವಿರಾಟ್ ಕೊಹ್ಲಿ ಇಡೀ ಸರಣಿಯಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಅವರ ಮನವಿಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಅವರು ಆಡದಿರಲು ಕಾರಣವನ್ನು ಇನ್ನು ಸಹ ಬಹಿರಂಗ ಪಡಿಸಿಲ್ಲ.
ಇದೇ ವೇಳೆ ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ತಂಡ ಭಾರತಕ್ಕೆ ಕಠಿಣ ಪೈಪೋಟಿ ನೀಡುತ್ತಿರುವುದು ಕಂಡು ಬರುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಇಂಗ್ಲೆಂಡ್ ಗೆದ್ದು 1-0 ಮುನ್ನಡೆ ಸಾಧಿಸಿತ್ತು. ಆದರೆ ಎರಡನೇ ಟೆಸ್ಟ್‌ನಲ್ಲಿ ಭಾರತ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿದೆ. ಆದರೆ ರಾಜ್‌ಕೋಟ್‌ನಲ್ಲಿ ಟೆಸ್ಟ್ ವೃತ್ತಿಜೀವನದ 100 ನೇ ಪಂದ್ಯವನ್ನು ಆಡಲಿರುವ ಸ್ಟೋಕ್ಸ್, ಖಂಡಿತವಾಗಿಯೂ ಗೆಲ್ಲುವ ಮೂಲಕ ಪಂದ್ಯವನ್ನು ಸ್ಮರಣೀಯವಾಗಿಸಲು ಬಯಸುತ್ತಾರೆ.
ರಾಜ್‌ಕೋಟ್‌ನಲ್ಲಿ ನಡೆಯಲಿರುವ ಭಾರತ ವಿರುದ್ಧದ ಮೂರನೇ ಟೆಸ್ಟ್‌ಗೆ ಇಂಗ್ಲೆಂಡ್ ತನ್ನ ಆಡುವ ತಂಡವನ್ನು ಪ್ರಕಟಿಸಿದೆ. ರಜೆ ಮುಗಿಸಿ ಅಬುಧಾಬಿಯಿಂದ ವಾಪಸಾದ ಈ ತಂಡ ಈ ಪಂದ್ಯಕ್ಕೆ ಅನುಭವಿ ಮಾರ್ಕ್ ವುಡ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಸ್ಪಿನ್ನರ್ ಶೋಯೆಬ್ ಬಶೀರ್ ಗೆ ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ಪಡೆದಿಲ್ಲ.
ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ಸಿ), ಬೆನ್ ಫೋಕ್ಸ್ (ವಾಕ್), ಟಾಮ್ ಹಾರ್ಟ್ಲಿ, ಜೇಮ್ಸ್ ಆಂಡರ್ಸನ್, ರೆಹಾನ್ ಅಹ್ಮದ್, ಮಾರ್ಕ್ ವುಡ್.