IND vs ENG ಎಡ್ಜ್‌ಬಾಸ್ಟನ್ ಟೆಸ್ಟ್: ಕ್ರೀಡಾಂಗಣದಲ್ಲಿ 'ವಿ ಮಿಸ್ ಧೋನಿ' ಪೋಸ್ಟರ್ ಪ್ರದರ್ಶಿಸಿದ ಅಭಿಮಾನಿ

ಸದ್ಯ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಆತಿಥೇಯ ಇಂಗ್ಲೆಂಡ್ ವಿರುದ್ಧ ಕಳೆದ ವರ್ಷದಿಂದ ಮುಂದೂಡಲ್ಪಟ್ಟ ಐದನೇ ಟೆಸ್ಟ್ ಪಂದ್ಯದಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಹೌದು, ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಕಳೆದ ವರ್ಷ ಆಯೋಜನೆಯಾಗಿದ್ದ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಕೊರೋನಾವೈರಸ್ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡು ಈ ವರ್ಷಕ್ಕೆ ಮುಂದೂಡಲ್ಪಟ್ಟಿತ್ತು.
ಈ ಪಂದ್ಯ ಇಂದು ( ಜುಲೈ 1 ) ಎಡ್ಜ್ ಬಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಗಿದ್ದು ಜುಲೈ 5ಕ್ಕೆ ಮುಕ್ತಾಯಗೊಳ್ಳಲಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡು ಟೀಮ್ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಹೀಗೆ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆರಂಭಿಸಿ ತನ್ನ ಮೊದಲ 5 ವಿಕೆಟ್‍ಗಳನ್ನು 98 ರನ್‌ಗಳಿಗೆ ಕಳೆದುಕೊಂಡು ಆರಂಭಿಕ ಆಘಾತವನ್ನು ಅನುಭವಿಸಿತ್ತು ಹಾಗೂ ನಂತರ ಆರನೇ ವಿಕೆಟ್‍ಗೆ ಜತೆಯಾದ ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ ಜೋಡಿ ಉತ್ತಮ ಪ್ರದರ್ಶನ ನೀಡಿದ್ದು, ಟೀಮ್ ಇಂಡಿಯಾ ತುಸು ಚೇತರಿಕೆಯನ್ನು ಕಂಡಿದೆ.
ಇದೇ ಸಂದರ್ಭದಲ್ಲಿ ಪಂದ್ಯವನ್ನು ವೀಕ್ಷಿಸಲು ಮೈದಾನಕ್ಕೆ ಬಂದಿದ್ದ ಟೀಮ್ ಇಂಡಿಯಾದ ಅಭಿಮಾನಿಗಳು 'ವಿ ಮಿಸ್ ಎಂಎಸ್ ಧೋನಿ' ಎಂಬ ಬರಹವುಳ್ಳ ಪೋಸ್ಟರ್ ಹಿಡಿದು ಪ್ರದರ್ಶಿಸಿದ್ದಾರೆ. ಈ ಪೋಸ್ಟರ್ ಅನ್ನು ಪಂದ್ಯದ ಛಾಯಾಗ್ರಾಹಕ ಸೆರೆಹಿಡಿದಿದ್ದು ಸದ್ಯ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
MS Dhoni fan in Edgbaston. pic.twitter.com/zmgXkDZHsG
— Johns. (CricCrazyJohns) July 1, 2022
ವರ್ಷಗಳು ಉರುಳಿದರೂ ಇನ್ನೂ ಕಡಿಮೆಯಾಗಿಲ್ಲ ಎಂಎಸ್ ಧೋನಿ ಕ್ರೇಜ್
ಎಂಎಸ್ ಧೋನಿ ಅಂತಿಮವಾಗಿ ಅಂತರರಾಷ್ಟ್ರೀಯ ಪಂದ್ಯವನ್ನಾಡಿದ್ದು 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ. ಈ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿದಿದ್ದ ಎಂ ಎಸ್ ಧೋನಿ ನಂತರ ಯಾವುದೇ ಅಂತರರಾಷ್ಟ್ರೀಯ ಪಂದ್ಯದಲ್ಲಿಯೂ ಕೂಡ ಕಣಕ್ಕಿಳಿಯಲಿಲ್ಲ. ಹೀಗೆ ಎಂಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಹೊಂದಿ ಹೊರಗುಳಿದಿದ್ದರೂ ಸಹ ಅವರ ಅಭಿಮಾನಿಗಳು ಮಾತ್ರ ಕ್ರೀಡಾಂಗಣದಲ್ಲಿ ಅವರ ಜಪ ಮಾಡುವುದನ್ನು ಬಿಟ್ಟಿಲ್ಲ. ಸದ್ಯ ಎಂ ಎಸ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತಮ್ಮನ್ನು ತಾವು ಸಕ್ರಿಯರಾಗಿ ಇರಿಸಿಕೊಂಡಿದ್ದಾರೆ.

ಪಂದ್ಯದ ಆಡುವ ಬಳಗಗಳು
ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಈ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿರುವ ಆಡುವ ಬಳಗಗಳು ಕೆಳಕಂಡಂತಿವೆ.
ಭಾರತ: ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ(ನಾಯಕ)
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಒಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್(ನಾಯಕ), ಸ್ಯಾಮ್ ಬಿಲ್ಲಿಂಗ್ಸ್(ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್

ಪಂದ್ಯ ಗೆದ್ದರೆ ಇತಿಹಾಸ
ಇನ್ನು ಎಡ್ಜ್ ಬಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯವನ್ನು ಟೀಮ್ ಇಂಡಿಯಾ ಗೆದ್ದರೆ ಸರಣಿ ಕೈವಶ ಮಾಡಿಕೊಳ್ಳುವುದು ಮಾತ್ರವಲ್ಲದೇ ಕ್ರಿಕೆಟ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ದಾಖಲೆಯನ್ನು ಬರೆಯಲಿದೆ. ಹೌದು, ಭಾರತ ಈ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೂ ಇಂಗ್ಲೆಂಡ್ ತಂಡವನ್ನು ಒಟ್ಟು 7 ಪಂದ್ಯಗಳಲ್ಲಿ ಎದುರಿಸಿದ್ದು ಯಾವುದೇ ಪಂದ್ಯದಲ್ಲಿಯೂ ಕೂಡ ಸೋಲಿಸಲಾಗಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾವೇನಾದರೂ ಜಯ ಸಾಧಿಸಿದರೆ ಹೊಸ ಇತಿಹಾಸ ಸೃಷ್ಟಿಯಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications