ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ತಂಡದಿಂದ ಕೈಬಿಟ್ಟಿದ್ದರು, ಅವಕಾಶವಿರಲಿಲ್ಲ; ಲಾರ್ಡ್ಸ್ ಶತಕದ ಬಳಿಕ ಮನಬಿಚ್ಚಿ ಮಾತನಾಡಿದ ಕೆಎಲ್ ರಾಹುಲ್

IND vs ENG: Getting a hundred at Lords makes it special says KL Rahul

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಆಯೋಜನೆಯಾಗಿತ್ತು. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಬೇಕಿದ್ದ ಮಯಾಂಕ್ ಅಗರ್ವಾಲ್ ಗಾಯದ ಸಮಸ್ಯೆಗೆ ಒಳಗಾದ ಕಾರಣ ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕಾದ ಅನಿವಾರ್ಯತೆ ಎದುರಾಯಿತು. ಹೀಗಾಗಿ ಮಯಾಂಕ್ ಅಗರ್ವಾಲ್ ಸ್ಥಾನಕ್ಕೆ ಕೆಎಲ್ ರಾಹುಲ್ ಆಯ್ಕೆಯಾದರು. ಈ ಬಾರಿಯ ಐಪಿಎಲ್ ಮುಂದೂಡಲ್ಪಟ್ಟ ವೇಳೆಯಲ್ಲಿ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದರು.

ಭಾರತೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರ ಹಿಂದಿನ ಕೆಟ್ಟ ಕಾರಣವನ್ನು ಬಿಚ್ಚಿಟ್ಟ ಉನ್ಮುಕ್ತ್ ಚಂದ್!ಭಾರತೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರ ಹಿಂದಿನ ಕೆಟ್ಟ ಕಾರಣವನ್ನು ಬಿಚ್ಚಿಟ್ಟ ಉನ್ಮುಕ್ತ್ ಚಂದ್!

ವಿಶ್ರಾಂತಿ ಪಡೆದುಕೊಂಡು ಮರಳಿ ಕ್ರಿಕೆಟ್‍ನತ್ತ ಮುಖ ಮಾಡಿದ ಕೆಎಲ್ ರಾಹುಲ್ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡರು. ಹೀಗೆ ನ್ಯೂಜಿಲೆಂಡ್ ವಿರುದ್ಧ ನಡೆದ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಳ್ಳುವಲ್ಲಿ ವಿಫಲರಾದ ಕೆಎಲ್ ರಾಹುಲ್ ಬೆಂಚ್ ಕಾದಿದ್ದರು. ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಅವಕಾಶವನ್ನು ಪಡೆದುಕೊಂಡ ಕೆಎಲ್ ರಾಹುಲ್ ಆಡಿದ ಮೊದಲ ಇನ್ನಿಂಗ್ಸ್‌ನಲ್ಲಿಯೇ ತಮ್ಮ ಸಾಮರ್ಥ್ಯವೇನೆಂಬುದನ್ನು ಬ್ಯಾಟಿಂಗ್ ಮೂಲಕ ತಿಳಿಸಿಕೊಟ್ಟರು.

ಅಜಿಂಕ್ಯಾ ರಹಾನೆ ಬದಲು ಭಾರತ ಟೆಸ್ಟ್ ತಂಡದ ಉಪನಾಯಕನಾಗುವ ಸಾಧ್ಯತೆಯಿರುವ 3 ಆಟಗಾರರು!ಅಜಿಂಕ್ಯಾ ರಹಾನೆ ಬದಲು ಭಾರತ ಟೆಸ್ಟ್ ತಂಡದ ಉಪನಾಯಕನಾಗುವ ಸಾಧ್ಯತೆಯಿರುವ 3 ಆಟಗಾರರು!

ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 84 ರನ್ ಕಲೆಹಾಕಿ ಭಾರತ ತಂಡದ ಪರ ಆಪದ್ಬಾಂಧವನಾಗಿ ನಿಂತ ಕೆಎಲ್ ರಾಹುಲ್ ಶತಕ ವಂಚಿತರಾಗಿದ್ದರು. ಇದೀಗ ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಮತ್ತೆ ಉತ್ತಮ ಪ್ರದರ್ಶನವನ್ನು ನೀಡಿರುವ ಕೆಎಲ್ ರಾಹುಲ್ 129 ರನ್ ಬಾರಿಸಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಅಂಗಳದಲ್ಲಿ ಶತಕ ಬಾರಿಸಿದ್ದಾರೆ. ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಪಡೆದಿರುವ ಲಾರ್ಡ್ಸ್ ಅಂಗಳದಲ್ಲಿ ಶತಕ ಬಾರಿಸಿದ ಹತ್ತನೇ ಭಾರತೀಯ ಎಂಬ ಕೀರ್ತಿಗೂ ಸಹ ಕೆಎಲ್ ರಾಹುಲ್ ಭಾಜನರಾಗಿದ್ದಾರೆ. ಹೀಗೆ ಲಾರ್ಡ್ಸ್ ಅಂಗಳದಲ್ಲಿ ತಾವು ಬಾರಿಸಿದ ಅಮೋಘ ಶತಕದ ಕುರಿತು ಮಾತನಾಡಿರುವ ಕೆ ಎಲ್ ರಾಹುಲ್ ಈ ಕೆಳಕಂಡಂತೆ ಪ್ರತಿಕ್ರಿಯಿಸಿದ್ದಾರೆ.

ತುಂಬಾ ದಿನಗಳ ಕನಸು ನನಸಾಗಿದೆ

ತುಂಬಾ ದಿನಗಳ ಕನಸು ನನಸಾಗಿದೆ

ಸುಮಾರು ಎರಡು ವರ್ಷಗಳ ಕಾಲದಿಂದ ನಾನು ಟೆಸ್ಟ್ ಕ್ರಿಕೆಟ್‍ನಲ್ಲಿ ಆಡುವ ಅವಕಾಶವನ್ನೇ ಪಡೆದುಕೊಂಡಿರಲಿಲ್ಲ. ಲಾರ್ಡ್ಸ್ ಅಂಗಳದಲ್ಲಿ ಶತಕ ಬಾರಿಸಿದ್ದಕ್ಕಿಂತ ಹೆಚ್ಚಾಗಿ ಮತ್ತೆ ನಾನು ಟೆಸ್ಟ್ ಕ್ರಿಕೆಟ್ ಸದಸ್ಯನಾಗಿದ್ದೇನೆ ಎಂಬ ತೃಪ್ತಿಯೇ ಹೆಚ್ಚಿದೆ ಎಂದು ಕೆ ಎಲ್ ರಾಹುಲ್ ಹೇಳಿಕೆ ನೀಡಿದ್ದಾರೆ. ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳಬೇಕು ಎಂಬ ಈ ಎರಡು ವರ್ಷಗಳ ಕನಸು ಇಂದು ನನಸಾಗಿದೆ ಎಂದು ಕೆ ಎಲ್ ರಾಹುಲ್ ಸಂತಸ ವ್ಯಕ್ತಪಡಿಸಿದರು.

ತಂಡದಿಂದ ಕೈಬಿಡಲಾಗಿತ್ತು, ಸರಿಯಾದ ಅವಕಾಶಕ್ಕಾಗಿ ಕಾಯುತ್ತಿದ್ದೆ

ತಂಡದಿಂದ ಕೈಬಿಡಲಾಗಿತ್ತು, ಸರಿಯಾದ ಅವಕಾಶಕ್ಕಾಗಿ ಕಾಯುತ್ತಿದ್ದೆ

ಇನ್ನೂ ಮುಂದುವರೆದು ಟೆಸ್ಟ್ ಕ್ರಿಕೆಟ್‍ನಲ್ಲಿ ಪುನಃ ಅವಕಾಶ ಸಿಕ್ಕಿರುವುದರ ಕುರಿತು ಮಾತನಾಡಿದ ಕೆಎಲ್ ರಾಹುಲ್ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿದ್ದ ಕಾರಣ ತಂಡದಿಂದ ಹೊರಗಿಟ್ಟಿದ್ದರು, ಉತ್ತಮ ಪ್ರದರ್ಶನ ತೋರಿಸಬೇಕೆಂಬ ಹಂಬಲವಿದ್ದರೂ ಸಹ ಅವಕಾಶಗಳು ಸಿಗುತ್ತಿರಲಿಲ್ಲ. ಹೀಗೆ ಒಂದೊಳ್ಳೆ ಅವಕಾಶಕ್ಕಾಗಿ ಕಾಯುತ್ತಿದ್ದ ನನಗೆ ಈ ಸರಣಿ ದಾರಿದೀಪವಾಗಿದೆ ಎಂದು ಕೆ ಎಲ್ ರಾಹುಲ್ ಹೇಳಿದ್ದಾರೆ.

ಕೆ ಎಲ್ ರಾಹುಲ್ ಶತಕದಿಂದ ಅತಿ ಹೆಚ್ಚು ಖುಷಿ ಆಗಿದ್ದು ಇವರಿಗೆ | Oneindia Kannada
ಟೆಸ್ಟ್ ತಂಡದಲ್ಲಿ ಕೆಎಲ್ ರಾಹುಲ್ ಇನ್ನು ಖಾಯಂ ಸದಸ್ಯ

ಟೆಸ್ಟ್ ತಂಡದಲ್ಲಿ ಕೆಎಲ್ ರಾಹುಲ್ ಇನ್ನು ಖಾಯಂ ಸದಸ್ಯ

ಈ ಹಿಂದೆ ಟೆಸ್ಟ್‌ಗಳಲ್ಲಿ ಕಳಪೆ ಪ್ರದರ್ಶನ ನೀಡಿದ ಕಾರಣಕ್ಕೆ ಕೆಎಲ್ ರಾಹುಲ್ ತಂಡದಿಂದ ಸ್ಥಾನ ಕಳೆದುಕೊಂಡು ಹೊರಬಿದ್ದಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಕೆಎಲ್ ರಾಹುಲ್ ಮತ್ತೆ ತಮ್ಮ ಸಾಮರ್ಥ್ಯವೇನೆಂಬುದನ್ನು ಸಾಬೀತುಪಡಿಸಿಕೊಂಡಿದ್ದು, ಇನ್ನು ಮುಂದಿನ ಟೆಸ್ಟ್ ಪಂದ್ಯಗಳಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

Story first published: Saturday, August 14, 2021, 14:25 [IST]
Other articles published on Aug 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X