ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತದ vs ಇಂಗ್ಲೆಂಡ್: 5ನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ

Ind vs Eng: Graeme Swann said because of Indian teams lack of preparation England is Favorite

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಮುನ್ನ ಭಾರತ ತಂಡ ಅಭ್ಯಾಸ ಪಂದ್ಯದಲ್ಲಿ ಭಾಗಿಯಾಗಿದ್ದು ಉತ್ತಮ ಸಿದ್ಧತೆ ನಡೆಸಿದೆ. ಈಗಾಗಲೇ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಭಾರತ ಆತ್ಮವಿಶ್ವಾಸದಿಂದ ಪಂದ್ಯವನ್ನು ಎದುರು ನೋಡುತ್ತಿದೆ.

ಇನ್ನು ಮತ್ತೊಂದೆಡೆ ಇಂಗ್ಲೆಂಡ್ ತಂಡ ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 3-0 ಅಂತರದಿಂದ ವೈಟ್‌ವಾಶ್ ಮೂಲಕ ಸರಣಿ ವಶಪಡಿಸಿಕೊಂಡ ಬಳಿಕ ಅತ್ಯಂತ ಬಲಿಷ್ಠವಾಗಿ ಕಾಣಿಸುತ್ತಿದೆ. ನೂತನ ನಾಯಕ ಹಾಗೂ ಕೋಚ್ ನೇತೃತ್ವದಲ್ಲಿ ಇಂಗ್ಲೆಂಡ್ ತಂಡ ಮತ್ತಷ್ಟು ಆಕ್ರಮಣಕಾರಿಯಾಗಿ ಭಾಸವಾಗುತ್ತಿದೆ. ಹೀಗಾಗಿ ಭಾರತ ತಂಡಕ್ಕೆ ಈ ಬರಿ ಹಿಂದಿನ ವರ್ಷದ ಪಂದ್ಯಗಳಿಗಿಂತಲೂ ಕಠಿಣ ಸವಾಲು ಎದುರಾಗುವ ನಿರೀಕ್ಷೆಯಿದೆ.

ಟೆಸ್ಟ್ ಕ್ರಿಕೆಟ್‌ನ 4ನೇ ಇನ್ನಿಂಗ್ಸ್‌ನಲ್ಲಿ ವೇಗದ ಶತಕ ಸಿಡಿಸಿದ ಟಾಪ್ 3 ಬ್ಯಾಟ್ಸ್‌ಮನ್‌ಗಳುಟೆಸ್ಟ್ ಕ್ರಿಕೆಟ್‌ನ 4ನೇ ಇನ್ನಿಂಗ್ಸ್‌ನಲ್ಲಿ ವೇಗದ ಶತಕ ಸಿಡಿಸಿದ ಟಾಪ್ 3 ಬ್ಯಾಟ್ಸ್‌ಮನ್‌ಗಳು

ಈ ಸಂದರ್ಭದಲ್ಲಿ ಇಂಗ್ಲೆಂಡ್‌ನ ಮಾಜಿ ಆಟಗಾರ ಗ್ರೇಮ್ ಸ್ವಾನ್ ಪ್ರತಿಕ್ರಿಯೆ ನೀಡಿದ್ದು ಭಾರತ ಹಾಗೂ ಇಂಗ್ಲೆಂಡ್ ತಂಡಗಳ ಮಧ್ಯೆ ಅಂತಿಮ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಾಣವನ್ನು ಹೆಸರಿಸಿದ್ದಾರೆ.

ಭಾರತಕ್ಕೆ ಹೆಚ್ಚಿನ ಅನುಕೂಲವಿಲ್ಲ

ಭಾರತಕ್ಕೆ ಹೆಚ್ಚಿನ ಅನುಕೂಲವಿಲ್ಲ

ಕಳೆದ ವರ್ಷ ನಡೆಯಬೇಕಿದ್ದ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಕೊರೊನಾವೈರಸ್ ಕಾರಣದಿಂದಾಗಿ ಮುಂದೂಡಿಕೆಯಾಗಿದ್ದು ಆ ಪಂದ್ಯ ಜುಲೈ 1ರಂದು ಆಯೋಜೆನಯಾಗಲಿದೆ. ಆದರೆ ಈ ಪಂದ್ಯಕ್ಕೆ ಮುನ್ನ ಭಾರತ ಕ್ರಿಕೆಟ್ ತಂಡ ಕೇವಲ ಒಂದು ಅಭ್ಯಾಸ ಪಂದ್ಯವನ್ನು ಮಾತ್ರವೇ ಆಡಿದೆ. ಹೀಗಾಗಿ ಪ್ರಮುಖ ಪಂದ್ಯಕ್ಕೆ ಮುನ್ನ ಭಾರತ ತಂಡಕ್ಕೆ ಹೆಚ್ಚಿನ ಅನುಕೂಲಗಳು ಇಲ್ಲ ಎಂದಿದ್ದಾರೆ ಗ್ರೇಮ್ ಸ್ವಾನ್.

ಇಂಗ್ಲೆಂಡ್ ತಂಡವೇ ಫೆವರೀಟ್

ಇಂಗ್ಲೆಂಡ್ ತಂಡವೇ ಫೆವರೀಟ್

ಈ ಸಂದರ್ಭದಲ್ಲಿ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ತಂಡವೇ ಗೆಲ್ಲುವ ಫೆವರೀಟ್ ತಂಡ ಎಂದಿದ್ದಾರೆ. "ಇಂಗ್ಲೆಂಡ್ ಉತ್ತಮ ಸ್ಥಾನದಲ್ಲಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಗೆದ್ದಿರುವ ಕಾರಣ ಈಗ ಭಾರತಕ್ಕಿಂತ ಮೇಲುಗೈ ಸಾಧಿಸಿದ್ದಾರೆ. ಹಾಗಾಗಿ ಇಂಗ್ಲೆಂಡ್ ಅಂತಿಮ ಪಂದ್ಯ ಗೆಲ್ಲುವ ನೆಚ್ಚಿನ ತಂಡವಾಗಿದೆ. ಇನ್ನು ಭಾರತ ಒಂದು ಪಂದ್ಯವನ್ನು ಮಾತ್ರವೇ ಅಭ್ಯಾಸ ಪಂದ್ತವನ್ನಾಗಿ ಆಡಿದೆ. ಆದರೆ ಇಂಗ್ಲೆಂಡ್ ಮೂರು ಪಂದ್ಯಗಳಲ್ಲಿ ಕಿವಿಸ್ ವಿರುದ್ಧ ಆಡಿ ಗೆದ್ದಿದೆ. ಹೀಗಾಗಿ ಪಂದ್ಯ ಆರಂಬವಾಗುವ ಮುನ್ನ ಇಂಗ್ಲೆಂಡ್ ನೆಚ್ಚಿನ ತಂಡವಾಗಿದೆ" ಎಂದಿದ್ದಾರೆ.

ಇಂಗ್ಲೆಂಡ್ ತಂಡವನ್ನು ಮಣಿಸುವುದು ಕಠಿಣ

ಇಂಗ್ಲೆಂಡ್ ತಂಡವನ್ನು ಮಣಿಸುವುದು ಕಠಿಣ

ಇನ್ನು ಇದೇ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಆಟಗಾರರಾದ ಜೋ ರೂಟ್ ಹಾಗೂ ಒಲ್ಲೀ ಪೋಪ್ ಫಾರ್ಮ್ ಬಗ್ಗೆ ಸ್ವಾನ್ ಪ್ರಶಂಸಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧಧ ಸರಣಿ ಗೆಲ್ಲಲು ಈ ಇಬ್ಬರು ಆಟಗಾರರ ಮಹತ್ವದ ಪಾತ್ರವಹಿಸಿದ್ದರು ಎಂದಿದ್ದಾರೆ. ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದಲ್ಲಿ ಕೆಲ ಕೊರತೆಗಳು ಕೂಡ ಇದೆ ಎಂದು ಹೇಳಿರುವ ಸ್ವಾನ್ ಹಾಗಿದ್ದರೂ ತಂಡ ಉತ್ತಮವಾಗಿ ಬೆಳವಣಿಗೆ ಕಾಣುತ್ತಿದ್ದು ಮಣಿಸಲು ಕಠಿಣವಾಗಿರುವ ತಂಡವಾಗಿದೆ ಎಂದಿದ್ದಾರೆ.

ವಿರಾಟ್ ಶತಕದ ಬಗ್ಗೆ ಸೆಹ್ವಾಗ್ ಇಷ್ಟು ಕಳಪೆಯಾಗಿ ಮಾತಾಡ್ಬಾರ್ದಿತ್ತು!! | OneIndia Kannada
ಸ್ಕ್ವಾಡ್‌ಗಳು ಹೀಗಿದೆ

ಸ್ಕ್ವಾಡ್‌ಗಳು ಹೀಗಿದೆ

ಭಾರತ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ

ಇಂಗ್ಲೆಂಡ್: ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋ, ಸ್ಯಾಮ್ ಬಿಲ್ಲಿಂಗ್ಸ್, ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರಾಕ್, ಜಾಕ್ ಕ್ರೌಲಿ, ಬೆನ್ ಫಾಕ್ಸ್, ಜ್ಯಾಕ್ ಲೀಚ್, ಅಲೆಕ್ಸ್ ಲೀಸ್, ಕ್ರೇಗ್ ಓವರ್‌ಟನ್, ಜೇಮೀ ಓವರ್‌ಟನ್, ಮ್ಯಾಥ್ಯೂ ಪಾಟ್ಸ್, ಓಲಿ ಪೋಪ್, ಜೋ ರೂಟ್

Story first published: Tuesday, June 28, 2022, 12:54 [IST]
Other articles published on Jun 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X