ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs ENG: 3 ಪಂದ್ಯಗಳ ODI ಸರಣಿಗೆ ಮರಳಿದ ಪಾಂಡ್ಯ, ಜಡೇಜಾ; ಹೀಗಿದೆ ಭಾರತ ತಂಡ

IND vs ENG: Hardik Pandya and Ravindra Jadeja Return For 3-match ODI Series; Here Team India Squad

ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಟಿ20 ಸರಣಿಯ ನಂತರ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ 17 ಸದಸ್ಯರ ಭಾರತ ತಂಡವನ್ನು ಗುರುವಾರ ಬಿಸಿಸಿಐ ಪ್ರಕಟಿಸಿದೆ. ಮೂರು ಪಂದ್ಯಗಳ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.

ಏಕದಿನ ಪಂದ್ಯಗಳು ಜುಲೈ 12, 14 ಮತ್ತು 17ರಂದು ನಡೆಯಲಿವೆ. ಸರಣಿಯ ಮೊದಲ ಎರಡು ಪಂದ್ಯಗಳಿಗೆ ಲಂಡನ್ ಆತಿಥ್ಯ ವಹಿಸಲಿದ್ದರೆ, ಮೂರನೇ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ.

IND vs ENG 5ನೇ ಟೆಸ್ಟ್: ಭಾರತ ವಿರುದ್ಧ ಆಕ್ರಮಣಕಾರಿ ಆಟ; ಎಚ್ಚರಿಸಿದ ಬೆನ್ ಸ್ಟೋಕ್ಸ್IND vs ENG 5ನೇ ಟೆಸ್ಟ್: ಭಾರತ ವಿರುದ್ಧ ಆಕ್ರಮಣಕಾರಿ ಆಟ; ಎಚ್ಚರಿಸಿದ ಬೆನ್ ಸ್ಟೋಕ್ಸ್

ಇಂಗ್ಲೆಂಡ್ ವಿರುದ್ಧದ ಮರುನಿಗದಿಪಡಿಸಲಾದ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವ ರೋಹಿತ್ ಶರ್ಮಾ ಅವರು ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಅವರ ಪುನರಾಗಮನವನ್ನು ನೋಡುವ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಲು ಮರಳಲಿದ್ದಾರೆ.

ಒಂದು ವರ್ಷದ ನಂತರ 50-ಓವರ್‌ಗಳ ತಂಡದಲ್ಲಿ ಹಾರ್ದಿಕ್ ಪಾಂಡ್ಯ

ಒಂದು ವರ್ಷದ ನಂತರ 50-ಓವರ್‌ಗಳ ತಂಡದಲ್ಲಿ ಹಾರ್ದಿಕ್ ಪಾಂಡ್ಯ

ಐರ್ಲೆಂಡ್ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಟಿ20 ಸರಣಿಯ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ, ಸುಮಾರು ಒಂದು ವರ್ಷದ ನಂತರ 50-ಓವರ್‌ಗಳ ತಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ, ಜುಲೈ 2021ರಲ್ಲಿ ಶ್ರೀಲಂಕಾ ವಿರುದ್ಧ ಅವರ ಕೊನೆಯ ಪಂದ್ಯವಾಗಿತ್ತು.

ರವೀಂದ್ರ ಜಡೇಜಾ ಒಂದೂವರೆ ವರ್ಷದ ಕಾಲ ಏಕದಿನ ತಂಡದಿಂದ ದೂರವಿದ್ದರು. ಅವರ ಕೊನೆಯ ಆಟವು ಡಿಸೆಂಬರ್ 2020ರಲ್ಲಿ ಆಸ್ಟ್ರೇಲಿಯಾದಲ್ಲಿ ಬಂದಿತ್ತು. ತಂಡದಲ್ಲಿ ಹೊಸ ಮುಖ ಅರ್ಶ್‌ದೀಪ್ ಸಿಂಗ್‌ಗೆ ಅವಕಾಶ ಸಿಕ್ಕಿದ್ದು, ಅವರು ಕಳೆದ ಕೆಲವು ವರ್ಷಗಳಿಂದ ಪಂಜಾಬ್ ಕಿಂಗ್ಸ್‌ಗಾಗಿ ಐಪಿಎಲ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಾರೆ.

ಇಂಗ್ಲೆಂಡ್ ಏಕದಿನ ಮತ್ತು ಟಿ20 ಮಾದರಿಗಳಿಗೆ ಜೋಸ್ ಬಟ್ಲರ್ ನಾಯಕ

ಇಂಗ್ಲೆಂಡ್ ಏಕದಿನ ಮತ್ತು ಟಿ20 ಮಾದರಿಗಳಿಗೆ ಜೋಸ್ ಬಟ್ಲರ್ ನಾಯಕ

ಅವರು ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾದಾಗ, ಅರ್ಶ್‌ದೀಪ್ ಸಿಂಗ್ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಮೂರು ಪಂದ್ಯಗಳಲ್ಲಿ ಇಂಗ್ಲೆಂಡ್ ವಿರುದ್ಧ ಆ ಅವಕಾಶವನ್ನು ಪಡೆಯುವ ಭರವಸೆಯಲ್ಲಿದ್ದಾರೆ.

ಈ ವಾರದ ಆರಂಭದಲ್ಲಿ ಇಯಾನ್ ಮಾರ್ಗನ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ ಆತಿಥೇಯ ಇಂಗ್ಲೆಂಡ್, ಹೊಸ ಸೀಮಿತ ಓವರ್‌ಗಳ ನಾಯಕನನ್ನು ಆಯ್ಕೆ ಮಾಡಿದೆ. ಇಂಗ್ಲೆಂಡ್ ಏಕದಿನ ಮತ್ತು ಟಿ20 ಮಾದರಿಗಳಿಗೆ ವಿಕೆಟ್ ಕೀಪರ್ ಜೋಸ್ ಬಟ್ಲರ್ ಅವರನ್ನು ನೂತನ ನಾಯಕರನ್ನಾಗಿ ನೇಮಿಸಿದೆ.

ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗೆ 18 ಸದಸ್ಯರ ತಂಡ

ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗೆ 18 ಸದಸ್ಯರ ತಂಡ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ 18 ಸದಸ್ಯರ ತಂಡವನ್ನು ಹೆಸರಿಸಿದೆ. ಮಾಜಿ ರಾಷ್ಟ್ರೀಯ ನಾಯಕ ವಿರಾಟ್ ಕೊಹ್ಲಿ, ರಿಷಭ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಸೌತಾಂಪ್ಟನ್‌ನ ರೋಸ್ ಬೌಲ್‌ನಲ್ಲಿ ಜುಲೈ 7ರಂದು ಗುರುವಾರ ನಡೆಯಲಿರುವ ಆರಂಭಿಕ ಟಿ20 ಪಂದ್ಯದ ಭಾಗವಾಗಿರುವುದಿಲ್ಲ.

ರೋಹಿತ್ ಶರ್ಮಾ ಅವರು ಈ ವಾರದ ಆರಂಭದಲ್ಲಿ ಕೋವಿಡ್ ಸೋಂಕಿಗೆ ಒಳಗಾದ ನಂತರ ಇಂಗ್ಲೆಂಡ್ ವಿರುದ್ಧದ ಭಾರತದ ಐದನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ನಾಗ್ಪುರ ಮೂಲದ ಅನುಭವಿ ಶರ್ಮಾ ಅವರು ಇಂಗ್ಲೆಂಡ್ ನೆಲದಲ್ಲಿ ವೈಟ್-ಬಾಲ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಲು ಮರಳಲಿದ್ದಾರೆ.

ಐರ್ಲೆಂಡ್ ವಿರುದ್ಧದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಉಮ್ರಾನ್ ಮಲಿಕ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ರಾಹುಲ್ ತ್ರಿಪಾಠಿ ಟಿ20 ಸರಣಿಯಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆಯಲಿಲ್ಲ ಮತ್ತು ಅವರು ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವ ಭರವಸೆಯಲ್ಲಿದ್ದಾರೆ. ಜುಲೈ 7, 9 ಮತ್ತು 10 ರಂದು ನಡೆಯಲಿರುವ ಟಿ20 ಸರಣಿಯ ನಂತರ ಏಕದಿನ ಸರಣಿಯು ನಡೆಯಲಿದೆ.

1ನೇ ಟಿ20 ಸರಣಿಗೆ ಭಾರತ ತಂಡ

1ನೇ ಟಿ20 ಸರಣಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋ ಪಟೇಲ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್

2ನೇ ಮತ್ತು 3ನೇ ಟಿ20ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್ ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್

3 ಏಕದಿನ ಪಂದ್ಯಗಳಿಗೆ ಭಾರತ ತಂಡ

3 ಏಕದಿನ ಪಂದ್ಯಗಳಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್

Story first published: Sunday, July 3, 2022, 23:19 [IST]
Other articles published on Jul 3, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X