ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಓವಲ್ ಕ್ರೀಡಾಂಗಣದಲ್ಲಿ ಬಲಿಷ್ಠ ತಂಡ ಯಾವುದು, ಯಾರು ಹೆಚ್ಚು ಸೋತಿದ್ದಾರೆ ಗೊತ್ತಾ?

IND vs ENG: Head to head, key battle details of Oval Tests

ಸೆಪ್ಟೆಂಬರ್ 2, ಗುರುವಾರದಂದು ಲಂಡನ್‌ನ ಓವಲ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಸದ್ಯ ಎಲ್ಲೆಡೆ ಭಾರೀ ಚರ್ಚೆಗೆ ಕಾರಣವಾಗಿರುವ ವಿಷಯವಾಗಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ಇಲ್ಲಿಯವರೆಗೂ ನಡೆದಿರುವ ಒಟ್ಟು 3 ಟೆಸ್ಟ್ ಪಂದ್ಯಗಳ ಪೈಕಿ ಎರಡೂ ತಂಡಗಳು ಸಹ ತಲಾ ಒಂದೊಂದು ಪಂದ್ಯಗಳಲ್ಲಿ ಜಯ ಗಳಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ಹೀಗಾಗಿ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೇಲೆ ನಿರೀಕ್ಷೆಗಳು ಪಂದ್ಯ ಹತ್ತಿರವಾಗುತ್ತಿದ್ದಂತೆ ಹೆಚ್ಚಾಗುತ್ತಾ ಹೋಗುತ್ತಿವೆ.

ಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಬಹುದಾದ ಟೀಮ್ ಇಂಡಿಯಾದ 3 ಆಟಗಾರರುಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಬಹುದಾದ ಟೀಮ್ ಇಂಡಿಯಾದ 3 ಆಟಗಾರರು

ಇನ್ನು ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಮಳೆ ಆಗಮನವಾದ ಕಾರಣದಿಂದ ಯಾವುದೇ ಫಲಿತಾಂಶವಿಲ್ಲದೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು. ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ 151 ರನ್‌ಗಳ ಭರ್ಜರಿ ಜಯವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ ಗೆಲುವಿನ ಖಾತೆ ತೆರೆದು ಮುನ್ನಡೆಯನ್ನು ಸಾಧಿಸಿತು. ಹೀಗೆ ಮೊದಲೆರಡು ಪಂದ್ಯಗಳು ಮುಗಿದ ನಂತರ ಯಾವುದೇ ಗೆಲುವನ್ನು ಸಾಧಿಸದೇ ಹಿನ್ನಡೆ ಅನುಭವಿಸಿದ್ದ ಇಂಗ್ಲೆಂಡ್ ತಂಡ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡುವುದರ ಮೂಲಕ 76 ರನ್‌ಗಳ ಇನ್ನಿಂಗ್ಸ್ ಗೆಲುವನ್ನು ಸಾಧಿಸಿ ಸರಣಿಯಲ್ಲಿ 1-1 ಸಮಬಲವನ್ನು ಸಾಧಿಸಿತು.

ಇಂಗ್ಲೆಂಡ್ ಬೌಲರ್‌ಗಳಿಗೆ ಇರುವಷ್ಟು ತಾಳ್ಮೆ ಕೊಹ್ಲಿಗಿಲ್ಲ ಎಂದ ಭಾರತದ ಮಾಜಿ ಕ್ರಿಕೆಟಿಗಇಂಗ್ಲೆಂಡ್ ಬೌಲರ್‌ಗಳಿಗೆ ಇರುವಷ್ಟು ತಾಳ್ಮೆ ಕೊಹ್ಲಿಗಿಲ್ಲ ಎಂದ ಭಾರತದ ಮಾಜಿ ಕ್ರಿಕೆಟಿಗ

ಇದೀಗ ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಚಿತ್ತ ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದತ್ತ ಇದೆ. ಆದರೆ, ಓವಲ್ ಕ್ರೀಡಾಂಗಣದಲ್ಲಿ ಈ ಹಿಂದೆ ನಡೆದಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯಗಳ ಫಲಿತಾಂಶಗಳತ್ತ ಗಮನ ಹರಿಸಿದರೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರಾಸೆಯುಂಟುದಂತೂ ಖಚಿತ. ಅಷ್ಟಕ್ಕೂ ಓವಲ್ ಕ್ರೀಡಾಂಗಣದಲ್ಲಿ ನಡೆದಿರುವ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯ ಪಂದ್ಯಗಳ ಫಲಿತಾಂಶ ಯಾವ ರೀತಿಯಿದೆ, ಯಾವ ತಂಡ ಆ ಕ್ರೀಡಾಂಗಣದಲ್ಲಿ ಬಲಿಷ್ಠವಾಗಿದೆ ಮತ್ತು ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ ಎಂಬ ಮಾಹಿತಿ ಮುಂದೆ ಇದೆ ಓದಿ..

ಓವಲ್ ಮುಖಾಮುಖಿಯ ಫಲಿತಾಂಶ

ಓವಲ್ ಮುಖಾಮುಖಿಯ ಫಲಿತಾಂಶ

ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇದುವರೆಗೂ ಓವಲ್ ಕ್ರೀಡಾಂಗಣದಲ್ಲಿ ನಡೆದಿರುವ ಒಟ್ಟು 13 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ 13 ಟೆಸ್ಟ್ ಪಂದ್ಯಗಳ ಪೈಕಿ ಇಂಗ್ಲೆಂಡ್ ತಂಡ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಟೀಮ್ ಇಂಡಿಯಾ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯಗಳಿಸಿದೆ ಹಾಗೂ ಇನ್ನುಳಿದ 7 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ. ಈ ಅಂಕಿ ಅಂಶಗಳನ್ನು ಗಮನಿಸಿದರೆ ಓವಲ್ ಕ್ರೀಡಾಂಗಣದಲ್ಲಿ ನಡೆದಿರುವ ಟೆಸ್ಟ್ ಪಂದ್ಯಗಳ ಇತಿಹಾಸದಲ್ಲಿ ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಸ್ಪಷ್ಟ ಮೇಲುಗೈ ಸಾಧಿಸಿದೆ.

ಭಾರತ ಓವಲ್ ಕ್ರೀಡಾಂಗಣದಲ್ಲಿ ಪಂದ್ಯ ಗೆದ್ದು 50 ವರ್ಷಗಳೇ ಕಳೆದಿವೆ!

ಭಾರತ ಓವಲ್ ಕ್ರೀಡಾಂಗಣದಲ್ಲಿ ಪಂದ್ಯ ಗೆದ್ದು 50 ವರ್ಷಗಳೇ ಕಳೆದಿವೆ!

ಹೌದು, ಟೀಮ್ ಇಂಡಿಯಾ ಓವಲ್ ಕ್ರೀಡಾಂಗಣದಲ್ಲಿ ನಡೆದಿರುವ ಒಟ್ಟು 13 ಟೆಸ್ಟ್ ಪಂದ್ಯಗಳ ಪೈಕಿ ಜಯ ಸಾಧಿಸಿರುವುದು ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ. 1971 ರ ಸಮಯದಲ್ಲಿ ಓವಲ್ ಕ್ರೀಡಾಂಗಣದಲ್ಲಿ ನಡೆದಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತ್ತು. ಈ ಪಂದ್ಯದ ಬಳಿಕ ನಡೆದ ಯಾವುದೇ ಟೆಸ್ಟ್ ಪಂದ್ಯದಲ್ಲಿಯೂ ಸಹ ಟೀಮ್ ಇಂಡಿಯಾ ಗೆಲುವನ್ನು ಸಾಧಿಸಲಿಲ್ಲ. ಹೀಗಾಗಿ ಓವಲ್ ಕ್ರೀಡಾಂಗಣದಲ್ಲಿ ಭಾರತ ಟೆಸ್ಟ್ ಪಂದ್ಯವನ್ನು ಗೆದ್ದು 50 ವರ್ಷಗಳೇ ಕಳೆದಿದ್ದು ಈ ಬಾರಿ ನಡೆಯಲಿರುವ ಪಂದ್ಯವನ್ನು ಗೆಲ್ಲುವುದರ ಮೂಲಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಹೊಸ ಇತಿಹಾಸ ನಿರ್ಮಿಸಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಓವಲ್‌ನಲ್ಲಿ ಭಾರತಕ್ಕೆ ಹ್ಯಾಟ್ರಿಕ್ ಸೋಲು

ಓವಲ್‌ನಲ್ಲಿ ಭಾರತಕ್ಕೆ ಹ್ಯಾಟ್ರಿಕ್ ಸೋಲು

ಟೀಮ್ ಇಂಡಿಯಾ ಕಳೆದ 2007, 2014 ಮತ್ತು 2018 ರಲ್ಲಿ ಪ್ರವಾಸ ಕೈಗೊಂಡಾಗಲೆಲ್ಲ ಈ ಓವಲ್ ಕ್ರೀಡಾಂಗಣದಲ್ಲಿ ಒಂದೊಂದು ಪಂದ್ಯಗಳನ್ನಾಡಿತ್ತು. ಹೀಗೆ ಈ 3 ವರ್ಷಗಳಲ್ಲಿ ಓವಲ್ ಕ್ರೀಡಾಂಗಣದಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲಿಯೂ ಟೀಮ್ ಇಂಡಿಯಾ ಸೋಲನ್ನು ಕಂಡಿದೆ.

Story first published: Wednesday, September 1, 2021, 14:27 [IST]
Other articles published on Sep 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X