Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ENG 2nd ODI: ವಿರಾಟ್‌ ಕೊಹ್ಲಿ, ಶ್ರೇಯಸ್ ಅಯ್ಯರ್ ಅರ್ಧಶತಕದ ಸೊಬಗು

ಶ್ರೇಯಸ್‌ ಅಯ್ಯರ್‌ ಹಾಗೂ ವಿರಾಟ್‌ ಕೊಹ್ಲಿ ಅವರು ಬಾರಿಸಿದ ಅರ್ಧಶತಕ ಬಾರಿಸಿದರೂ, ಉಳಿದ ಬ್ಯಾಟರ್‌ಗಳು ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದರಿಂದ ಟೀಮ್ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ 233 ರನ್‌ಗಳಿಗೆ ಆಲೌಟ್‌ ಆಗಿದೆ.

ಟಾಸ್‌ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಮಾಡುವ ನಿರ್ಧಾರವನ್ನು ಮಾಡಿತು. ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭ ಸಾಧಾರಣವಾಗಿತ್ತು. ಆರಂಭಿಕ ಶುಭಮನ್‌ ಗಿಲ್ ಹಾಗೂ ರೋಹಿತ್ ಶರ್ಮಾ ಜೋಡಿ ಸಮಯೋಚಿತ ಬ್ಯಾಟಿಂಗ್ ನಡೆಸಿತು. ಆದರೆ ಶುಭಮನ್ ಗಿಲ್ ಅವರು 6 ಬೌಂಡರಿ ನೆರವಿನಿಂದ 31 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಮೊದಲ ವಿಕೆಟ್‌ಗೆ ರೋಹಿತ್, ಗಿಲ್‌ ಜೋಡಿ 7.4 ಓವರ್‌ಗಳಲ್ಲಿ 44 ರನ್‌ ಸೇರಿಸಿತು.

IND vs ENG

ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಸ್ಥಿರ ಪ್ರದರ್ಶನ ನೀಡುವ ವಿಶ್ವಾಸ ಮೂಡಿಸಿದ್ದರು. ಆದರೆ ಬ್ಯಾಕ್‌ ಟು ಬ್ಯಾಕ್‌ ಡಾಟ್‌ ಬೌಲ್‌ಗಳಿಂದ ಒತ್ತಡ ಬೆಳೆಯಿತು. ಹೀಗಾಗಿ ರೋಹಿತ್‌ 47 ಎಸೆತಗಳಲ್ಲಿ 1 ಬೌಂಡರಿ, 1 ಸಿಕ್ಸರ್ ಸಹಾಯದಿಂದ 26 ರನ್‌ ಬಾರಿಸಿ ಔಟ್ ಆದರು. ಎರಡನೇ ವಿಕೆಟ್‌ಗೆ ವಿರಾಟ್‌ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಜೋಡಿ 61 ಎಸೆತಗಳಲ್ಲಿ 60 ರನ್‌ ಸೇರಿಸಿತು.

ವಿರಾಟ್‌, ಶ್ರೇಯಸ್‌ ಅರ್ಧಶತಕ

ನಾಲ್ಕನೇ ಕ್ರಮಾಂಕದಲ್ಲಿ ಇಶಾನ್‌ ಕಿಶನ್‌ ಅವರಿಗೆ ಬ್ಯಾಟ್ ಮಾಡುವ ಅವಕಾಶ ಲಭಿಸಿತು. ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಇಶಾನ್‌ ವಿಫಲರಾದರು.

ಪಾಕಿಸ್ತಾನದ ಇಂಜಮಾಮ್‌ ಉಲ್‌ ಹಕ್‌ ದಾಖಲೆ ಅಳಿಸಿದ Rohit Sharma

ಪಾಕಿಸ್ತಾನದ ಇಂಜಮಾಮ್‌ ಉಲ್‌ ಹಕ್‌ ದಾಖಲೆ ಅಳಿಸಿದ Rohit Sharma

ನಾಲ್ಕನೇ ವಿಕೆಟ್‌ಗೆ ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 67 ಎಸೆತಗಳಲ್ಲಿ 67 ರನ್‌ ಸೇರಿಸಿತು. ಈ ಮೂಲಕ ಮಧ್ಯದ ಓವರ್‌ಗಳಲ್ಲಿ ವಿಕೆಟ್‌ ಬೀಳದಂತೆ ನೋಡಿಕೊಳ್ಳುವಲ್ಲಿ ಸಫಲವಾಯಿತು. ಆದರೆ ಈ ಹಂತದಲ್ಲಿ ವಿರಾಟ್‌ 8 ಬೌಂಡರಿ ನೆರವಿನಿಂದ 65 ರನ್‌ ಬಾರಿಸಿ ಔಟ್ ಆದರು.

ಬಾರದ ಜೊತೆಯಾಟ

ಉಳಿದ ಬ್ಯಾಟರ್‌ಗಳು ರನ್‌ ಕಲೆ ಹಾಕುವಲ್ಲಿ ವಿಫಲರಾದರು. ಅಲ್ಲದೆ ಉತ್ತಮ ಜೊತೆಯಾಟಗಳು ಮೂಡಿಬರದೇ ಇರುವುದು ತಂಡಕ್ಕೆ ದೊಡ್ಡ ಹೊಡೆತ ನೀಡಿತು. ತಂಡದ ಉಪನಾಯಕ ಶ್ರೇಯಸ್ ಅಯ್ಯರ್ 5 ಬೌಂಡರಿ, 2 ಸಿಕ್ಸರ್ ನೆರವಿನಿಂದ 66 ರನ್‌ ಬಾರಿಸಿ ಔಟ್ ಆದರು. ಅಂತಿಮವಾಗಿ ಭಾರತ 44 ಓವರ್‌ಗಳಲ್ಲಿ 233 ರನ್‌ಗಳಿಗೆ ಆಲೌಟ್ ಆಯಿತು.

ಕೋಚ್‌ ಗಂಭೀರ್‌, ಟೀಮ್ ಇಂಡಿಯಾಕ್ಕೆ ಆರ್‌ಸಿಬಿ ಮಾಜಿ ಆಟಗಾರ ಎಬಿಡಿ ಬಿಗ್ ವಾರ್ನಿಂಗ್

ಕೋಚ್‌ ಗಂಭೀರ್‌, ಟೀಮ್ ಇಂಡಿಯಾಕ್ಕೆ ಆರ್‌ಸಿಬಿ ಮಾಜಿ ಆಟಗಾರ ಎಬಿಡಿ ಬಿಗ್ ವಾರ್ನಿಂಗ್

ಇಂಗ್ಲೆಂಡ್ ತಂಡದ ವೇಗದ ಬೌಲರ್‌ ಜೋಫ್ರಾ ಆರ್ಚರ್ 47 ರನ್ ನೀಡಿ 3 ವಿಕೆಟ್ ಪಡೆದರು. ಅಲ್ಲದೆ ಗಸ್ ಅಟ್ಕಿನ್ಸನ್ ಮೂರು ವಿಕೆಟ್‌ ಕಬಳಿಸಿದರು. ಸಕೀಬ್ ಮಹಮೂದ್ 2 ವಿಕೆಟ್‌ ಉರುಳಿಸಿದರು.

ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್‌ ಭರ್ಜರಿ ಪ್ರದರ್ಶನ ನೀಡಿ ಸರಣಿಯಲ್ಲಿ ಪುಟಿದೇಳುವ ಕನಸು ಕಾಣುತ್ತಿದೆ.

Story first published: Thursday, July 16, 2026, 21:38 [IST]
Other articles published on Jul 16, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+