ಮ್ಯಾಂಚೆಸ್ಟರ್‌ ಟೆಸ್ಟ್ ರದ್ದು; ಪಂದ್ಯವನ್ನಾಡಲು ಭಾರತ ಸಿದ್ಧವಿರಲಿಲ್ಲ ಎಂದ ಇಂಗ್ಲೆಂಡ್!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಸಾಕಷ್ಟು ದೊಡ್ಡ ಮಟ್ಟದ ನಿರೀಕ್ಷೆ ಮತ್ತು ಕುತೂಹಲಗಳನ್ನು ಹುಟ್ಟುಹಾಕಿತ್ತು. ಸೆಪ್ಟೆಂಬರ್ 10ರಂದು ಲಂಡನ್ ನಗರದ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಆರಂಭವಾಗಬೇಕಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಈ ಹೈವೋಲ್ಟೇಜ್ ಪಂದ್ಯ ಸದ್ಯ ಈ ಪಂದ್ಯ ಆರಂಭಕ್ಕೂ ಮುನ್ನವೇ ರದ್ದಾಗುವುದರ ಮೂಲಕ ಕ್ರೀಡಾಭಿಮಾನಿಗಳಲ್ಲಿ ನಿರಾಸೆಯುಂಟಾಗಿದೆ.

ಹೌದು, ಭಾರತ ಮತ್ತು ಇಂಗ್ಲೆಂಡ್ ನಡುವೆ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐದನೇ ಟೆಸ್ಟ್ ಪಂದ್ಯ ಕೊರೊನಾ ವೈರಸ್ ಭೀತಿಯಿಂದ ರದ್ದಾಗಿದೆ. ಈಗಾಗಲೇ ಭಾರತ ತಂಡದ ಕೆಲ ಸಿಬ್ಬಂದಿ ವರ್ಗದವರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಕಾರಣ ಈ ಪಂದ್ಯವನ್ನು ರದ್ದು ಮಾಡಲಾಗಿದೆ.

ಇನ್ನು ಪಂದ್ಯ ರದ್ದಾಗಿರುವ ವಿಷಯವನ್ನು ಸ್ವತಃ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಅಧಿಕೃತವಾಗಿ ಘೋಷಣೆ ಮಾಡಿದ್ದು 'ಭಾರತ ತಂಡ ಪಂದ್ಯವನ್ನು ಆಡಲು ಬೇಕಾದ ಆಟಗಾರರ ಕೊರತೆಯಿಂದ ಪಂದ್ಯದಿಂದ ಹಿಂದೆ ಸರಿಯಿತು' ಎಂದು ಹೇಳಿಕೆ ನೀಡಿದೆ. ಹೌದು, ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಬೇಕಾದ ಆಟಗಾರರು ತಂಡದಲ್ಲಿ ಇಲ್ಲದೇ ಇರುವ ಕಾರಣಕ್ಕೆ ಟೀಮ್ ಇಂಡಿಯಾ ಐದನೇ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದ ಕಾರಣ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಅಧಿಕೃತವಾಗಿ ಘೋಷಣೆ ಮಾಡಿದೆ.

ಹೀಗೆ ಭಾರತ ಮತ್ತು ಇಂಗ್ಲೆಂಡ್ ನಡುವೆ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಬಹುನಿರೀಕ್ಷಿತ ಐದನೇ ಟೆಸ್ಟ್ ಪಂದ್ಯ ರದ್ದಾಗಿರುವುದರಿಂದ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯವನ್ನು ಭಾರತ ಗೆಲ್ಲುವುದರ ಮೂಲಕ 14 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲಲಿದೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದ ಭಾರತದ ಕ್ರಿಕೆಟ್ ಅಭಿಮಾನಿಗಳಿಗೆ ಈ ಸುದ್ದಿ ಕೊಂಚ ಬೇಸರ ತಂದಿರಬಹುದು. ಇನ್ನು ಮತ್ತೊಂದೆಡೆ ಟೀಮ್ ಇಂಡಿಯಾ ಅಂತಿಮ ಟೆಸ್ಟ್ ಪಂದ್ಯಕ್ಕೆ ಆಟಗಾರರನ್ನು ಕಣಕ್ಕೆ ಇಳಿಸದೇ ಇರುವ ಕಾರಣ ಈ ಪಂದ್ಯವನ್ನು ಡ್ರಾ ಎಂದು ಪರಿಗಣಿಸುವ ಸಾಧ್ಯತೆಯಿದೆ ಎಂಬ ಸುದ್ದಿಯೂ ಕೂಡ ಹರಿದಾಡುತ್ತಿದೆ.

ಬಿಸಿಸಿಐ ಜೊತೆ ಮಾತುಕತೆ ನಡೆಸಿ ಪಂದ್ಯ ರದ್ದು ಎಂದು ಘೋಷಿಸಿದ ಇಸಿಬಿ

ಬಿಸಿಸಿಐ ಜೊತೆ ಮಾತುಕತೆ ನಡೆಸಿ ಪಂದ್ಯ ರದ್ದು ಎಂದು ಘೋಷಿಸಿದ ಇಸಿಬಿ

ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಬೇಕಿದ್ದ ಐದನೇ ಟೆಸ್ಟ್ ಪಂದ್ಯ ರದ್ದಾಗಿದೆ ಎಂದು ಅಧಿಕೃತವಾಗಿ ಘೋಷಣೆ ಮಾಡಿರುವ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಇದಕ್ಕೂ ಮುನ್ನ ಬಿಸಿಸಿಐ ಅಧಿಕಾರಿಗಳ ಜೊತೆ ಚರ್ಚೆಗಳನ್ನು ನಡೆಸಿದ ನಂತರ ತೀರ್ಮಾನವನ್ನು ಕೈಗೊಂಡಿದೆ. ಹೀಗೆ ಬಿಸಿಸಿಐ ಅಧಿಕಾರಿಗಳ ಜೊತೆ ಚರ್ಚಿಸಿದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಕೊರೊನಾ ಸೋಂಕು ಹರಡುವಿಕೆಯ ಭೀತಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐದನೇ ಟೆಸ್ಟ್ ಪಂದ್ಯವನ್ನು ಎರಡೂ ಕ್ರಿಕೆಟ್ ಬೋರ್ಡ್‌ಗಳ ಸಮ್ಮತಿಯೊಂದಿಗೆ ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಕಣಕ್ಕಿಳಿಯಲು ಟೀಮ್ ಇಂಡಿಯಾ ತಂಡ ಸಿದ್ಧವಿರಲಿಲ್ಲ ಎಂದ ಇಂಗ್ಲೆಂಡ್

ಕಣಕ್ಕಿಳಿಯಲು ಟೀಮ್ ಇಂಡಿಯಾ ತಂಡ ಸಿದ್ಧವಿರಲಿಲ್ಲ ಎಂದ ಇಂಗ್ಲೆಂಡ್

ಹೀಗೆ ಕೊರೊನಾ ಸೋಂಕು ಹೆಚ್ಚುವ ಭೀತಿಯಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯ ರದ್ದಾದ ಬೆನ್ನಲ್ಲೇ ಮಾಹಿತಿಗಳನ್ನು ಹಂಚಿಕೊಂಡಿರುವ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಭಾರತ ತಂಡದ ಸಿಬ್ಬಂದಿ ವರ್ಗದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಟೀಮ್ ಇಂಡಿಯಾ ಆಟಗಾರರಿಗೆ ಐದನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಅವಕಾಶವಿರಲಿಲ್ಲ. ಹೀಗಾಗಿ ಟೀಮ್ ಇಂಡಿಯಾ ಆಟಗಾರರು ಐದನೇ ಟೆಸ್ಟ್ ಪಂದ್ಯವನ್ನಾಡಲು ಕಣಕ್ಕಿಳಿಯಲು ಸಿದ್ಧರಿರಲಿಲ್ಲ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಪಂದ್ಯದ ಫಲಿತಾಂಶ ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿದೆ

ಪಂದ್ಯದ ಫಲಿತಾಂಶ ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿದೆ

ಇನ್ನು ರದ್ದಾಗಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದ ಫಲಿತಾಂಶವನ್ನು ಯಾವ ರೀತಿ ಪರಿಗಣಿಸಲಾಗುತ್ತದೆ ಎಂಬುದು ಇದೀಗ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಗೊಂದಲವನ್ನೇ ಹುಟ್ಟುಹಾಕಿದೆ. ಈ ಪಂದ್ಯವನ್ನು ಡ್ರಾ ಎಂದು ಪರಿಗಣಿಸುವುದರ ಮೂಲಕ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿರುವ ಟೀಮ್ ಇಂಡಿಯಾವನ್ನು ವಿಜೇತ ತಂಡವೆಂದು ಘೋಷಿಸುವ ಸಾಧ್ಯತೆಗಳಿವೆ ಎಂದು ಕೆಲ ಕ್ರಿಕೆಟ್ ಪಂಡಿತರು ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದಷ್ಟು ಕ್ರಿಕೆಟ್ ಪಂಡಿತರು ಪಂದ್ಯವನ್ನಾಡಲು ಟೀಮ್ ಇಂಡಿಯಾ ತನ್ನ ಆಟಗಾರರನ್ನು ಕಣಕ್ಕಿಳಿಸಲು ಸಿದ್ಧವಾಗಿ ಇರದಿದ್ದ ಕಾರಣ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ವಿಜೇತರಾಗಿ ಘೋಷಿಸುವ ಸಾಧ್ಯತೆಗಳಿವೆ ಎಂದು ಕೂಡ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

Virat Kohli ಹಾಗು Root ನಡುವಿನ ವ್ಯತ್ಯಾಸ ಇದೆ | Oneindia Kannada
ಪಂದ್ಯದ ನಿಖರವಾದ ಫಲಿತಾಂಶ ಇಲ್ಲಿದೆ

ಪಂದ್ಯದ ನಿಖರವಾದ ಫಲಿತಾಂಶ ಇಲ್ಲಿದೆ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ರದ್ದಾಗಿದೆ. ಮುಂದಿನ ದಿನಗಳಲ್ಲಿ ಭಾರತ ಸೀಮಿತ ಓವರ್‌ಗಳ ಸರಣಿಯನ್ನಾಡಲು ಇಂಗ್ಲೆಂಡ್ ಪ್ರವಾಸ ಕೈಗೊಂಡಾಗ ಈ ಬಾರಿ ರದ್ದಾಗಿರುವ ಟೆಸ್ಟ್ ಪಂದ್ಯವನ್ನು ಆಡುವ ಅವಕಾಶವನ್ನು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಟೀಮ್ ಇಂಡಿಯಾಗೆ ನೀಡಲಿದೆ. ಹೀಗಾಗಿ ಮುಂದಿನ ವರ್ಷ ಭಾರತ ತಂಡ ಟಿ ಟ್ವೆಂಟಿ ಮತ್ತು ಏಕದಿನ ಸರಣಿಯನ್ನಾಡಲು ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಾಗ ಈ ಬಾರಿ ರದ್ದಾಗಿರುವ ಟೆಸ್ಟ್ ಪಂದ್ಯವನ್ನು ಆಡಲಿದೆ.

For Quick Alerts
ALLOW NOTIFICATIONS
For Daily Alerts
Story first published: Friday, September 10, 2021, 13:50 [IST]
Other articles published on Sep 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X