ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮ್ಯಾಂಚೆಸ್ಟರ್‌ ಟೆಸ್ಟ್: ಟೀಮ್ ಇಂಡಿಯಾದ ಈ ಇಬ್ಬರು ಬಲಿಷ್ಠ ಆಟಗಾರರು ಸ್ಥಾನ ಕಳೆದುಕೊಳ್ಳುವ ಸಾಧ್ಯತೆ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಸೆಪ್ಟೆಂಬರ್ 10ರ ಶುಕ್ರವಾರದಂದು ಲಂಡನ್ ನಗರದ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫೊರ್ಡ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಪಂದ್ಯ ಆರಂಭಕ್ಕೂ ಮುನ್ನ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಇತ್ತೀಚೆಗಷ್ಟೇ ಕೊರೊನಾ ಸೋಂಕಿನ ಕಾರಣದಿಂದಲೂ ಸಹ ಸಾಕಷ್ಟು ಸುದ್ದಿಯನ್ನು ಮಾಡಿದೆ.

ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಸಚಿನ್ ಮತ್ತು ಗಂಗೂಲಿ ರೀತಿಯ ಆಟಗಾರರಲ್ಲ: ಕಪಿಲ್ ದೇವ್ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಸಚಿನ್ ಮತ್ತು ಗಂಗೂಲಿ ರೀತಿಯ ಆಟಗಾರರಲ್ಲ: ಕಪಿಲ್ ದೇವ್

ಹೌದು, ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ಶುಕ್ರವಾರದಂದು ಆರಂಭವಾಗಬೇಕಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯ ಶುರುವಾಗುವುದು ಅನುಮಾನ ಎಂಬ ಸುದ್ದಿ ಇತ್ತೀಚೆಗಷ್ಟೇ ಹರಿದಾಡಿತ್ತು. ಟೀಮ್ ಇಂಡಿಯಾದ ತರಬೇತುದಾರರು ಹಾಗೂ ಓರ್ವ ಫಿಸಿಯೋ ಕೊರೊನಾ ಸೋಂಕಿಗೆ ಒಳಗಾದ ನಂತರ ಇತ್ತೀಚಿಗಷ್ಟೇ ಟೀಮ್ ಇಂಡಿಯಾದ ಮತ್ತೋರ್ವ ಫಿಸಿಯೋ ಯೋಗೇಶ್ ಪಾರ್ಮರ್ ಕೂಡ ಕೊರೋನಾ ಸೋಂಕಿಗೆ ಒಳಗಾಗಿರುವುದಾಗಿ ಫಲಿತಾಂಶ ಹೊರಬಿದ್ದಿತ್ತು. ಈ ಕಾರಣದಿಂದಾಗಿ ಗುರುವಾರ ನಡೆಯಬೇಕಿದ್ದ ಭಾರತೀಯ ಆಟಗಾರರ ತರಬೇತಿಯನ್ನು ಕೂಡ ರದ್ದುಗೊಳಿಸಿ ಎಲ್ಲಾ ಆಟಗಾರರು ಮತ್ತು ಸಿಬ್ಬಂದಿ ವರ್ಗದವರನ್ನು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಹೀಗೆ ಇಷ್ಟೆಲ್ಲಾ ಬೆಳವಣಿಗೆಗಳ ನಂತರ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮ್ಯಾಂಚೆಸ್ಟರ್ ಪಂದ್ಯ ನಡೆಯುವುದು ಅನುಮಾನ ಎಂದು ಸ್ವತಃ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರೇ ಹೇಳಿಕೆಯನ್ನು ನೀಡಿದ್ದರು.

ಹೀಗೆ ಆರಂಭಕ್ಕೂ ಮುನ್ನವೇ ಸಾಕಷ್ಟು ಗೊಂದಲಗಳನ್ನು ಸೃಷ್ಟಿಸಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ನಡೆಯುತ್ತಾ, ಇಲ್ಲವಾ ಎಂಬ ಪ್ರಶ್ನೆಯನ್ನು ಹುಟ್ಟು ಹಾಕಿತ್ತು. ಈ ಎಲ್ಲಾ ಪ್ರಶ್ನೆ ಮತ್ತು ಗೊಂದಲಗಳಿಗೆ ಭಾರತೀಯ ಆಟಗಾರರು ಮತ್ತು ಸಿಬ್ಬಂದಿ ವರ್ಗದವರ ಕೊರೋನಾ ಸೋಂಕಿನ ಪರೀಕ್ಷೆಯ ಫಲಿತಾಂಶ ಬಂದ ನಂತರ ಉತ್ತರ ಸಿಕ್ಕಿದ್ದು ಯಾವುದೇ ರದ್ದತಿಯಿಲ್ಲದೇ ಸೆಪ್ಟೆಂಬರ್ 10ರಂದೇ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಆರಂಭವಾಗುವುದು ಖಚಿತವಾಗಿದೆ.

ಈ ತಂಡ ಇಟ್ಟುಕೊಂಡು ಟಿ20 ವಿಶ್ವಕಪ್‌ ಗೆಲ್ಲುತ್ತಾ ಇಂಗ್ಲೆಂಡ್?; 3 ಬಲಿಷ್ಠ ಆಟಗಾರರಿಗೆ ಇಲ್ಲ ಸ್ಥಾನ!ಈ ತಂಡ ಇಟ್ಟುಕೊಂಡು ಟಿ20 ವಿಶ್ವಕಪ್‌ ಗೆಲ್ಲುತ್ತಾ ಇಂಗ್ಲೆಂಡ್?; 3 ಬಲಿಷ್ಠ ಆಟಗಾರರಿಗೆ ಇಲ್ಲ ಸ್ಥಾನ!

ಇನ್ನು ಸರಣಿಯುದ್ದಕ್ಕೂ ಆಡುವ ಬಳಗದಲ್ಲಿ ವಿಭಿನ್ನ ಬದಲಾವಣೆಗಳನ್ನು ಮಾಡಿಕೊಳ್ಳುತ್ತಾ ಬಂದಿರುವ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿಯೂ ತಂಡದಲ್ಲಿ ಕೆಲವೊಂದಷ್ಟು ದೊಡ್ಡ ಬದಲಾವಣೆಗಳನ್ನು ಮಾಡುವ ನಿರೀಕ್ಷೆ ಇದೆ. ಹೌದು, ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಆಡುವ ಬಳಗದಲ್ಲಿ ಈ ಕೆಳಕಂಡ ಆಟಗಾರರು ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ ಹಾಗೂ ತಂಡದಲ್ಲಿ ಸ್ಥಾನ ಪಡೆದುಕೊಳ್ಳಬಹುದಾದ ಆಟಗಾರರ ವಿವರ ಈ ಕೆಳಕಂಡಂತಿದೆ ಓದಿ..

ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಸ್ಥಾನ ಕಳೆದುಕೊಳ್ಳಬಹುದಾದ ಇಬ್ಬರು ಭಾರತೀಯ ಕ್ರಿಕೆಟಿಗರು

ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಸ್ಥಾನ ಕಳೆದುಕೊಳ್ಳಬಹುದಾದ ಇಬ್ಬರು ಭಾರತೀಯ ಕ್ರಿಕೆಟಿಗರು

ಲಂಡನ್ ನಗರದ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫೊರ್ಡ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡುವ ನಿಟ್ಟಿನಲ್ಲಿ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗಿಡುವ ಸಾಧ್ಯತೆಗಳಿದ್ದರೆ, ರವೀಂದ್ರ ಜಡೇಜಾ ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಅಂತಿಮ ಟೆಸ್ಟ್ ಪಂದ್ಯದಿಂದ ಹೊರ ಬೀಳುವ ಸಾಧ್ಯತೆಗಳಿವೆ.

ಬೂಮ್ರಾ ಮತ್ತು ಜಡೇಜಾ ಬದಲು ಸ್ಥಾನ ಪಡೆದುಕೊಳ್ಳಬಹುದಾದ ಆಟಗಾರರು

ಬೂಮ್ರಾ ಮತ್ತು ಜಡೇಜಾ ಬದಲು ಸ್ಥಾನ ಪಡೆದುಕೊಳ್ಳಬಹುದಾದ ಆಟಗಾರರು

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾದ ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಹೊರಗುಳಿಯುವ ಸಾಧ್ಯತೆಗಳಿದ್ದು ಈ ಇಬ್ಬರ ಸ್ಥಾನಕ್ಕೆ ಮೊಹಮ್ಮದ್ ಶಮಿ ಮತ್ತು ರವಿಚಂದ್ರನ್ ಅಶ್ವಿನ್ ಆಗಮನವಾಗುವ ಸಾಧ್ಯತೆಗಳಿವೆ. ಓವಲ್ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದ ಮೊಹಮ್ಮದ್ ಶಮಿ ಸದ್ಯ ಚೇತರಿಸಿಕೊಂಡಿದ್ದು ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬೂಮ್ರಾ ಹೊರಗುಳಿದರೆ ಆ ಸ್ಥಾನವನ್ನು ಮೊಹಮ್ಮದ್ ಶಮಿ ಅಲಂಕರಿಸಲಿದ್ದಾರೆ. ಇನ್ನು ಸರಣಿಯಲ್ಲಿ ಇದುವರೆಗೂ ನಡೆದಿರುವ ಯಾವುದೇ ಪಂದ್ಯದಲ್ಲಿಯೂ ಆಡುವ ಅವಕಾಶವನ್ನು ಪಡೆದುಕೊಳ್ಳದಿರುವ ರವಿಚಂದ್ರನ್ ಅಶ್ವಿನ್ ಐದನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದ್ದು ಈ ಸ್ಥಾನಕ್ಕೆ ರವಿಚಂದ್ರನ್ ಅಶ್ವಿನ್ ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

Chahal ಅವರನ್ನು ಕೈಬಿಡುವ ಹಿಂದಿನ ಅಸಲಿ ಕಾರಣ | Oneindia Kannada
14 ವರ್ಷಗಳ ನಂತರ ಸರಣಿ ಗೆಲ್ಲುವ ತವಕದಲ್ಲಿ ಟೀಮ್ ಇಂಡಿಯಾ

14 ವರ್ಷಗಳ ನಂತರ ಸರಣಿ ಗೆಲ್ಲುವ ತವಕದಲ್ಲಿ ಟೀಮ್ ಇಂಡಿಯಾ

ಟೀಂ ಇಂಡಿಯಾ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದು 14 ವರ್ಷಗಳೇ ಕಳೆದಿವೆ. 2007ರಲ್ಲಿ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದ ರಾಹುಲ್ ದ್ರಾವಿಡ್ ನೇತೃತ್ವದ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿತ್ತು. ಇದಾದ ಬಳಿಕ ಇಂಗ್ಲೆಂಡ್ ಪ್ರವಾಸ ಕೈಗೊಂಡ ಟೀಮ್ ಇಂಡಿಯಾ ಯಾವುದೇ ಟೆಸ್ಟ್ ಸರಣಿಯಲ್ಲಿಯೂ ಜಯ ಸಾಧಿಸಿಯೇ ಇಲ್ಲ. ಸದ್ಯ ಈ ಬಾರಿಯ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿರುವ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೇ ಟೆಸ್ಟ್ ಪಂದ್ಯವನ್ನು ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೂ ಸಹ ಸರಣಿಯನ್ನು ಕೈವಶ ವಶಪಡಿಸಿಕೊಳ್ಳಲಿದೆ. ಹೀಗೆ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೆ 14 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಸರಣಿ ಗೆದ್ದು ಇತಿಹಾಸವನ್ನು ಮರು ಸೃಷ್ಟಿ ಮಾಡಲಿದೆ.

Story first published: Friday, September 10, 2021, 11:10 [IST]
Other articles published on Sep 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X