Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Eng: ಇಂಗ್ಲೆಂಡ್ ಸ್ಪೋಟಕ ಬ್ಯಾಟಿಂಗ್: ಭಾರತ ಗೆಲ್ಲಲು 216 ರನ್‌ಗಳ ಬೃಹತ್ ಗುರಿ

Ind vs Eng: India need 216 runs to win against england in 3rd t20I

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ವಿಭಾಗ ಅಮೋಘ ಪ್ರದರ್ಶನ ನೀಡಿದೆ. ಡೇವಿಡ್ ಮಲನ್ ಹಾಗೂ ಲಿಯಾಮ್ ಲಿವಿಂಗ್‌ಸ್ಟನ್ ಅವರ ಅಮೋಘ ಪ್ರದರ್ಶನದಿಂದಾಗಿ ಇಂಗ್ಲೆಂಡ್ 215 ರನ್‌ಗಳನ್ನು ಗಳಿಸಿದೆ. ಈ ಮೂಲಕ ಭಾರತ ದೊಡ್ಡ ಸವಾಲನ್ನು ಎದುರಿಸಬೇಕಿದೆ.

ಈ ಪಂದ್ಯದಲ್ಲಿ ಜೋಸ್ ಬಟ್ಲರ್ ಅಬ್ಬರಿಸುವ ಮುನ್ಸೂಚನೆ ನೀಡಿದರಾದರೂ ಆವೇಶ್ ಖಾನ್ ಅವರನ್ನು 18 ರನ್‌ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಜೇಸನ್ ರಾಯ್ ಕೂಡ 27 ರನ್‌ಗಳಿಗೆ ತಮ್ಮ ಆಟವನ್ನು ಅಂತ್ಯಗೊಳಿಸಿದರು. ಈ ಮಧ್ಯೆ ಈ ಪಂದ್ಯದಲ್ಲಿ ಅವಕಾಶ ಪಡೆದುಕೊಂಡಿದ್ದ ಸಾಲ್ಟ್ ಕೂಡ ವಿಕೆಟ್ ಕಳೆದುಕೊಂಡರು. ಆದರೆ ನಂತರ ಜೊತೆಯಾದ ಡೇವಿಡ್ ಮಲನ್ ಹಾಗೂ ಲಿವಿಂಗ್‌ಸ್ಟನ್ ಸ್ಪೋಟಕ ಪ್ರದರ್ಶನ ನೀಡಿದರು.

ಭಾರತದ ಎಲ್ಲಾ ಬೌಲರ್‌ಗಳ ವಿರುದ್ಧ ಈ ಜೋಡಿ ನೇರವಾಗಿ ಮುಗಿಬಿದ್ದರು. 39 ಎಸೆತಗಳನ್ನು ಎದುರಿಸಿದ ಡೇವಿಡ್ ಮಲನ್ 77 ರನ್‌ಗಳನ್ನು ಬಾರಿಸಿದ್ದಾರೆ. ಇದರಲ್ಲಿ ಐದು ಸಿಕ್ಸರ್ ಹಾಗೂ ಆರು ಬೌಂಡರಿ ಸೇರಿತ್ತು. ಇನ್ನು ಲಿವಿಂಗ್‌ಸ್ಟನ್ 29 ಎಸೆತಗಳಲ್ಲಿ 42 ರನ್‌ಬಾರಿಸಿ ಮಿಂಚಿದರು. ಈ ಮೂಲಕ ಭಾರತದ ವಿರುದ್ಧ ಇಂಗ್ಲೆಂಡ್ ಬೃಹತ್ ಮೊತ್ತ ಗಳಿಸಲು ಸಾಧ್ಯವಾಯಿತು.

ಆಡುವ ಬಳಗ ಹೀಗಿದೆ
ಇಂಗ್ಲೆಂಡ್ ಜೇಸನ್ ರಾಯ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಡೇವಿಡ್ ಮಲನ್, ಫಿಲಿಪ್ ಸಾಲ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ರೀಸ್ ಟೋಪ್ಲಿ, ರಿಚರ್ಡ್ ಗ್ಲೀಸನ್
ಬೆಂಚ್: ಟೈಮಲ್ ಮಿಲ್ಸ್, ಸ್ಯಾಮ್ ಕರನ್, ಮ್ಯಾಥ್ಯೂ ಪಾರ್ಕಿನ್ಸನ್

ಭಾರತ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಆವೇಶ್ ಖಾನ್, ಉಮ್ರಾನ್ ಮಲಿಕ್, ರವಿ ಬಿಷ್ಣೋಯ್
ಬೆಂಚ್: ದೀಪಕ್ ಹೂಡಾ, ಇಶಾನ್ ಕಿಶನ್, ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ

Story first published: Monday, July 11, 2022, 9:43 [IST]
Other articles published on Jul 11, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+