For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ನಲ್ಲಿ ಕಣಕ್ಕಿಳಿಯುವ ಭಾರತದ ಸಂಭಾವ್ಯ ತಂಡ

IND vs ENG: India’s predicted playing XI for second Test

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 12ರ ಗುರುವಾರದಂದು ಆರಂಭವಾಗಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಈ ಎರಡನೇ ಟೆಸ್ಟ್ ಪಂದ್ಯಕ್ಕೆ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣ ಸಜ್ಜಾಗುತ್ತಿದ್ದು ಈಗಾಗಲೇ ಎರಡೂ ತಂಡಗಳ ಆಟಗಾರರು ಸಹ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸಗಳನ್ನು ಶುರುಮಾಡಿಕೊಂಡಿದ್ದಾರೆ.

ಇನ್ನು ಇಂಗ್ಲೆಂಡ್ ವಿರುದ್ಧದ ಮೊದಲನೇ ಪಂದ್ಯದಲ್ಲಿ ಭಾಗವಹಿಸಿದ್ದ ಭಾರತ ತಂಡದ ವೇಗಿ ಶಾರ್ದೂಲ್ ಠಾಕೂರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಹೀಗಾಗಿ ಶಾರ್ದೂಲ್ ಠಾಕೂರ್ ಬದಲು ಟೀಮ್ ಇಂಡಿಯಾಗೆ ಬೇರೊಬ್ಬ ಆಟಗಾರನನ್ನು ಎರಡನೆ ಟೆಸ್ಟ್ ಪಂದ್ಯದಲ್ಲಿ ಸೇರಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಅತ್ತ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದುಕೊಳ್ಳದೇ ಇದ್ದ ಭಾರತದ ವೇಗಿ ಇಶಾಂತ್ ಶರ್ಮಾ ಮತ್ತು ಗಾಯದ ಸಮಸ್ಯೆಯಿಂದ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ವಂಚಿತರಾಗಿದ್ದ ಮಯಾಂಕ್ ಅಗರ್ವಾಲ್ ಸದ್ಯ ಲಾರ್ಡ್ಸ್ ಅಂಗಳದಲ್ಲಿ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಅಭ್ಯಾಸವನ್ನು ನಡೆಸಿದ್ದಾರೆ.

ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ ಕೂಡ ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದವು. ಈ ಇಬ್ಬರು ಮಾತ್ರವಲ್ಲದೇ ಉಮೇಶ್ ಯಾದವ್ ಮತ್ತು ರವಿಚಂದ್ರನ್ ಅಶ್ವಿನ್ ಅವರ ಹೆಸರು ಕೂಡ ಎರಡನೇ ಪಂದ್ಯದಲ್ಲಿ ಪಾಲ್ಗೊಳ್ಳಲಿರುವ ಭಾರತೀಯ ಆಟಗಾರರ ಹೆಸರಿನ ಜೊತೆ ಕೇಳಿಬಂದಿದೆ. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಗೆಲ್ಲುವ ಹಂತದವರೆಗೂ ಹೋಗಿದ್ದ ಟೀಮ್ ಇಂಡಿಯಾಕ್ಕೆ ಮಳೆ ಅಡ್ಡಿಯುಂಟು ಮಾಡಿತು. ಹಾಗೂ ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡದ ಆಟಗಾರರನ್ನು ತಂಡದಿಂದ ಕೈ ಬಿಡುವುದು ಕೂಡ ಕಷ್ಟ.

ಹೀಗಾಗಿ ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಸ್ಥಾನವನ್ನು ಪಡೆದುಕೊಳ್ಳಬಹುದಾದ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ ನೋಡಿ..

{photo-feature}

Story first published: Wednesday, August 11, 2021, 17:19 [IST]
Other articles published on Aug 11, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+