IND vs ENG 2ನೇ ಏಕದಿನ ಪಂದ್ಯ: ಲಾರ್ಡ್ಸ್ ಪಿಚ್ ವರದಿ, ಹವಾಮಾನ ವರದಿ ಮತ್ತು ಬೌಂಡರಿ ಲೆಂತ್ ಮಾಹಿತಿ

ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡು 3 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಗೆದ್ದು ಬೀಗಿದ ಟೀಮ್ ಇಂಡಿಯಾ ಇದೀಗ 3 ಪಂದ್ಯಗಳ ಏಕದಿನ ಸರಣಿಯ ಪ್ರಥಮ ಪಂದ್ಯದಲ್ಲಿಯೂ ಕೂಡಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ.
ಜುಲೈ 12ರ ಮಂಗಳವಾರದಂದು ಲಂಡನ್‌ನ ಕೆನ್ನಿಂಗ್ಟನ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪ್ರಥಮ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 25.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 110 ರನ್ ಕಲೆಹಾಕಿ ಟೀಮ್ ಇಂಡಿಯಾಗೆ 111 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಟೀಮ್ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೇ 18.4 ಓವರ್‌ಗಳಲ್ಲಿ 114 ರನ್ ಕಲೆಹಾಕಿ ಭರ್ಜರಿ ಜಯ ಸಾಧಿಸಿತು.
ಹೀಗೆ ಪ್ರಥಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಮೇಲೆ ಸಂಪೂರ್ಣ ಹಿಡಿತವನ್ನು ಸಾಧಿಸಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಏಕದಿನ ಪಂದ್ಯದಲ್ಲಿಯೂ ಕೂಡ ಎದುರಾಳಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವತ್ತ ಚಿತ್ತ ನೆಟ್ಟಿದೆ. ಇತ್ತಂಡಗಳ ನಡುವಿನ ಈ ದ್ವಿತೀಯ ಏಕದಿನ ಪಂದ್ಯ ನಾಳೆ ( ಜುಲೈ 13 ) ಲಂಡನ್‌ನ ಲಾರ್ಡ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಪಡೆದಿರುವ ಈ ಲಾರ್ಡ್ಸ್ ಕ್ರೀಡಾಂಗಣದ ಪಿಚ್ ವರದಿ, ಬೌಂಡರಿ ಲೆಂತ್ ಹಾಗೂ ಹವಾಮಾನ ವರದಿ ಹೇಗಿದೆ ಎಂಬುದರ ಕುರಿತಾದ ವಿವರ ಮುಂದೆ ಇದೆ ಓದಿ.

ಪಿಚ್ ವರದಿ ಮತ್ತು ಬೌಂಡರಿ ಲೆಂತ್
ಪಿಚ್ ವರದಿ: ಲಾರ್ಡ್ಸ್ ಕ್ರೀಡಾಂಗಣದ ಪಿಚ್ ವೇಗಿಗಳಿಗೆ ಹೆಚ್ಚು ಸಹಕರಿಸಲಿದ್ದು, ಪ್ರಥಮ ಪಂದ್ಯದ ರೀತಿ ಈ ಪಂದ್ಯದಲ್ಲಿಯೂ ಕೂಡ ವೇಗಿಗಳು ಹೆಚ್ಚಿನ ವಿಕೆಟ್ ಉರುಳಿಸುವ ಸಾಧ್ಯತೆಗಳಿವೆ. ಹಾಗೂ ಈ ಪಿಚ್ ಬ್ಯಾಟ್ಸ್‌ಮನ್‌ಗಳು ನೆಲಕಚ್ಚಿ ನಿಂತ ನಂತರ ರನ್ ಗಳಿಸಲು ಸಹಕರಿಸಲಿದೆ.ಬೌಂಡರಿ ಲೆಂತ್:
• ಸ್ಕ್ವೇರ್ ಬೌಂಡರೀಸ್: 54.4 ಮೀಟರ್ x 82.29 ಮೀಟರ್
• ಸ್ಟ್ರೈಟ್ ಬೌಂಡರೀಸ್: 64 ಮೀಟರ್ x 82.29 ಮೀಟರ್

ಹವಾಮಾನ ವರದಿ
ಜುಲೈ 14ರ ಮಂಗಳವಾರದಂದು ಪಂದ್ಯದ ವೇಳೆ ಮಳೆಯಾಗುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಹವಾಮಾನ ವರದಿ ತಿಳಿಸಿದೆ. ಆ ದಿನದಂದು ಉಷ್ಣಾಂಶ ಕನಿಷ್ಠ 25° ಸೆಲ್ಸಿಯಸ್ ಇರಲಿದ್ದು, ಗರಿಷ್ಠ 30° ಸೆಲ್ಸಿಯಸ್ ತಲುಪಲಿದೆ. ಪಂದ್ಯದ ದಿನದಂದು ಶೇ. 25ರಷ್ಟು ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆ ಶೇ.0 ಎನ್ನಲಾಗಿದೆ.

ಸಂಭಾವ್ಯ ಆಡುವ ಬಳಗಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ
ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications