IND vs ENG: ಸೋಲಿನ ಸುಳಿಯಲ್ಲಿರುವ ಭಾರತ; ಬೌಲರ್ಸ್ ಮಾಡ್ತಾರಾ ಮೋಡಿ? ಅಂತಿಮ ದಿನದಾಟದ ಲೈವ್ ಸ್ಕೋರ್

ಸದ್ಯ ಬರ್ಮಿಂಗ್ಹ್ಯಾಮ್ ಎಡ್ಜ್ಬಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟ ಇಂದು ( ಜುಲೈ 5 ) ಆರಂಭಗೊಂಡಿದೆ. ಅಂತಿಮ ದಿನದಾಟದಂದು ಆತಿಥೇಯ ಇಂಗ್ಲೆಂಡ್ ಡ್ರೈವರ್ ಕುರ್ಚಿಯಲ್ಲಿ ಕೂತಿದ್ದು, ಪಂದ್ಯದಲ್ಲಿ ಜಯ ಸಾಧಿಸಲು 119 ರನ್‌ಗಳನ್ನು ಬಾರಿಸಬೇಕಿದೆ.

ಹೌದು, 132 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ 245 ರನ್‌ಗಳಿಗೆ ಆಲ್ ಔಟ್ ಆಗುವುದರ ಮೂಲಕ ಎದುರಾಳಿ ಇಂಗ್ಲೆಂಡ್ ತಂಡಕ್ಕೆ 378 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ನೀಡಿತು. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ಬೆನ್ನತ್ತಿರದಂತಹ ಮೊತ್ತವನ್ನು ಗುರಿಯನ್ನಾಗಿ ಪಡೆದ ಇಂಗ್ಲೆಂಡ್ ನಾಲ್ಕನೆ ದಿನದಾಟದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 259 ರನ್ ಕಲೆಹಾಕಿದ್ದು, ಅಂತಿಮ ದಿನದಾಟದಂದು ಗೆಲ್ಲಲು 119 ರನ್ ಕಲೆ ಹಾಕಬೇಕಾಗಿದೆ.

ಕಣದಲ್ಲಿ ಜಾನಿ ಬೈರ್ ಸ್ಟೋ ಮತ್ತು ಜೋ ರೂಟ್ ಅಜೇಯರಾಗಿ ಉಳಿದುಕೊಂಡಿದ್ದು, ಇಂಗ್ಲೆಂಡ್ ಬಳಿ ಅಂತಿಮ ದಿನದಾಟದಂದು 7 ವಿಕೆಟ್‍ಗಳು ಉಳಿದುಕೊಂಡಿದೆ. ಈ ಪಂದ್ಯದ ಐದನೇ ದಿನದಾಟದ ಲೈವ್ ಸ್ಕೋರ್ ಕೆಳಕಂಡಂತಿದೆ.

1
49716
ಇಂಗ್ಲೆಂಡ್ ಗೆದ್ದರೆ ಸರಣಿ ಸಮಬಲ

ಇಂಗ್ಲೆಂಡ್ ಗೆದ್ದರೆ ಸರಣಿ ಸಮಬಲ

ಇನ್ನು ಈ ಪಂದ್ಯದಲ್ಲಿ ಅತಿಥೇಯ ಇಂಗ್ಲೆಂಡ್ ಜಯ ಸಾಧಿಸಿದರೆ ಸರಣಿ 2 - 2 ಸಮಬಲವಾಗಲಿದೆ. ಹೌದು ಕಳೆದ ವರ್ಷ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದಾಗ 5 ಪಂದ್ಯಗಳ ಟೆಸ್ಟ್ ಸರಣಿ ಪೈಕಿ 4 ಪಂದ್ಯಗಳನ್ನು ಯಶಸ್ವಿಯಾಗಿ ಆಡಿ ಮುಗಿಸಿತ್ತು. ಈ ಪೈಕಿ ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಗೆದ್ದಿತ್ತು ಹಾಗೂ ಇಂಗ್ಲೆಂಡ್ 1 ಪಂದ್ಯದಲ್ಲಿ ಗೆದ್ದಿತು ಮತ್ತು ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ಹಾಗೂ ಸರಣಿಯ ಅಂತಿಮ ಪಂದ್ಯ ಕೊರೋನಾವೈರಸ್ ಕಾರಣದಿಂದಾಗಿ ಮೂಂದೂಡಲಾಗಿತ್ತು. ಈ ಮೂಲಕ ಸರಣಿಯಲ್ಲಿ ಟೀಮ್ ಇಂಡಿಯಾ 2-1ರ ಮುನ್ನಡೆ ಕಾಯ್ದುಕೊಂಡಿತ್ತು. ಆದರೆ ಇದೀಗ ಇಂಗ್ಲೆಂಡ್ ಗೆಲುವು ಸಾಧಿಸುತ್ತಿರುವುದರಿಂದ ಸರಣಿ ಸಮಬಲವಾಗಲಿದೆ.

ಎಡ್ಜ್ ಬಾಸ್ಟನ್ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಸೋಲು

ಎಡ್ಜ್ ಬಾಸ್ಟನ್ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಸೋಲು

ಟೀಮ್ ಇಂಡಿಯಾ ಎಡ್ಜ್‌ಬಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಾಡುತ್ತಿರುವ 8ನೇ ಟೆಸ್ಟ್ ಪಂದ್ಯ ಇದಾಗಿದ್ದು, ಇಲ್ಲಿಯವರೆಗೂ ನಡೆದಿರುವ 7 ಪಂದ್ಯಗಳ ಪೈಕಿ ಯಾವುದೇ ಪಂದ್ಯಗಳಲ್ಲಿಯೂ ಜಯ ಸಾಧಿಸಿರಲಿಲ್ಲ. ಟೀಮ್ ಇಂಡಿಯಾದ ಈ ಸೋಲಿನ ಸರಣಿ ಮತ್ತೆ ಮುಂದುವರಿಯುತ್ತಿದ್ದು, ಈ ಕ್ರೀಡಾಂಗಣದಲ್ಲಿ ಈ ಬಾರಿಯೂ ಗೆಲುವು ಸಾಧಿಸಲಾಗದೇ ಮುಖಭಂಗಕ್ಕೊಳಗಾಗಲಿದೆ.

ಆಡುವ ಬಳಗ

ಆಡುವ ಬಳಗ

ಭಾರತ: ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ(ನಾಯಕ)

ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್(ನಾಯಕ), ಸ್ಯಾಮ್ ಬಿಲ್ಲಿಂಗ್ಸ್(ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್

For Quick Alerts
ALLOW NOTIFICATIONS
For Daily Alerts
Story first published: Tuesday, July 5, 2022, 15:29 [IST]
Other articles published on Jul 5, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X