IND vs ENG: ಟಿ20 ಆಯ್ತು ಈಗ ಏಕದಿನ ಸರಣಿ ಶುರು; ಒಟ್ಟಾರೆ ಏಕದಿನ ಪಂದ್ಯಗಳಲ್ಲಿ ಹೆಚ್ಚು ಗೆದ್ದವರು ಯಾರು?

ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ಆತಿಥೇಯ ಆಂಗ್ಲರ ವಿರುದ್ಧ ಕಳೆದ ವರ್ಷದಿಂದ ಮುಂದೂಡಲ್ಪಟ್ಟಿದ್ದ ಐದನೇ ಟೆಸ್ಟ್ ಪಂದ್ಯ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಆಡಿ ಮುಗಿಸಿದೆ.
ಮೊದಲನೆಯದಾಗಿ ನೆಡೆದ ಟೆಸ್ಟ್ ಪಂದ್ಯದಲ್ಲಿ ಸೋತು ಮುಖಭಂಗ ಅನುಭವಿಸಿದ ಟೀಮ್ ಇಂಡಿಯಾ ಇದೀಗ ಟಿ ಟ್ವೆಂಟಿ ಸರಣಿಯನ್ನು ಗೆಲ್ಲುವುದರ ಮೂಲಕ ಸೋಲಿನ ಸೇಡನ್ನು ತೀರಿಸಿಕೊಂಡಿದೆ. ತವರು ನೆಲದಲ್ಲಿಯೇ ಆಂಗ್ಲರಿಗೆ ಸೋಲಿನ ರುಚಿಯನ್ನು ತೋರಿಸಿರುವ ಟೀಮ್ ಇಂಡಿಯಾ ಇದೀಗ ಜುಲೈ 12ರಿಂದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಾಟ ನಡೆಸಲಿದೆ.
ಇನ್ನು ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕ್ರಿಕೆಟ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು ಎಷ್ಟು ಏಕದಿನ ಪಂದ್ಯಗಳಲ್ಲಿ ಸೆಣಸಾಟ ನಡೆಸಿವೆ, ಈ ಪೈಕಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಎಷ್ಟು ಪಂದ್ಯಗಳು ರದ್ದಾಗಿವೆ ಎಂಬುದರ ಕುರಿತಾದ ಸಂಪೂರ್ಣ ಮಾಹಿತಿ ಮುಂದೆ ಇದೆ ಓದಿ.

ಒಟ್ಟಾರೆ ಮುಖಾಮುಖಿ
ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕ್ರಿಕೆಟ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 103 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಟೀಮ್ ಇಂಡಿಯಾ 55 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಇಂಗ್ಲೆಂಡ್ 43 ಪಂದ್ಯಗಳಲ್ಲಿ ಗೆಲುವನ್ನು ಕಂಡಿದೆ. ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಏಕದಿನ ಮುಖಾಮುಖಿ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡಕ್ಕಿಂತ ಟೀಮ್ ಇಂಡಿಯಾ ಹೆಚ್ಚು ಪಂದ್ಯಗಳನ್ನು ಗೆದ್ದು ಬಲಿಷ್ಠ ತಂಡವೆನಿಸಿಕೊಂಡಿದೆ. ಈ ಮುಖಾಮುಖಿ ಪಂದ್ಯಗಳ ಪೈಕಿ 3 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದರೆ, 2 ಪಂದ್ಯಗಳು ಟೈನಲ್ಲಿ ಮುಗಿದಿವೆ.

ಏಕದಿನ ಸರಣಿಗೆ ಪ್ರಕಟಗೊಂಡಿರುವ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜೆ ಬುಮ್ರಾ, ಪ್ರಸಿದ್ಧ್ ಶಮಿ ಕೃಷ್ಣ, ಮೊಹ್ , ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್
ಇಂಗ್ಲೆಂಡ್: ಜೋಸ್ ಬಟ್ಲರ್, ಮೊಯಿನ್ ಅಲಿ, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರೇಗ್ ಓವರ್‌ಟನ್, ಮ್ಯಾಥ್ಯೂ ಪಾರ್ಕಿನ್ಸನ್, ಜೋ ರೂಟ್, ಜೇಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ

ಪಂದ್ಯಗಳ ಪಟ್ಟಿ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ 3 ಪಂದ್ಯಗಳ ಪಟ್ಟಿ
• ಪ್ರಥಮ ಏಕದಿನ ಪಂದ್ಯ - ಜುಲೈ 12 - ಓವಲ್
• ದ್ವಿತೀಯ ಏಕದಿನ ಪಂದ್ಯ - ಜುಲೈ 14 - ಲಾರ್ಡ್ಸ್
• ತೃತೀಯ ಏಕದಿನ ಪಂದ್ಯ - ಜುಲೈ 17 - ಮ್ಯಾಂಚೆಸ್ಟರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications