IND vs ENG: ಅಪರೂಪದ ದಾಖಲೆ ಬರೆಯಲು ಸಜ್ಜಾದ ಕೋಚ್ ರಾಹುಲ್ ದ್ರಾವಿಡ್

ಭಾರತ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಭಾರತ ತಂಡದ ಆಟಗಾರನಾಗಿ ಸಾಕಷ್ಟು ದಾಖಲೆಗಳನ್ನು ಬರೆದಿದ್ದಾರೆ. ಅದ್ಭುತ ವೃತ್ತಿ ಜೀವನದಲ್ಲಿ ಶ್ರೇಷ್ಠ ಸಾಧನೆಗಳನ್ನು ಮಾಡಿದ್ದಾರೆ ರಾಹುಲ್ ದ್ರಾವಿಡ್. ಇದೀಗ ಭಾರತೀಯ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಇಂಗ್ಲೆಂಡ್ ವಿರುದ್ಧ ಕೋಚ್ ಆಗಿ ಅಪರೂಪದ ದಾಖಲೆ ಬರೆಯಲು ಸಜ್ಜಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧಧ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡುತ್ತಿದ್ದು ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಈ ಸರಣಿಯಲ್ಲಿ ಈಗಾಗಲೇ 2-1 ಅಂತರದಿಂದ ಮೇಲುಗೈ ಸಾಧಿಸಿರುವ ಭಾರತ ಮತ್ತೊಂದು ಗೆಲುವಿನ ಮೂಲಕ ದಾಖಲೆಯೊಂದಿಗೆ ಸರಣಿ ಗೆಲ್ಲುವ ಅವಕಾಶವಿದೆ. ಇದೇ ಸಂದರ್ಭದಲ್ಲಿ ಕೋಚ್ ದ್ರಾವಿಡ್ ಕೂಡ ಅಪರೂಪದ ಸಾಧನೆ ಮಾಡಿದಂತಾಗುತ್ತದೆ.

ನಾಯಕನಾಗಿಯೂ ಇಂಗ್ಲೆಂಡ್‌ನಲ್ಲಿ ಸರಣಿ ಗೆದ್ದಿರುವ ದ್ರಾವಿಡ್
ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ನಾಯಕನಾಗಿ ಇಂಗ್ಲೆಂಡ್ ನೆಲದಲ್ಲಿ ಸರಣಿ ಗೆದ್ದಿರುವ ಸಾಧನೆ ಮಾಡಿದ್ದಾರೆ. 2007ರಲ್ಲಿ ಭಾರತ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿತ್ತು. ಆ ಸಂದರ್ಭದಲ್ಲಿ ಭಾರತ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿತ್ತು. ಈ ಸರಣಿಯಲ್ಲಿ ಎರಡು ಪಂದ್ಯದಗಳು ಡ್ರಾದಲ್ಲಿ ಅಂತ್ಯವಾಗಿತ್ತು. ಈ ಮೂಲಕ ಭಾರತ 21 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಸಾಧನೆ ಮಾಡಿತ್ತು.

ಕೋಚ್ ಆಗಿಯೂ ಸಾಧನೆ ಮಾಡಲಿದ್ದಾರೆ ದ್ರಾವಿಡ್
ನಾಯಕನಾಗಿ ಟೆಸ್ಟ್ ಸರಣಿ ಗೆದ್ದ ಬಳಿಕ ಇದೀಗ ಕೋಚ್ ಆಗಿಯೂ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಅಪೂರ್ವ ಅವಕಾಶ ದ್ರಾವಿಡ್ ಮುಂದಿದೆ. ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಈಗಾಗಲೇ 2-1 ಅಂತರದಿಂದ ಮೇಲುಗೈ ಸಾಧಿಸಿದ್ದು ಅಂತಿಮ ಪಂದ್ಯದಲ್ಲಿಯೂ ಬಿಗಿಹಿಡಿತ ಸಾಧಿಸಿದೆ. ಹೀಗಾಗಿ ಭಾರತ ಸರಣಿಯನ್ನು ವಶಕ್ಕೆ ಪಡೆಯುವುದು ಬಹುತೇಕ ನಿಶ್ಚಿತ.

ಅಪರೂಪದ ಸಾಧನೆ ಮಾಡುವ ಅವಕಾಶ
ಭಾರತ ಈ ಸರಣಿಯಲ್ಲಿ ಗೆಲುವು ಸಾಧಿಸಿದರೆ ರಾಹುಲ್ ದ್ರಾವಿಡ್ ನಾಯಕನಾಗಿ ಹಾಗೂ ಕೋಚ್ ಆಗಿ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಸಾಧನೆ ಮಾಡಿದಂತಾಗುತ್ತದೆ. ಈ ಅಪರೂಪದ ಸಾಧನೆ ಮಾಡಿದ ಭಾರತದ ಪ್ರಥಮ ಕ್ರಿಕೆಟಿಗ ಎನಿಸಿಕೊಳ್ಳುವ ಅವಕಾಶ ರಾಹುಲ್ ದ್ರಾವಿಡ್‌ಗೆ ಇದೆ.

ಇತ್ತಂಡಗಳ ಆಡುವ ಬಳಗ
ಇಂಗ್ಲೆಂಡ್: ಝಾಕ್ ಕ್ರಾಲಿ, ಅಲೆಕ್ಸ್ ಲೀಸ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಬೆನ್ ಫೋಕ್ಸ್, ಜೇಮೀ ಓವರ್ಟನ್, ಕ್ರೇಗ್ ಓವರ್ಟನ್, ಹ್ಯಾರಿ ಬ್ರೂಕ್
ಭಾರತ: ಚೇತೇಶ್ವರ ಪೂಜಾರ, ಶುಬ್ಮನ್ ಗಿಲ್, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ (ನಾಯಕ)
ಬೆಂಚ್: ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ, ಶ್ರೀಕರ್ ಭರತ್, ರವಿಚಂದ್ರನ್ ಅಶ್ವಿನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications