Ind vs Eng: ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಕೊರೊನಾ ವೈರಸ್

ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ಇಂಗ್ಲೆಂಡ್ ವಿರುದ್ಧ ಮರುನಿಗದಿಪಡಿಸಲಾದ ಟೆಸ್ಟ್ ಪಂದ್ಯ ಪ್ರಾರಂಭವಾಗುವ ಕೆಲವೇ ದಿನಗಳ ಮೊದಲು ಕೊರೊನಾ ವೈರಸ್ ಪಾಸಿಟಿವ್ ಕಾಣಿಸಿಕೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದು ಮತ್ತು ತನ್ನ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಈ ಮಾಹಿತಿಯನ್ನು ಪೋಸ್ಟ್ ಮಾಡಿದೆ.

"ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಶನಿವಾರ ನಡೆಸಿದ ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ (RAT) ನಂತರ ಕೋವಿಡ್-19 ಪಾಸಿಟಿವ್ ಪರೀಕ್ಷೆ ನಡೆಸಿದ್ದಾರೆ. ಅವರು ಪ್ರಸ್ತುತ ತಂಡದ ಹೋಟೆಲ್‌ನಲ್ಲಿ ಐಸೋಲೇಷನ್ ಆಗಿದ್ದಾರೆ ಮತ್ತು ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ," ಎಂದು ಬಿಸಿಸಿಐ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದೆ.

ರೋಹಿತ್ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿಯಲಿಲ್ಲ

ರೋಹಿತ್ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿಯಲಿಲ್ಲ

ಜುಲೈ 1ರಿಂದ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಟೆಸ್ಟ್ ಪಂದ್ಯಕ್ಕೆ ಮುನ್ನ 4 ದಿನಗಳ ಅಭ್ಯಾಸ ಪಂದ್ಯದಲ್ಲಿ ಲೀಸೆಸ್ಟರ್‌ಶೈರ್ ವಿರುದ್ಧ ರೋಹಿತ್ ಶರ್ಮಾ ತಂಡದಲ್ಲಿದ್ದರು. ಗುರುವಾರ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಮಾಡಿದ ರೋಹಿತ್ ಶರ್ಮಾ, ಶನಿವಾರ ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿಯಲಿಲ್ಲ. ಅಭ್ಯಾಸ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಔಟಾಗುವ ಮೊದಲು ಅವರು 25 ರನ್ ಗಳಿಸಿದರು.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ ಈ ಹಿಂದೆ ಭಾರತ ತಂಡವನ್ನು ಶ್ರೀಲಂಕಾ ವಿರುದ್ಧ 2-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿದ್ದರು. ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಪಂದ್ಯದ ವೇಳೆಗೆ ಅವರು ಚೇತರಿಸಿಕೊಂಡರೆ, ತವರಿನಿಂದ ಹೊರಗಿರುವ ಭಾರತ ತಂಡದ ನಾಯಕರಾಗಿ ಇದು ಅವರ ಮೊದಲ ಟೆಸ್ಟ್ ಪಂದ್ಯವಾಗಲಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ 2-1 ಮುನ್ನಡೆ ಸಾಧಿಸಿತ್ತು

ವಿರಾಟ್ ಕೊಹ್ಲಿ ನಾಯಕತ್ವದ ಭಾರತ 2-1 ಮುನ್ನಡೆ ಸಾಧಿಸಿತ್ತು

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕಳೆದ ವರ್ಷ ಇಂಗ್ಲೆಂಡ್ ವಿರುದ್ಧ 2-1 ಮುನ್ನಡೆ ಸಾಧಿಸಿತ್ತು. ಆದರೆ ಭಾರತೀಯ ಶಿಬಿರದಲ್ಲಿ ಏಕಾಏಕಿ ಕೋವಿಡ್ ಕಾಣಿಸಿಕೊಂಡಿದ್ದರಿಂದ ಐದನೇ ಮತ್ತು ಅಂತಿಮ ಟೆಸ್ಟ್ ಅನ್ನು ರದ್ದುಗೊಳಿಸಬೇಕಾಯಿತು. ಬಿಸಿಸಿಐ ಮತ್ತು ಇಸಿಬಿ ಈ ವರ್ಷ ಉಳಿದಿರುವ ಟೆಸ್ಟ್ ಪಂದ್ಯವನ್ನು ಮರುಹೊಂದಿಸಲು ನಿರ್ಧರಿಸಿದೆ. ಭಾರತ ಪ್ರವಾಸದಲ್ಲಿ ಟೆಸ್ಟ್ ಪಂದ್ಯದ ಹೊರತಾಗಿ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಸಹ ಆಡಲಿದೆ.

ಅಭ್ಯಾಸ ಪಂದ್ಯದಲ್ಲಿ ಭಾರತಕ್ಕೆ ಮುನ್ನಡೆ

ಅಭ್ಯಾಸ ಪಂದ್ಯದಲ್ಲಿ ಭಾರತಕ್ಕೆ ಮುನ್ನಡೆ

ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ಗೂ ಮುನ್ನ ಲೀಸೆಸ್ಟರ್‌ಶೈರ್‌ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ 366ರನ್‌ಗಳ ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಮೂರನೇ ದಿನದಾಟದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 364ರನ್ ಕಲೆಹಾಕಿದ್ದು, 366ರನ್‌ಗಳ ಮುನ್ನಡೆ ಸಾಧಿಸಿದೆ.

ಮೂರನೇ ದಿನದಾಟದಲ್ಲಿ ಭರ್ಜರಿ ಆಟವಾಡಿದ ಟೀಂ ಇಂಡಿಯಾದ ಬ್ಯಾಟರ್‌ಗಳು ಉತ್ತಮ ಇನ್ನಿಂಗ್ಸ್ ಆಡುವ ಮೂಲಕ ರೋಹಿತ್ ನಾಯಕತ್ವದ ಟೀಂ ಇಂಡಿಯಾ ಅಂತಿಮ ದಿನದಾಟದಲ್ಲಿ ಉತ್ತಮ ಟಾರ್ಗೆಟ್ ಹೊಂದಿದೆ.

ರಜತ್ ಪಾಟೀದಾರ್ ಶತಕ, ಮುಂಬೈ ವಿರುದ್ಧ ಮಧ್ಯಪ್ರದೇಶ ಮೇಲುಗೈ ಶ್ರೇಯಸ್ ಅಯ್ಯರ್ ಮತ್ತು ರವೀಂದ್ರ ಜಡೇಜಾ ಟೀಂ ಇಂಡಿಯಾಗೆ ಆಧಾರವಾಗುವ ಮೂಲಕ ತಂಡದ ಮೊತ್ತ ಹೆಚ್ಚಿಸಲು ಕಾರಣರಾದ್ರು. ಮೂರನೇ ದಿನದಾಟಕ್ಕೆ ಅಜೇಯ 31 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದ ಭರತ್ ಇನ್ನಿಂಗ್ಸ್‌ 43ರನ್‌ಗಳಿಗೆ ಕೊನೆಗೊಂಡಿತು.

98 ಎಸೆತಗಳಲ್ಲಿ 67 ರನ್ ಸಿಡಿಸಿದ್ದ ವಿರಾಟ್ ಕೊಹ್ಲಿ

98 ಎಸೆತಗಳಲ್ಲಿ 67 ರನ್ ಸಿಡಿಸಿದ್ದ ವಿರಾಟ್ ಕೊಹ್ಲಿ

ಇದಕ್ಕೂ ಮೊದಲು ಹನುಮ ವಿಹಾರಿ 20 ರನ್‌ಗೆ ಔಟಾದರು. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ದೃಢವಾಗಿ ನಿಂತ ಶ್ರೇಯಸ್ ಅಯ್ಯರ್ ಮತ್ತು ರವೀಂದ್ರ ಜಡೇಜಾ ಅರ್ಧಶತಕ ದಾಖಲಿಸಿ ತಂಡಕ್ಕೆ ಆಧಾರವಾದ್ರು. 89 ಎಸೆತಗಳಲ್ಲಿ 62 ರನ್ ಕಲೆಹಾಕಿ ಔಟಾದ್ರೆ, ರವೀಂದ್ರ ಜಡೇಜಾ 77 ಎಸೆತಗಳಲ್ಲಿ ಅಜೇಯ 56ರನ್ ಕಲೆಹಾಕಿದ್ದಾರೆ.

ಏಳನೇ ಕ್ರಮಾಂಕದಲ್ಲಿ ಅರ್ಧಶತಕ ದಾಖಲಿಸಿದ ಕೊಹ್ಲಿ ಫಾರ್ಮ್ ವೈಫಲ್ಯದಿಂದ ಕಂಗಾಲಾಗಿದ್ದ ವಿರಾಟ್ ಕೊಹ್ಲಿ ಭಾರತ ಪರ ಎರಡನೇ ಇನ್ನಿಂಗ್ಸ್‌ನಲ್ಲಿ ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅರ್ಧಶತಕ ದಾಖಲಿಸಿದರು. 98 ಎಸೆತಗಳಲ್ಲಿ 67 ರನ್ ಸಿಡಿಸಿದ್ದ ವಿರಾಟ್ ಕೊಹ್ಲಿ ಅವರು ಜಸ್ಪ್ರೀತ್ ಬುಮ್ರಾ ಬೌಲಿಂಗ್‌ನಲ್ಲಿ ಔಟಾದರು. ಕೊಹ್ಲಿ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡಿತ್ತು.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, June 26, 2022, 8:30 [IST]
Other articles published on Jun 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X