ಭಾರತ vs ಇಂಗ್ಲೆಂಡ್: 4ನೇ ಟೆಸ್ಟ್‌ ವೇಳೆ ಟೀಮ್ ಇಂಡಿಯಾ ಕಪ್ಪು ಪಟ್ಟಿ ಧರಿಸಿದ್ದೇಕೆ?!

ಲಂಡನ್: ಲಂಡನ್‌ನ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ಗುರುವಾರದಿಂದ (ಸೆಪ್ಟೆಂಬರ್ 2) ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ನಾಲ್ಕನೇ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿತ್ತು. ಟೀಮ್ ಇಂಡಿಯಾದ ಎಲ್ಲಾ ಆಟಗಾರರ ಜೆರ್ಸಿಯ ತೋಳಿನಲ್ಲೂ ಕಪ್ಪು ಬಣ್ಣದ ಪಟ್ಟಿಯಿತ್ತು. ಈ ಪಟ್ಟಿ ಹಾಕಿದ್ದು ಯಾಕೆ ಗೊತ್ತಾ?!

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ದೊಡ್ಡ ದಾಖಲೆ ಬರೆದ ವಿರಾಟ್ ಕೊಹ್ಲಿಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ದೊಡ್ಡ ದಾಖಲೆ ಬರೆದ ವಿರಾಟ್ ಕೊಹ್ಲಿ

ಭಾರತದ ದಂತಕತೆಗಳಾದ ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ದಿಲೀಪ್ ವೆಂಗ್‌ ಸರ್ಕಾರ್ ಅವರಂಥ ಅನೇಕ ದಂತಕತೆಗಳಿಗೆ ಕೋಚಿಂಗ್‌ ನೀಡಿದ್ದ, ಮಾರ್ಗದರ್ಶಕರಾಗಿದ್ದ ವಾಸುದೇವ ಪರಂಜಪೆ ಅವರು ಆಗಸ್ಟ್ 30ರಂದು ನಿಧನರಾಗಿದ್ದರು. ವಯೋಸಹಜವಾಗಿ ನಿಧನರಾಗಿರುವ ವಾಸು ಪರಂಜಪೆಗೆ ಸಂತಾಪ ಸೂಚಕವಾಗಿ ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದಾರೆ.

ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್ ಪಂದ್ಯ, Live ಸ್ಕೋರ್‌ಕಾರ್ಡ್

ದಂತಕತೆಗಳನ್ನು ರೂಪಿಸಿದ್ದ ಪರಂಜಪೆ

ದಂತಕತೆಗಳನ್ನು ರೂಪಿಸಿದ್ದ ಪರಂಜಪೆ

ಮುಂಬೈ ತಂಡದ ಮಾಜಿ ಆಟಗಾರರಾಗಿ ಬಳಿಕ ಭಾರತೀಯ ಕ್ರಿಕೆಟ್‌ನ ಪ್ರಮುಖ ಕೋಚ್ ಆಗಿದ್ದ ವಾಸು ಪರಂಜಪೆ ಮುಂಬೈ ಮತ್ತು ಬರೋಡಾ ತಂಡ ಪ್ರತಿನಿಧಿಸಿ 29 ಪ್ರಥಮದರ್ಜೆ ಕ್ರಿಕೆಟ್ ಪಂದ್ಯಗಳಲ್ಲಿ 785 ರನ್ ಗಳಿಸಿದ್ದರು. 82 ವರ್ಷ ಪ್ರಾಯವಾಗಿದ್ದ ವಾಸೂ ನಿಧನವಾದಾಗ ಭಾರತೀಯ ಕ್ರಿಕೆಟ್‌ ಲೋಕ ಕಂಬನಿ ಮಿಡಿದಿತ್ತು. ಸಚಿನ್ ತೆಂಡೂಲ್ಕರ್, ರವಿ ಶಾಸ್ತ್ರಿ ಸೇರಿದಂತೆ ಅನೇಕರು ವಸು ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದರು. ಪರಂಜಪೆ ಅವರು ಸುನಿಲ್ ಗವಾಸ್ಕರ್, ದಿಲೀಪ್ ವೆಂಗ್‌ಸರ್ಕಾರ್, ಸಂಜಯ್ ಮಂಜ್ರೇಕರ್, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ರೋಹಿತ್ ಶರ್ಮಾ ಸೇರಿದಂತೆ ಅನೇಕ ಕ್ರಿಕೆಟಿಗರ ವೃತ್ತಿ ಬದುಕು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇದೇ ಕಾರಣಕ್ಕೆ ಟೀಮ್ ಇಂಡಿಯಾ ಸಂತಾಪ ಸೂಚಿಸಿ ನಾಲ್ಕನೇ ಟೆಸ್ಟ್‌ ವೇಳೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿತ್ತು.

ಅಧಿಕೃತ ಟ್ವೀಟ್‌ ಮೂಲಕ ಬಿಸಿಸಿಐ ಮಾಹಿತಿ

ಲಂಡನ್‌ನ ಕೆನ್ನಿಂಗ್ಟನ್‌ ಓವಲ್‌ನಲ್ಲಿ ಗುರುವಾರ (ಸೆಪ್ಟೆಂಬರ್ 2) ಆರಂಭವಾಗಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ನ ಆರಂಭಿಕ ದಿನ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಒಂದು ಟ್ವೀಟ್ ಮಾಡಿತ್ತು. ಈ ಟ್ವೀಟ್‌ನಲ್ಲಿ, 'ಶ್ರೀ ವಾಸುದೇವ್ ಪರಂಜಪೆ ಅವರ ಸಾವಿಗೆ ಗೌರವ ಸೂಚಿಸುವ ಸಲುವಾಗಿ ಭಾರತೀಯ ಕ್ರಿಕೆಟ್ ತಂಡ ಈ ದಿನ ತೋಳಿನ ಕಪ್ಪು ಬ್ಯಾಂಡ್ ಧರಿಸಿ ಆಡುತ್ತಿದೆ' ಎಂದು ಬರೆದುಕೊಳ್ಳಲಾಗಿತ್ತು. ಜೊತೆಗೆ ಕಪ್ಪುಪಟ್ಟಿ ಧರಿಸಿರುವ ಭಾರತೀಯ ತಂಡದ ಚಿತ್ರವನ್ನೂ ಟ್ವೀಟ್ ಜೊತೆಗೆ ಹಾಕಿಕೊಳ್ಳಲಾಗಿತ್ತು.

ಭಾರತ ಮತ್ತೆ ನೀರಸ ಬ್ಯಾಟಿಂಗ್‌

ಭಾರತ ಮತ್ತೆ ನೀರಸ ಬ್ಯಾಟಿಂಗ್‌

ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ತಂಡ ಈ ಪಂದ್ಯದಲ್ಲೂ ಕೆಟ್ಟ ಬ್ಯಾಟಿಂಗ್‌ ಮುಂದುವರೆಸಿದೆ. ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ 11 ರನ್ ಬಾರಿಸಿ ಕ್ರಿಸ್ ವೋಕ್ಸ್ ಓವರ್‌ನಲ್ಲಿ ವಿಕೆಟ್ ಕೀಪರ್ ಜಾನಿ ಬೇರ್ಸ್ಟೋವ್‌ಗೆ ಕ್ಯಾಚಿತ್ತು ನಿರ್ಗಮಿಸಿದ್ದರೆ, ಮತ್ತೊಬ್ಬ ಆರಂಭಿಕ ಆಟಗಾರ ಕೆಎಲ್ ರಾಹುಲ್ 17 ರನ್ ಬಾರಿ ಜೇಮ್ಸ್ ಆ್ಯಂಡರ್ಸನ್‌ಗೆ ವಿಕೆಟ್‌ ನೀಡಿದ್ದಾರೆ. ಮೂರನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಚೇತೇಶ್ವರ್ ಪೂಜಾರ ಕೂಡ 4 ರನ್ ಬಾರಿಸಿ ಜೇಮ್ಸ್ ಆ್ಯಂಡರ್ಸನ್ ಓವರ್‌ನಲ್ಲಿ ಬೇರ್ಸ್ಟೋವ್‌ಗೆ ಕ್ಯಾಚ್‌ ನೀಡಿ ನಿರ್ಗಮಿಸಿದ್ದಾರೆ. ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ 10 ರನ್ ಬಾರಿಸಿ ಔಟ್ ಆಗಿದ್ದಾರೆ. 34ನೇ ಓವರ್‌ ಮುಕ್ತಾಯದ ವೇಳೆ ಭಾರತ 4 ವಿಕೆಟ್‌ ಕಳೆದು 79 ರನ್ ಬಾರಿಸಿತ್ತು. ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ಆಡುತ್ತಿದ್ದರು.

ಭಾರತ ಮತ್ತು ಇಂಗ್ಲೆಂಡ್ ಪ್ಲೇಯಿಂಗ್ XI

ಭಾರತ ಮತ್ತು ಇಂಗ್ಲೆಂಡ್ ಪ್ಲೇಯಿಂಗ್ XI

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಡಬ್ಲ್ಯೂ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

ಬೆಂಚ್: ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಹನುಮ ವಿಹಾರಿ, ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ವೃದ್ಧಿಮಾನ್ ಸಹಾ, ಸೂರ್ಯಕುಮಾರ್ ಯಾದವ್, ಅಭಿಮನ್ಯು ಈಶ್ವರನ್, ಪ್ರಸಿದ್ಧ್ ಕೃಷ್ಣ.

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ಸಿ), ಆಲ್ಲಿ ಪೋಪ್, ಜಾನಿ ಬೈರ್‌ಸ್ಟೊ (ಡಬ್ಲ್ಯೂ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್.

ಬೆಂಚ್: ಸ್ಯಾಮ್ ಕರನ್, ಮಾರ್ಕ್ ವುಡ್, ಡೇನಿಯಲ್ ಲಾರೆನ್ಸ್.

For Quick Alerts
ALLOW NOTIFICATIONS
For Daily Alerts
Story first published: Thursday, September 2, 2021, 19:25 [IST]
Other articles published on Sep 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X