IND vs ENG: ಮೊದಲ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಇಲ್ಲದ ಭಾರತದ ಸಂಭಾವ್ಯ ಆಡುವ 11ರ ಬಳಗ
ಗುರುವಾರ, ಜನವರಿ 25ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗುವ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ.
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಆಡುವುದಿಲ್ಲ ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರೇ ಮಂಗಳವಾರ ಹೇಳಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಹೈ-ವೋಲ್ಟೇಜ್ ಟೆಸ್ಟ್ ಸರಣಿ ಮೊದಲ ಪಂದ್ಯ ಹೈದರಾಬಾದ್‌ನಲ್ಲಿ ಆರಂಭವಾಗಲಿದ್ದು, ಮುಂದಿನ ನಾಲ್ಕು ಪಂದ್ಯಗಳು ವಿಶಾಖಪಟ್ಟಣ, ರಾಜ್‌ಕೋಟ್, ರಾಂಚಿ ಮತ್ತು ಧರ್ಮಶಾಲಾದಲ್ಲಿ ನಡೆಯಲಿವೆ.
ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದರೂ, ಭಾರತ ತಂಡವು ಇಬ್ಬರು ಸ್ಪೆಷಲಿಸ್ಟ್ ವಿಕೆಟ್‌ಕೀಪರ್‌ಗಳನ್ನು ಹೊಂದಿದ್ದು, ಅವರನ್ನು ಆ ಪಾತ್ರಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಭಾರತ ಮುಖ್ಯ ಕೋಚ್ ಹೇಳಿದ್ದಾರೆ.

ಭಾರತ ತಂಡದಲ್ಲಿ ಕೆಎಲ್ ರಾಹುಲ್ ಹೊರತಾಗಿ ಇನ್ನಿಬ್ಬರು ವಿಕೆಟ್‌ಕೀಪರ್‌ಗಳಾದ ಕೆಎಸ್ ಭರತ್ ಮತ್ತು ಧ್ರುವ್ ಜುರೆಲ್ ಸ್ಥಾನ ಪಡೆದಿದ್ದಾರೆ. ಈ ನಿರ್ಧಾರವು ಸರಣಿಯ ಅವಧಿ ಮತ್ತು ಹವಾಮಾನ ಪರಿಸ್ಥಿತಿಗಳಿಂದ ಪ್ರೇರಿತವಾಗಿದೆ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.
"ಕೆಎಲ್ ರಾಹುಲ್ ಅವರು ಸರಣಿಯ ಪರಿಸ್ಥಿತಿಗಳು ಮತ್ತು ಅವಧಿಯನ್ನು ಪರಿಗಣಿಸಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಆಡುವುದಿಲ್ಲ. ನಾವು ಇನ್ನಿಬ್ಬರು ವಿಕೆಟ್-ಕೀಪರ್‌ಗಳನ್ನು ಆಯ್ಕೆ ಮಾಡಿದ್ದೇವೆ ಮತ್ತು ದಕ್ಷಿಣ ಆಫ್ರಿಕಾದಲ್ಲಿ ರಾಹುಲ್ ನಮಗೆ ಅದ್ಭುತವಾದ ಕೆಲಸವನ್ನು ಮಾಡಿದ್ದಾರೆ ಮತ್ತು ಸರಣಿಯನ್ನು ಡ್ರಾ ಮಾಡಲು ನಮಗೆ ಸಹಾಯ ಮಾಡುವಲ್ಲಿ ನಿಜವಾಗಿಯೂ ದೊಡ್ಡ ಪಾತ್ರವನ್ನು ವಹಿಸಿದ್ದಾರೆ".
"ಆದರೆ ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳನ್ನು ಪರಿಗಣಿಸಿ ಮತ್ತು ಈ ಪರಿಸ್ಥಿತಿಗಳಲ್ಲಿ ಆಡುವಾಗ, ನಮ್ಮಲ್ಲಿರುವ ಇತರ ಇಬ್ಬರು ಕೀಪರ್‌ಗಳ ನಡುವೆ ಆಯ್ಕೆ ನಡೆಯಲಿದೆ," ಎಂದು ರಾಹುಲ್ ದ್ರಾವಿಡ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಇದೇ ವೇಳೆ ವೈಯಕ್ತಿಕ ಕಾರಣಗಳಿಂದ ಹೊರಗುಳಿಯಲು ಮನವಿ ಮಾಡಿದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಇಲ್ಲದೆ ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ತೆರಳಲಿದೆ.
ಅನುಭವಿ ಬ್ಯಾಟರ್ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದು, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಉಪನಾಯಕನ ಪಾತ್ರವನ್ನು ವಹಿಸಿಕೊಂಡಿದ್ದಾರೆ. ಭಾರತ ತಂಡದ ವೇಗದ ದಾಳಿಯಲ್ಲಿ ಅವೇಶ್ ಖಾನ್, ಮೊಹಮ್ಮದ್ ಸಿರಾಜ್ ಮತ್ತು ಮುಖೇಶ್ ಕುಮಾರ್ ಕೂಡ 16 ಸದಸ್ಯರ ಬಲಿಷ್ಠ ತಂಡದಲ್ಲಿ ಸೇರಿದ್ದಾರೆ.
ವಿರಾಟ್ ಕೊಹ್ಲಿ ಅವರ 4ನೇ ಕ್ರಮಾಂಕವನ್ನು ಶ್ರೇಯಸ್ ಅಯ್ಯರ್ ತುಂಬಬಹುದು ಮತ್ತು ಕೆಎಲ್ ರಾಹುಲ್ ಪೂರ್ಣ ಫಿಟ್ನೆಸ್‌ನೊಂದಿಗೆ ತಂಡಕ್ಕೆ ಮರಳಿದ ನಂತರ, ಅವರು ಉತ್ತಮ ಪ್ರದರ್ಶನ ನೀಡುತ್ತಿರುವ ಕಾರಣದಿಂದಾಗಿ 5ನೇ ಸ್ಥಾನವನ್ನು ಉಳಿಸಿಕೊಳ್ಳಬಹುದು.
ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತದ ಸಂಭಾವ್ಯ ಆಡುವ 11ರ ಬಳಗ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ರವೀದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications