ಭಾರತ vs ಇಂಗ್ಲೆಂಡ್: ಅಶ್ವಿನ್‌ ಬದಲು ಇಶಾಂತ್‌ಗೆ ತಂಡದಲ್ಲಿ ಸ್ಥಾನ ನೀಡಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಕೊಹ್ಲಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಗುರುವಾರದಂದು ( ಆಗಸ್ಟ್ 12 ) ಆರಂಭವಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ರವಿಚಂದ್ರನ್ ಅಶ್ವಿನ್‌ಗೆ ಸ್ಥಾನ ನೀಡದೆ ಇರುವುದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ.

ಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾದ ಈ ಆಟಗಾರ ಇನ್ನೂ ಚೆನ್ನಾಗಿ ಆಟವಾಡಬೇಕಿದೆ ಎಂದ ಕೊಹ್ಲಿಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾದ ಈ ಆಟಗಾರ ಇನ್ನೂ ಚೆನ್ನಾಗಿ ಆಟವಾಡಬೇಕಿದೆ ಎಂದ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಕೂಡ ರವಿಚಂದ್ರನ್ ಅಶ್ವಿನ್‌ಗೆ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ನೀಡಿರಲಿಲ್ಲ. ಇದೀಗ ಇಂಗ್ಲೆಂಡ್ ವಿರುದ್ಧದ ಎರಡನೆ ಟೆಸ್ಟ್ ಪಂದ್ಯದಲ್ಲಿಯೂ ಸಹ ರವಿಚಂದ್ರನ್ ಅಶ್ವಿನ್‌ಗೆ ತಂಡದಲ್ಲಿ ಸ್ಥಾನ ನೀಡದೆ ಹೊರಗಿಡಲಾಗಿದೆ.

ಭಾರತ vs ಇಂಗ್ಲೆಂಡ್: ಸಿರಾಜ್ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬುದ್ಧಿ ಹೇಳಿದ ದಿನೇಶ್ ಕಾರ್ತಿಕ್ಭಾರತ vs ಇಂಗ್ಲೆಂಡ್: ಸಿರಾಜ್ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬುದ್ಧಿ ಹೇಳಿದ ದಿನೇಶ್ ಕಾರ್ತಿಕ್

ಕ್ರಿಕೆಟ್ ಕಾಶಿ ಎಂದು ಕರೆಸಿಕೊಳ್ಳುವ Lord's ಸ್ಟೇಡಿಯಂ | The Home of Cricket | Oneindia Kannada

ಪಂದ್ಯದ ಟಾಸ್ ವೇಳೆ ವಿರಾಟ್ ಕೊಹ್ಲಿಗೆ ರವಿಚಂದ್ರನ್ ಅಶ್ವಿನ್‌ಗೆ ತಂಡದಲ್ಲಿ ಸ್ಥಾನ ನೀಡದೆ ಇರಲು ಕಾರಣವೇನು ಎಂಬ ಪ್ರಶ್ನೆ ಕೂಡ ಎದುರಾಯಿತು. ಈ ವೇಳೆ ರವಿಚಂದ್ರನ್ ಅಶ್ವಿನ್‌ಗೆ ತಂಡದಲ್ಲಿ ಸ್ಥಾನ ನೀಡದೆ ಇರುವುದರ ಕುರಿತು ಮಾತನಾಡಿದ ವಿರಾಟ್ ಕೊಹ್ಲಿ ತಮ್ಮ ನಿರ್ಧಾರದ ಹಿಂದಿನ ವಿಷಯವನ್ನು ಬಿಚ್ಚಿಟ್ಟಿದ್ದಾರೆ. 'ರಚಿಸಲಾಗಿದ್ದ ಆಟಗಾರರ ತಂಡದಲ್ಲಿ ರವಿಚಂದ್ರನ್ ಅಶ್ವಿನ್ ಕೂಡ ಸ್ಥಾನ ಪಡೆದುಕೊಂಡಿದ್ದರು. ಆದರೆ ಲಾರ್ಡ್ಸ್ ಪಿಚ್ ವರದಿಯನ್ನು ನೋಡಿದ ನಂತರ ಸ್ಪಿನ್ ಬೌಲರ್ ಬದಲು ವೇಗದ ಬೌಲರ್ ಅಗತ್ಯತೆ ಇದೆ ಎಂಬುದು ತಿಳಿಯಿತು. ಹೀಗಾಗಿ ರವಿಚಂದ್ರನ್ ಅಶ್ವಿನ್ ಬದಲು ಇಶಾಂತ್ ಶರ್ಮಾಗೆ ಸ್ಥಾನ ನೀಡಬೇಕಾಯಿತು' ಎಂದು ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಕ್ರಿಕೆಟ್ ಜಗತ್ತಿನಲ್ಲಿ ಆಗಸ್ಟ್ 12ರಂದು ನಡೆದದ್ದೇನು?ಕ್ರಿಕೆಟ್ ಜಗತ್ತಿನಲ್ಲಿ ಆಗಸ್ಟ್ 12ರಂದು ನಡೆದದ್ದೇನು?

2014ರಲ್ಲಿ ಜುಲೈ ತಿಂಗಳಿನಲ್ಲಿ ಲಾರ್ಡ್ಸ್ ಅಂಗಳದಲ್ಲಿ ನಡೆದಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದ ಎರಡನೇ ಇಂಗ್ಲೆಂಡ್‌ನಲ್ಲಿ 74 ರನ್ ನೀಡಿ 7 ವಿಕೆಟ್ ಪಡೆದು ಕೊಳ್ಳುವುದರ ಮೂಲಕ ಅತ್ಯದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಲಾರ್ಡ್ಸ್ ಅಂಗಳದಲ್ಲಿ ಅತ್ಯುತ್ತಮ ಆಟವನ್ನಾಡಿರುವ ಅನುಭವವನ್ನು ಹೊಂದಿರುವಂತಹ ಕಿಶನ್ ಶರ್ಮಾಗೆ ಅವಕಾಶ ನೀಡಲಾಗಿದೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ಟೀಮ್ ಇಂಡಿಯಾಗೆ ವಿಶ್ವಕಪ್ ಗೆಲ್ಲಿಸಿಕೊಡುವ ಆಸೆ ವ್ಯಕ್ತಪಡಿಸಿದ ರವೀಂದ್ರ ಜಡೇಜಾಟೀಮ್ ಇಂಡಿಯಾಗೆ ವಿಶ್ವಕಪ್ ಗೆಲ್ಲಿಸಿಕೊಡುವ ಆಸೆ ವ್ಯಕ್ತಪಡಿಸಿದ ರವೀಂದ್ರ ಜಡೇಜಾ

ಲಾರ್ಡ್ಸ್ ಕ್ರೀಡಾಂಗಣದ ಪಿಚ್ ಬೌನ್ಸಿ ಪಿಚ್ ಆಗಿರುವ ಕಾರಣ ಇಲ್ಲಿ ಸ್ಪಿನ್ ಬೌಲರ್‌ಗಳಿಗಿಂತ ವೇಗದ ಬೌಲರ್‌ಗಳಿಗೆ ಹೆಚ್ಚಿನ ವಿಕೆಟ್‍ಗಳು ಬೀಳುತ್ತವೆ. ಹೀಗಾಗಿ ರವಿಚಂದ್ರನ್ ಅಶ್ವಿನ್ ಬದಲಾಗಿ ಇಶಾಂತ್ ಶರ್ಮಾಗೆ ಅವಕಾಶ ನೀಡಲಾಗಿದೆ ಎಂದು ಕೂಡ ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಈ ಮೂಲಕ ರವಿಚಂದ್ರನ್ ಅಶ್ವಿನ್ ಸತತ ಎರಡನೇ ಪಂದ್ಯದಲ್ಲಿ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧ ನಾಟಿಂಗ್ ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯದಲ್ಲಿಯೂ ಸಹ ರವಿಚಂದ್ರನ್ ಅಶ್ವಿನ್ ಅವಕಾಶವನ್ನು ಪಡೆದುಕೊಂಡಿರಲಿಲ್ಲ, ಇದೀಗ ಎರಡನೇ ಪಂದ್ಯದಲ್ಲಿಯೂ ಸಹ ರವಿಚಂದ್ರನ್ ಅಶ್ವಿನ್ ಅವಕಾಶ ಪಡೆದುಕೊಳ್ಳದೇ ಬೆಂಚ್ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯದಲ್ಲಿ ವೇಗಿಗಳಿಗೆ ಹೆಚ್ಚಿನ ಆದ್ಯತೆ ನೀಡುವುದರ ಕಾರಣ ನೀಡಿ ರವಿಚಂದ್ರನ್ ಅಶ್ವಿನ್ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಗುತ್ತಾ ಅಥವಾ ಬೆಂಚ್ ಕಾಯುವ ಪರಿಸ್ಥಿತಿ ಮುಂದುವರಿಯುತ್ತಾ ಎಂಬುದನ್ನು ಕಾದು ನೋಡಬೇಕು.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, August 12, 2021, 21:24 [IST]
Other articles published on Aug 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X