ಆಡುವ ಬಳಗದಲ್ಲಿ ಕೊಹ್ಲಿಗೆ ಸ್ಥಾನ ವಿಚಾರ: ಮಾರ್ಮಿಕ ಮಾತುಗನ್ನಾಡಿ ಅಚ್ಚರಿ ಮೂಡಿಸಿದ ಇಶಾಂತ್ ಶರ್ಮಾ!

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಈ ಟಿ20 ಸರಣಿಯಲ್ಲಿ ಮೇಲುಗೈ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅಮೋಘ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿತ್ತು. ಹಾಗಿದ್ದರೂ ಎರಡನೇ ಪಂದ್ಯದಲ್ಲಿ ಪ್ರಮುಖ ಬದಲಾವಣೆಗಳಾಗಲಿದೆ.
ಇದಕ್ಕೆ ಕಾರಣ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಆಟಗಾರರಾದ ವಿರಾಟ್ ಕೊಹ್ಲಿ, ರಿಷಭ್ ಪಂತ್, ಜಸ್ಪ್ರೀತ್ ಬೂಮ್ರಾ ಮೊದಲಾದ ಆಟಗಾರರು ಈ ಪಂದ್ಯಕ್ಕೆ ಲಭ್ಯವಾಗುತ್ತಿದ್ದಾರೆ. ಆದರೆ ಮೊದಲ ಪಂದ್ಯದಲ್ಲಿ ಬಹುತೇಕ ಆಟಗಾರರಿಂದ ಅದ್ಭುತ ಪ್ರದರ್ಶನ ಹೊರವಬಂದಿದ್ದು ಯಾವ ಆಟಗಾರರನ್ನು ಆಡುವ ಬಳಗದಿಂದ ಹೊರಗಿಡಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಭಾರತದ ಅನುಭವಿ ಕ್ರಿಕೆಟಿಗ ಇಶಾಂತ್ ಶರ್ಮಾ ವಿರಾಟ್ ಕೊಹ್ಲಿ ಆಡುವ ಬಳಗಕ್ಕೆ ಸೇರ್ಪಡೆ ಕುರಿತಾಗಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಖಂಡಿತಾ ವಿರಾಟ್ ಕೊಹ್ಲಿ ಆಡಲಿದ್ದಾರೆ
ಭಾರತದ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ಎರಡನೇ ಪಂದ್ಯಕ್ಕೆ ವಿರಾಟ್ ಕೊಹ್ಲಿ ಲಭ್ಯವಿದ್ದರೆ ಖಂಡಿತಾ ಅವರು ಆಡುವ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅದ್ಭುತ ಪ್ರದರ್ಶನ ನೀಡಿರುವ ದೀಪಕ್ ಹೂಡಾ ಪಾಲಿಗೆ ಇದು ಕಂಡಿತಾ ಕಠಿಣ ಸಂಗತಿಯಾಗಿರಲಿದೆ ಎಂದಿದ್ದಾರೆ ಅನುಭವಿ ಆಟಗಾರ.

ಕೊಹ್ಲಿ ಲಭ್ಯವಿದ್ದಾರೆ ಎಂದರೆ ಅವರು ಅಡುತ್ತಾರೆ ಎಂದರ್ಥ!
ಮೊದಲ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅದ್ಭುತ ಪ್ರದರ್ಶನ ನೀಡಿರುವ ದೀಪಕ್ ಹೂಡಾ ಬಗ್ಗೆ ಇಶಾಂತ್ ಶರ್ಮಾ ಬೇಸರದ ಮಾತುಗಳನ್ನಾಡಿದ್ದಾರೆ. "ನನ್ನ ಪ್ರಕಾರ ದೀಪಕ್ ಹೂಡಾಗೆ ಇದು ಕಠಿಣ ಸಂಗತಿಯಾಗಿರಲಿದೆ. ಯಾಕೆಂದರೆ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇದೊಂತರಾ ನೀವು ಎಷ್ಟೇ ಉತ್ತಮ ಪ್ರದರ್ಶನ ನೀಡಿದರೂ ಲೆಕ್ಕಕ್ಕೆ ಬರುವುದಿಲ್ಲ. ನಿಜ ಏನೆಂದರೆ ಕೊಹ್ಲಿ ಲಭ್ಯವಿದ್ದಾರೆ ಎಂದರೆ ಅವರು ಆಡುತ್ತಾರೆ ಎಂದರ್ಥ" ಎಂದು ಇಶಾಂತ್ ಶರ್ಮಾ ಮಾರ್ಮಿಕವಾಗಿ ನುಡಿದಿದ್ದಾರೆ.

ಜಡೇಜಾ ಕಣಕ್ಕಿಳಿಯುವುದು ಖಚಿತ
ಇನ್ನು ಮೊದಲ ಪಂದ್ಯಕ್ಕೆ ಅಲಭ್ಯವಾಗಿದ್ದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಸಹಜವಾಗಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದಿದ್ದಾರೆ. ರವೀಂದ್ರ ಜಡೇಜಾಗಾಗಿ ಅಕ್ಷರ್ ಪಟೇಲ್ ಸ್ಥಾನವನ್ನು ಬಿಟ್ಟುಕೊಡಲಿದ್ದಾರೆ ಎಂದಿರುವ ಇಶಾಂತ್ ಶರ್ಮಾ ಜಡೇಜಾ ಬ್ಯಾಟಿಂಗ್ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. "ರವೀಂದ್ರ ಜಡೇಜಾ ಆಡುವ ಬಳಗದಲ್ಲಿ ಸೇರಿಕೊಳ್ಳಳಬೇಕೇಕಿ. ಅಕ್ಷರ್ ಪಟೇಲ್ ಅವರಿಗೆ ಸ್ಥಾನ ಬಿಟ್ಟುಕೊಡಬೇಕಾಗುತ್ತದೆ. ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ರೀತಿ ಅವರು ಕೂಡ ದೊಡ್ಡ ಹೊಡೆತಗಳನ್ನು ಬಾರಿಸುವ ಸಾಮರ್ಥ್ಯ ಹೊಂದಿದ್ದಾರೆ" ಎಂದಿದ್ದಾರೆ ಇಶಾಂತ್ ಶರ್ಮಾ.

ಎರಡನೇ ಪಂದ್ಯದ ಸ್ಕ್ವಾಡ್ ಹೀಗಿದೆ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ದೀಪಕ್ ಹೂಡಾ, ಅಕ್ಸರ್ ಪಟೇಲ್, ಶ್ರೇಯಸ್ ಐಯ್ಯರ್ , ದಿನೇಶ್ ಕಾರ್ತಿಕ್, ಅವೇಶ್ ಖಾನ್, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಜೇಸನ್ ರಾಯ್, ಡೇವಿಡ್ ಮಲನ್, ಲಿಯಾಮ್ ಲಿವಿಂಗ್ಸ್ಟೋನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಟೈಮಲ್ ಮಿಲ್ಸ್, ರೀಸ್ ಟೋಪ್ಲಿ, ಮ್ಯಾಥ್ಯೂ ಪಾರ್ಕಿನ್ಸನ್, ಡೇವಿಡ್ ವಿಲ್ಲಿ, ಫಿಲಿಪ್ ಸಾಲ್ಟ್, ರಿಚರ್ಡ್ ಗ್ಲೀಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications