ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಕೊಹ್ಲಿ ಬದಲು ಬ್ಯಾಟಿಂಗ್ ಮಾಡುತ್ತೇನೆ ಎಂದು ಮೈದಾನಕ್ಕೆ ನುಗ್ಗಿದ ಜಾರ್ವೋ

IND vs ENG: Jarvo 69 a Fan with Indian jersey enters playing area at Leeds

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಸದ್ದು ಮಾಡುತ್ತಿರುವ ಕ್ರಿಕೆಟ್ ಸರಣಿ ಎಂದರೆ ಅದು ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಪಟೌಡಿ ಟೆಸ್ಟ್ ಸರಣಿ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಈ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ.

ಭಾರತೀಯರ ಆಟ ನಡೆಯುವುದಿಲ್ಲ; ನಾಲ್ಕನೇ ದಿನದಾಟಕ್ಕೂ ಮುನ್ನವೇ ಎಚ್ಚರಿಕೆ ನೀಡಿದ ಇಂಗ್ಲೆಂಡ್ ಆಟಗಾರಭಾರತೀಯರ ಆಟ ನಡೆಯುವುದಿಲ್ಲ; ನಾಲ್ಕನೇ ದಿನದಾಟಕ್ಕೂ ಮುನ್ನವೇ ಎಚ್ಚರಿಕೆ ನೀಡಿದ ಇಂಗ್ಲೆಂಡ್ ಆಟಗಾರ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಸದ್ಯ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಮೂರು ದಿನಗಳ ಆಟ ಮುಕ್ತಾಯವಾಗಿದೆ. ಟೀಮ್ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ್ದು ರೋಹಿತ್ ಶರ್ಮಾ 59 ರನ್ ಬಾರಿಸಿ ಉತ್ತಮ ಆರಂಭ ನೀಡಿದರೆ ಚೇತೇಶ್ವರ್ ಪೂಜಾರ ಅಜೇಯ 91 ಮತ್ತು ನಾಯಕ ವಿರಾಟ್ ಕೊಹ್ಲಿ ಅಜೇಯ 45 ರನ್ ಬಾರಿಸಿದ್ದಾರೆ. ಹೀಗೆ ರೋಹಿತ್ ಶರ್ಮಾ ಚೇತೇಶ್ವರ್ ಪೂಜಾರ ಮತ್ತು ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಮೂರನೇ ದಿನದಾಟದಂತ್ಯಕ್ಕೆ 2 ವಿಕೆಟ್ ಕಳೆದುಕೊಂಡಿರುವ ಟೀಮ್ ಇಂಡಿಯಾ 212 ರನ್ ಬಾರಿಸಿದ್ದು 139 ರನ್‌ಗಳ ಹಿನ್ನಡೆಯನ್ನು ಅನುಭವಿಸಿದೆ.

ಪೂಜಾರ ಕಳಪೆ ಬ್ಯಾಟಿಂಗ್ ಬಗ್ಗೆ ಡ್ರೆಸಿಂಗ್ ರೂಮ್‌ನಲ್ಲಿ ಆಗುತ್ತಿದ್ದ ಚರ್ಚೆಯನ್ನು ಬಹಿರಂಗಪಡಿಸಿದ ರೋಹಿತ್ ಶರ್ಮಾಪೂಜಾರ ಕಳಪೆ ಬ್ಯಾಟಿಂಗ್ ಬಗ್ಗೆ ಡ್ರೆಸಿಂಗ್ ರೂಮ್‌ನಲ್ಲಿ ಆಗುತ್ತಿದ್ದ ಚರ್ಚೆಯನ್ನು ಬಹಿರಂಗಪಡಿಸಿದ ರೋಹಿತ್ ಶರ್ಮಾ

ಹೀಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಂದು ರೋಹಿತ್ ಶರ್ಮಾ 59 ರನ್ ಗಳಿಸಿ ಔಟ್ ಆಗಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದ್ದರು. ಹೀಗೆ ರೋಹಿತ್ ಶರ್ಮಾ ಔಟ್ ಆದ ಬಳಿಕ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕಣಕ್ಕಿಳಿಯಬೇಕಿತ್ತು. ಆದರೆ ಜಾರ್ವೋ ಎಂಬಾತ ಭಾರತ ತಂಡದ ಜೆರ್ಸಿ ತೊಟ್ಟು, ಭಾರತೀಯ ಬ್ಯಾಟ್ಸ್‌ಮನ್‌ಗಳ ರೀತಿಯ ಹೆಲ್ಮೆಟ್, ಪ್ಯಾಡ್ ಹಾಕಿಕೊಂಡು, ಬ್ಯಾಟ್ ಹಿಡಿದು ನಾನೂ ಕೂಡ ಟೀಮ್ ಇಂಡಿಯಾದ ಆಟಗಾರ ಹಾಗೂ ಇದೀಗ ಬ್ಯಾಟ್ ಮಾಡುವುದು ನನ್ನ ಸರದಿ ಎಂದು ಮೈದಾನಕ್ಕಿಳಿದಿದ್ದ. ಆತ ಮೈದಾನಕ್ಕೆ ಬರುತ್ತಿದ್ದಂತೆ ಆತನ ಬಳಿ ಧಾವಿಸಿದ ಸೆಕ್ಯೂರಿಟಿಗಳು ಆತನನ್ನು ಬಲವಂತವಾಗಿ ಮೈದಾನದಿಂದ ಹೊರಕ್ಕೆ ಹಾಕಿದರು. ಸದ್ಯ ಜಾರ್ವೋ ನಾನೂ ಕೂಡ ಟೀಮ್ ಇಂಡಿಯಾ ಪರ ಬ್ಯಾಟಿಂಗ್ ಮಾಡಬೇಕು ಎಂದು ಪಟ್ಟು ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆ ವಿಡಿಯೋ ಮುಂದೆ ಇದೆ ನೋಡಿ..

ಈ ಜಾರ್ವೋ ಈ ರೀತಿ ಮೈದಾನಕ್ಕೆ ನುಗ್ಗಿ ನಾನೂ ಸಹಾ ಟೀಮ್ ಇಂಡಿಯಾ ಆಟಗಾರ ಎಂದು ಹೇಳಿಕೊಂಡು ಗೊಂದಲ ಸೃಷ್ಟಿಸಿರುವುದು ಇದೇ ಮೊದಲೇನಲ್ಲ ಈ ಹಿಂದೆ ಭಾರತ ಮತ್ತು ಇಂಗ್ಲೆಂಡ್ ನಡುವೆ ಲಾರ್ಡ್ಸ್ ಅಂಗಳದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ವೇಳೆಯಲ್ಲಿಯೂ ಸಹ ಈತ ಇದೇ ರೀತಿ ಮೈದಾನಕ್ಕೆ ನುಗ್ಗಿ ನಾನೂ ಕೂಡ ಟೀಮ್ ಇಂಡಿಯಾ ಆಟಗಾರ ಎಂದು ಹೇಳಿಕೊಂಡು ಭಾರತ ತಂಡದ ವಿವಿಧ ಆಟಗಾರರಿಗೆ ಫೀಲ್ಡ್ ಸೆಟ್ ಮಾಡಲು ಮುಂದಾಗಿದ್ದ. ಹೌದು, ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಬ್ಯಾಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮೈದಾನಕ್ಕೆ ನುಗ್ಗಿದ ಜಾರ್ವೋ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಸಿದ್ದ.

ತಂಡದ ಸ್ಟಾರ್ ಆಲ್-ರೌಂಡರ್ ಕಳೆದುಕೊಂಡ RCB | Oneindia Kannada

ತದನಂತರ ಮೈದಾನಕ್ಕೆ ಆಗಮಿಸಿದ ಲಾರ್ಡ್ಸ್ ಅಂಗಳದ ಸಿಬ್ಬಂದಿ ಆತನನ್ನು ಮೈದಾನದಿಂದ ಹೊರ ಹಾಕಿದರು. ಭಾರತ ಕ್ರಿಕೆಟ್ ತಂಡದ ಈ ಅಭಿಮಾನಿ ಮೈದಾನಕ್ಕೆ ನುಗ್ಗಿ ನಾನೂ ಸಹ ಆಟವಾಡಬೇಕು ಎಂದು ಪಟ್ಟು ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Story first published: Saturday, August 28, 2021, 16:23 [IST]
Other articles published on Aug 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X