ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಗೆಲ್ಲಲು ಈ ಇಬ್ಬರು ಆಟಗಾರರು ಇರಲೇಬೇಕು: ಸುನಿಲ್ ಗವಾಸ್ಕರ್

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ 4 ಪಂದ್ಯಗಳು ಈಗಾಗಲೇ ಮುಗಿದಿದ್ದು ಇಂಗ್ಲೆಂಡ್ ವಿರುದ್ಧ ಮೇಲುಗೈ ಸಾಧಿಸಿರುವ ಟೀಮ್ ಇಂಡಿಯಾ ಸರಣಿಯಲ್ಲಿ 2-1 ಅಂತರದ ಮುನ್ನಡೆಯನ್ನು ಸಾಧಿಸಿದೆ. ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಲಂಡನ್ ನಗರದ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 10ರ ಶುಕ್ರವಾರದಂದು ಆರಂಭವಾಗಲಿದೆ.
ಸದ್ಯ ನಡೆದಿರುವ 4 ಪಂದ್ಯಗಳ ಪೈಕಿ 2 ಪಂದ್ಯಗಳಲ್ಲಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸಹ ಸರಣಿಯಲ್ಲಿ ವಿಜೇತ ತಂಡವಾಗಿ ಹೊರಹೊಮ್ಮಲಿದೆ. ಅತ್ತ ಸರಣಿಯಲ್ಲಿ ನಡೆದಿರುವ 4 ಪಂದ್ಯಗಳ ಪೈಕಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಜಯ ಗಳಿಸಿರುವ ಇಂಗ್ಲೆಂಡ್ ಮ್ಯಾಂಚೆಸ್ಟರ್ ಅಂಗಳದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಹೌದು, ಸರಣಿಯಲ್ಲಿ 1-2 ಅಂತರದ ಹಿನ್ನಡೆಯನ್ನು ಅನುಭವಿಸಿರುವ ಇಂಗ್ಲೆಂಡ್ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಜಯ ಸಾಧಿಸಿದರೆ ಮಾತ್ರ ಸರಣಿ ಸಮಬಲದಲ್ಲಿ ಅಂತ್ಯಗೊಳ್ಳಲಿದೆ, ಇಲ್ಲವಾದಲ್ಲಿ ಸರಣಿ ಟೀಮ್ ಇಂಡಿಯಾ ಪಾಲಾಗುವುದು ಖಚಿತ. ಹೀಗಾಗಿ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಭಾರತಕ್ಕಿಂತ ಇಂಗ್ಲೆಂಡ್ ತಂಡಕ್ಕೆ ಬಹುಮುಖ್ಯವಾಗಿದೆ ಎಂದರೆ ತಪ್ಪಾಗಲಾರದು.
ಆದರೂ ಸಹ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿ ಸರಣಿಯನ್ನು ಕೈವಶ ಮಾಡಿಕೊಳ್ಳಬೇಕಾದ ಅಗತ್ಯತೆ ಇದೆ. ಒಂದುವೇಳೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನೀಡಿದ ಪ್ರದರ್ಶನದ ರೀತಿಯೇ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿಯೂ ಟೀಮ್ ಇಂಡಿಯಾ ಪ್ರದರ್ಶನ ನೀಡಿದರೆ ಸರಣಿ ಡ್ರಾನಲ್ಲಿ ಅಂತ್ಯಗೊಳ್ಳುವ ಸಂಭವವಿದೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಐದನೇ ಟೆಸ್ಟ್ ಪಂದ್ಯವನ್ನು ಟೀಮ್ ಇಂಡಿಯಾ ಗೆಲ್ಲಬೇಕೆಂದರೆ ಈ ಇಬ್ಬರು ಆಟಗಾರರು ಭಾಗವಹಿಸಲೇಬೇಕು ಎಂದು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಈ ಕೆಳಕಂಡಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಅಂತಿಮ ಟೆಸ್ಟ್ ಪಂದ್ಯ ಗೆಲ್ಲಲು ಈ ಇಬ್ಬರು ಆಟಗಾರರು ತಂಡದಲ್ಲಿರಬೇಕು
ಭಾರತ ಮತ್ತು ಇಂಗ್ಲೆಂಡ್ ನಡುವೆ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐದನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ಟೀಮ್ ಇಂಡಿಯಾದ ಪ್ರಮುಖ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ತಂಡದಲ್ಲಿ ಇರಲೇಬೇಕು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಸರಣಿ ಇನ್ನೂ ಸಂಪೂರ್ಣವಾಗಿ ಟೀಮ್ ಇಂಡಿಯಾದ ಕೈವಶವಾಗಿಲ್ಲ ಬದಲಾಗಿ 2-1 ಅಂತರದಿಂದ ಟೀಮ್ ಇಂಡಿಯಾ ಮುನ್ನಡೆಯನ್ನು ಕಾಯ್ದುಕೊಂಡಿದೆ ಅಷ್ಟೇ. ಒಂದುವೇಳೆ ಟೀಮ್ ಇಂಡಿಯಾ ಸರಣಿಯಲ್ಲಿ 2-0 ಮುನ್ನಡೆಯನ್ನು ಕಾಯ್ದುಕೊಂಡಿದ್ದರೆ ಜಸ್ಪ್ರೀತ್ ಬೂಮ್ರಾರನ್ನು ಅಂತಿಮ ಟೆಸ್ಟ್ ಪಂದ್ಯದಿಂದ ಕೈಬಿಡಬಹುದಾಗಿತ್ತು ಎಂದು ಸುನೀಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಸಿರಾಜ್ ಬದಲು ಮೊಹಮ್ಮದ್ ಶಮಿ ಆಡಲಿ
ಇನ್ನು ಜಸ್ಪ್ರೀತ್ ಬೂಮ್ರಾ ಜೊತೆ ಮೊಹಮ್ಮದ್ ಶಮಿ ಕೂಡ ಅಂತಿಮ ಟೆಸ್ಟ್ ಪಂದ್ಯವನ್ನು ಆಡಲೇಬೇಕು ಎಂದು ಅಭಿಪ್ರಾಯಪಟ್ಟಿರುವ ಹಿರಿಯ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಅಂತಿಮ ಟೆಸ್ಟ್ ಪಂದ್ಯದಿಂದ ಮೊಹಮ್ಮದ್ ಸಿರಾಜ್‌ನ್ನು ಕೈಬಿಟ್ಟು ಮೊಹಮ್ಮದ್ ಶಮಿಗೆ ಆಡುವ ಅವಕಾಶ ನೀಡಬಹುದು ಎಂದು ಸಲಹೆಯನ್ನು ನೀಡಿದ್ದಾರೆ.

ಸರಣಿಯಲ್ಲಿ ಬೂಮ್ರಾ, ಸಿರಾಜ್ ಮತ್ತು ಮೊಹಮ್ಮದ್ ಶಮಿ ಪ್ರದರ್ಶನ ಹೀಗಿದೆ
ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 4 ಪಂದ್ಯಗಳು ಮುಗಿದ ನಂತರ ಜಸ್ಪ್ರೀತ್ ಬೂಮ್ರಾ 18 ವಿಕೆಟ್‍ಗಳನ್ನು ಪಡೆದು ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಇನ್ನುಳಿದಂತೆ ಮೊಹಮ್ಮದ್ ಸಿರಾಜ್ 14 ವಿಕೆಟ್‍ಗಳನ್ನು ಪಡೆದಿದ್ದರೆ, ಮೊಹಮ್ಮದ್ ಶಮಿ 11 ವಿಕೆಟ್‍ಗಳನ್ನು ಪಡೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications