ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: 'ಶತಕ'ದ ಮೇಲೆ ಕಣ್ಣಿಟ್ಟ ಭಾರತದ ವೇಗಿ ಜಸ್ಪ್ರೀತ್ ಬೂಮ್ರಾ

Ind vs Eng: Jasprit Bumrah eye on century in test cricket

ಲಂಡನ್, ಸೆಪ್ಟೆಂಬರ್ 3: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್‌ಗಳು ಕೂಡ ಅಬ್ಬರಿಸುವ ಲಕ್ಷಣ ತೋರಿಸಿದ್ದಾರೆ. ಮೊದಲ ದಿನವೇ ಇಂಗ್ಲೆಂಡ್ ತಂಡದ ಮೂವರು ಪ್ರಮುಖ ಆಟಗಾರರ ವಿಕೆಟ್ ಪಡೆಯುವಲ್ಲಿ ಟೀಮ್ ಇಂಡಿಯಾ ವೇಗಿಗಳು ಯಶಸ್ವಿಯಾಗಿದ್ದರು. ಎರಡನೇ ದಿನ ಇಂಗ್ಲೆಂಡ್ ದಾಂಡಿಗರನ್ನು ಮತ್ತಷ್ಟು ಅಗ್ಗಕ್ಕೆ ಆಲೌಟ್ ಮಾಡುವತ್ತ ಟೀಮ್ ಇಂಡಿಯಾ ಬೌಲರ್‌ಗಳು ಚಿತ್ತ ಹರಿಸಿದ್ದಾರೆ. ಈ ಮಧ್ಯೆ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಮೈಲಿಗಲ್ಲೊಂದಕ್ಕೆ ಸನಿಹದಲ್ಲಿದ್ದು ಇಂಗ್ಲೆಂಡ್ ವಿರುದ್ಧಧ ಮೊದಲ ಇನ್ನಿಂಗ್ಸ್‌ನಲ್ಲಿಯೇ ಸಾಧಿಸುವ ವಿಶ್ವಾಸದಲ್ಲಿದ್ದಾರೆ.

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನ ಆರಂಭವಾಗುವ ವೇಳೆ ಬೂಮ್ರಾ 97 ವಿಕೆಟ್‌ಗಳನ್ನು ತಮ್ಮ ಖಾತೆಯಲ್ಲಿ ಹೊಂದಿದ್ದರು. ನಾಲ್ಕನೇ ಟೆಸ್ಟ್‌ನ ಮೊದಲ ದಿನ ರೋರಿ ಬರ್ನ್ಸ್ ಹಾಗೂ ಹಮೀದ್ ವಿಕೆಟ್ ಪಡೆಯುವ ಮೂಲಕ ಎರಡು ವಿಕೆಟ್‌ಗಳನ್ನು ತಮ್ಮ ಖಾತೆಗೆ ಸೇರ್ಪಡೆಗೊಳಿಸಿದ್ದಾರೆ. ಈ ಮೂಲಕ ಜಸ್ಪ್ರೀತ್ ಬೂಮ್ರಾ 99 ವಿಕೆಟ್‌ಳನ್ನು ತಮ್ಮ ಖಾತೆಯಲ್ಲಿ ಹೊಂದಿದ್ದಾರೆ. ಇನ್ನು ಒಮದು ವಿಕೆಟ್ ಪಡೆಯಲು ಬೂಮ್ರಾ ಯಶಸ್ವಿಯಾದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಕೆಟ್‌ಗಳ ಶತಕ ಬಾರಿಸಿದಂತಾಗುತ್ತದೆ.

ಬ್ಯಾಟಿಂಗ್‌ನಲ್ಲಿ ನೀರಸ ಪ್ರದರ್ಶನ: ಮೊದಲು ಬ್ಯಾಟಿಂಗ್ ಮಾಡುವ ಸವಾಲು ಪಡೆದ ಟೀಮ್ ಇಂಡಿಯಾ ಬ್ಯಾಟಿಂಗ್‌ನಲ್ಲಿ ನೀರಸ ಪ್ರದರ್ಶನ ನೀಡುವ ಮೂಲಕ ನಿರಾಸೆ ಅನುಭವಿಸಿತು. ಆದರೆ ನಾಯಕ ವಿರಾಟ್ ಕೊಹ್ಲಿ ಹಾಗೂ ಶಾರ್ದೂಲ್ ಠಾಕೂರ್ ಸಾಹಸದಿಂದಾಗಿ 191 ರನ್‌ಗಳನ್ನು ಗಳಿಸುವಲ್ಲಿ ಭಾರತ ಯಶಸ್ವಿಯಾಗಿದೆ. ಈ ಇಬ್ಬರು ಕೂಡ ಅರ್ಧ ಶತಕದ ಕೊಡುಗೆಯನ್ನು ನೀಡಿ ಭಾರೀ ಕುಸಿತದಿಮದ ತಪ್ಪಿಸಿದ್ದಾರೆ.

'ಅತಿ ಕೆಟ್ಟ ಪದಗಳಿಂದ ಈ ತಂಡದ ಎಲ್ಲಾ ಆಟಗಾರರು ನನ್ನನ್ನು ನಿಂದಿಸಿದ್ದರು'; ಕಹಿ ಘಟನೆ ನೆನೆದ ಸೆಹ್ವಾಗ್'ಅತಿ ಕೆಟ್ಟ ಪದಗಳಿಂದ ಈ ತಂಡದ ಎಲ್ಲಾ ಆಟಗಾರರು ನನ್ನನ್ನು ನಿಂದಿಸಿದ್ದರು'; ಕಹಿ ಘಟನೆ ನೆನೆದ ಸೆಹ್ವಾಗ್

ಬೌಲಿಂಗ್‌ನಲ್ಲಿ ತಿರುಗಿಬಿದ್ದ ವಿರಾಟ್ ಬಳಗ: ಇನ್ನು 191 ರನ್‌ಗಳಿಗೆ ಆಲೌಟ್ ಆದ ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್‌ನಲ್ಲಿ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಮೊದಲ ದಿನ ಮೂವರು ದಾಂಡಿಗರನ್ನು ಔಟ್ ಮಾಡುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು. ಇದರಲ್ಲಿ ಇಂಗ್ಲೆಂಡ್‌ನ ಆರಂಭಿಕ ಆಟಗಾರರು ಹಾಗೂ ನಾಯಕ ಜೋ ರೂಟ್ ಕೂಡ ಸೇರಿದ್ದಾರೆ. ನಾಲ್ಕನೇ ದಿನದಾಟದ ಆರಂಭದಲ್ಲಿಯೂ ಭಾರತ ಯಶಸ್ಸು ಸಾಧಿಸಿದ್ದು ಆರಂಭದಲ್ಲಿಯೇ ಮತ್ತೊಂದು ವಿಕೆಟ್ ಕಬಳಿಸಿದೆ. ಈ ಮೂಲಕ ಇಂಗ್ಲೆಂಡ್ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದೆ.

150ನೇ ವಿಕೆಟ್ ಪಡೆದ ಉಮೇಶ್ ಯಾದವ್: ಇನ್ನನು ಈ ಟೆಸ್ಟ್ ಸರಣಿಯಲ್ಲಿ ಮೊದಲ ಬಾರಿಗೆ ಆಡುವ ಬಳಗದಲ್ಲಿ ಕಾಣಿಸಿಕೊಂಡ ಅನುಭವಿ ವೇಗಿ ಉಮೇಶ್ ಯಾದವ್ ಕೂಡ ಉತ್ತಮ ಒ್ರದರ್ಶನ ನೀಡಿದ್ದಾರೆ. ಉಮೇಶ್ ಯಾದವ್ ಕೂಡ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಎರಡನೇ ದಿನದಾಟದ ಆರಂಭದಲ್ಲಿಯೇ ಉಮೇಶ್ ಯಾದವ್ ಒವರ್ಟನ್ ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 150ನೇ ಬಲಿ ಪಡೆದಿದ್ದಾರೆ.

ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ರವೀಂದ್ರ ಜಡೇಜಾ, ರಿಷಭ್ ಪಂತ್ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬೂಮ್ರಾ.

ಈ ಮೂವರ ನಡುವಿನ ರೋಚಕ ಫೈಟ್ ನೋಡೋದೇ ಸಖತ್ ಮಜಾ | Oneindia Kannada

ಇಂಗ್ಲೆಂಡ್ ಆಡುವ ಬಳಗ: ಹಸೀಬ್ ಹಮೀದ್, ರೋರಿ ಬರ್ನ್ಸ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಒಲ್ಲಿ ಪೋಪ್, ಕ್ರೇಗ್ ಓವರ್‌ಟನ್, ಜಾನಿ ಬೈರ್‌ಸ್ಟೊವ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್,ಮೊಯೀನ್ ಅಲಿ, ಜೇಮ್ಸ್ ಆಂಡರ್ಸನ್, ಒಲ್ಲಿ ರಾಬಿನ್ಸನ್

Story first published: Friday, September 3, 2021, 16:01 [IST]
Other articles published on Sep 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X