ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅಂತಿಮ ಟೆಸ್ಟ್‌ನಿಂದ ಭಾರತದ ಈ ಇಬ್ಬರು ಸ್ಟಾರ್ ಆಟಗಾರರು ಹೊರಬೀಳುವ ಸಾಧ್ಯತೆ!

IND vs ENG: Jasprit Bumrah likely to be rested from Manchester test

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯು ಕೊನೆ ಹಂತಕ್ಕೆ ಬಂದು ತಲುಪಿದ್ದು, ಸರಣಿಯ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಇದೇ ಶುಕ್ರವಾರ ಸೆಪ್ಟೆಂಬರ್ 10ರಂದು ಮ್ಯಾಂಚೆಸ್ಟರ್‌ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಓವಲ್ ಟೆಸ್ಟ್: ಪಂದ್ಯಶ್ರೇಷ್ಠ ಪ್ರಶಸ್ತಿಗೆ ನನಗಿಂತ ಈ ಆಟಗಾರ ಅರ್ಹ ಎಂದ ರೋಹಿತ್ ಶರ್ಮಾ!ಓವಲ್ ಟೆಸ್ಟ್: ಪಂದ್ಯಶ್ರೇಷ್ಠ ಪ್ರಶಸ್ತಿಗೆ ನನಗಿಂತ ಈ ಆಟಗಾರ ಅರ್ಹ ಎಂದ ರೋಹಿತ್ ಶರ್ಮಾ!

ಇತ್ತೀಚೆಗಷ್ಟೇ ಲಂಡನ್ ನಗರದ ಓವಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 157 ರನ್‌ಗಳ ಭರ್ಜರಿ ಜಯವನ್ನು ಸಾಧಿಸುವುದರ ಮೂಲಕ 50 ವರ್ಷಗಳ ನಂತರ ಓವಲ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ಇತಿಹಾಸವನ್ನು ಸೃಷ್ಟಿಸಿತು. ಓವಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವುದರ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಓವಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ 191 ರನ್‌ಗಳಿಗೆ ಆಲ್ ಔಟ್ ಆಯಿತು, ಇಂಗ್ಲೆಂಡ್ ತನ್ನ ಮೊದಲನೇ ಇನ್ನಿಂಗ್ಸ್‌ನಲ್ಲಿ 290 ರನ್ ಗಳಿಸುವುದರ ಮೂಲಕ 99 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತು. ಮೊದಲನೇ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಂಕಾಗಿದ್ದ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್‌ನಲ್ಲಿ 466 ರನ್‌ಗಳ ಬೃಹತ್ ಮೊತ್ತವನ್ನು ಕಲೆ ಹಾಕುವುದರ ಮೂಲಕ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 368 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಆದರೆ ಭಾರತ ತಂಡ ನೀಡಿದ ಬೃಹತ್ ಮೊತ್ತದ ಗುರಿಯನ್ನು ಮುಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್ 210 ರನ್‌ಗಳಿಗೆ ಆಲ್ ಔಟ್ ಆಗಿ 157 ರನ್‌ಗಳ ಸೋಲನ್ನು ಅನುಭವಿಸಿತು. ಹೀಗೆ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತು ಸರಣಿಯಲ್ಲಿ 1-2 ಅಂತರದ ಹಿನ್ನಡೆಯನ್ನು ಅನುಭವಿಸಿರುವ ಇಂಗ್ಲೆಂಡ್ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐದನೇ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯನ್ನು ಡ್ರಾ ಮಾಡಿಕೊಳ್ಳುವತ್ತ ಚಿತ್ತವನ್ನು ನೆಟ್ಟಿದೆ. ಇತ್ತ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿರುವ ಟೀಮ್ ಇಂಡಿಯಾ ಅಂತಿಮ ಟೆಸ್ಟ್ ಪಂದ್ಯವನ್ನು ಕೂಡ ಗೆಲ್ಲುವುದರ ಮೂಲಕ ಸರಣಿಯನ್ನು ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.

'ವಿಶ್ವ ಕ್ರಿಕೆಟ್‍ನಲ್ಲಿ ಭಾರತ ಪವರ್‌ಹೌಸ್, ಕೊಹ್ಲಿ ಸೂಪರ್‌ಸ್ಟಾರ್' ಎಂದು ಕೊಂಡಾಡಿದ ದಿಗ್ಗಜ ಕ್ರಿಕೆಟಿಗ'ವಿಶ್ವ ಕ್ರಿಕೆಟ್‍ನಲ್ಲಿ ಭಾರತ ಪವರ್‌ಹೌಸ್, ಕೊಹ್ಲಿ ಸೂಪರ್‌ಸ್ಟಾರ್' ಎಂದು ಕೊಂಡಾಡಿದ ದಿಗ್ಗಜ ಕ್ರಿಕೆಟಿಗ

Kohli ಅವರ ಈ celebration ಇಷ್ಟರ ಮಟ್ಟಿಗೆ ಚರ್ಚೆಗೆ ಗ್ರಾಸವಾಗಿದೆ | Oneindia Kannada

ಇನ್ನು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ತಂಡದ ಪ್ರಮುಖ ವೇಗಿಗಳನ್ನು ತಂಡದಿಂದ ಹೊರಗಿಡುವ ಮೂಲಕ ಭಾರತ ತಂಡ ಕ್ರಿಕೆಟ್ ಅಭಿಮಾನಿಗಳಲ್ಲಿ ಆಶ್ಚರ್ಯವನ್ನು ಮೂಡಿಸಿತ್ತು. ಇದೀಗ ಅದೇ ರೀತಿ ಐದನೇ ಟೆಸ್ಟ್ ಪಂದ್ಯದಿಂದಲೂ ಕೂಡ ತಂಡದ ಪ್ರಮುಖ ಆಟಗಾರರನ್ನು ಟೀಮ್ ಇಂಡಿಯಾ ಹೊರಗಿಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಈ ಕೆಳಕಂಡ ಆಟಗಾರರನ್ನು ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ತಂಡದಿಂದ ಹೊರಗಿಡುವ ಸಾಧ್ಯತೆಗಳಿವೆ.

ಮ್ಯಾಂಚೆಸ್ಟರ್ ಟೆಸ್ಟ್‌ನಿಂದ ಅಜಿಂಕ್ಯ ರಹಾನೆ ಹೊರಬೀಳುವ ಸಾಧ್ಯತೆ

ಮ್ಯಾಂಚೆಸ್ಟರ್ ಟೆಸ್ಟ್‌ನಿಂದ ಅಜಿಂಕ್ಯ ರಹಾನೆ ಹೊರಬೀಳುವ ಸಾಧ್ಯತೆ

ಸೆಪ್ಟೆಂಬರ್ 10ರಿಂದ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ಉಪನಾಯಕ ಅಜಿಂಕ್ಯಾ ರಹಾನೆ ಹೊರಬೀಳುವ ಸಾಧ್ಯತೆಗಳಿವೆ. ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಅಜಿಂಕ್ಯ ರಹಾನೆ ಇದುವರೆಗೂ ನಡೆದಿರುವ 4 ಪಂದ್ಯಗಳ ಪೈಕಿ ಗಳಿಸಿರುವುದು ಕೇವಲ 109 ರನ್. ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲುವ ಯೋಜನೆಯಲ್ಲಿರುವ ಟೀಮ್ ಇಂಡಿಯಾ ಕಳಪೆ ಪ್ರದರ್ಶನ ನೀಡುತ್ತಿರುವ ಅಜಿಂಕ್ಯ ರಹಾನೆಗೆ ಐದನೇ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ನೀಡದೇ ತಂಡದಿಂದ ಹೊರಗಿಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಜಸ್ಪ್ರೀತ್ ಬುಮ್ರಾ ಕೂಡ ಹೊರಗುಳಿಯುವ ಸಾಧ್ಯತೆ

ಜಸ್ಪ್ರೀತ್ ಬುಮ್ರಾ ಕೂಡ ಹೊರಗುಳಿಯುವ ಸಾಧ್ಯತೆ

ಇಂಗ್ಲೆಂಡ್ ವಿರುದ್ಧ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 2 ವಿಕೆಟ್‍ಗಳನ್ನು ಪಡೆದ ಜಸ್ಪ್ರೀತ್ ಬುಮ್ರಾ ಉತ್ತಮ ಪ್ರದರ್ಶನವನ್ನು ನೀಡಿದ್ದರು. ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ 18 ವಿಕೆಟ್ ಪಡೆದಿರುವ ಜಸ್ಪ್ರೀತ್ ಬುಮ್ರಾ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಪ್ರಸ್ತುತ ಸರಣಿಯಲ್ಲಿ ಒಟ್ಟು 151 ಓವರ್ ಬೌಲಿಂಗ್ ಮಾಡಿರುವ ಜಸ್ಪ್ರಿತ್ ಬುಮ್ರಾ ಸರಣಿಯಲ್ಲಿ ಅತಿಹೆಚ್ಚು ಓವರ್ ಬೌಲಿಂಗ್ ಮಾಡಿರುವ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಹೀಗಾಗಿ ವಿಶ್ರಾಂತಿ ನೀಡುವ ದೃಷ್ಟಿಯಿಂದ ಜಸ್ಪ್ರೀತ್ ಬೂಮ್ರಾ ಅವರನ್ನು ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗಿಡುವ ಸಾಧ್ಯತೆಗಳು ಹೆಚ್ಚಿವೆ. ಜಸ್ ಪ್ರೀತ್ ಬುಮ್ರಾ ತಂಡದ ಪ್ರಮುಖ ಬೌಲರ್ ಆಗಿರುವ ಕಾರಣ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳನ್ನು ತಲೆಯಲ್ಲಿಟ್ಟುಕೊಂಡು ಈ ನಿರ್ಧಾರವನ್ನು ಕೈಗೊಳ್ಳಬಹುದು ಎಂಬ ಮಾತುಗಳು ಹರಿದಾಡುತ್ತಿವೆ.

14 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಇತಿಹಾಸ ಸೃಷ್ಟಿಸುವ ಅವಕಾಶ

14 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಇತಿಹಾಸ ಸೃಷ್ಟಿಸುವ ಅವಕಾಶ

ಶುಕ್ರವಾರದಿಂದ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಅಥವಾ ಡ್ರಾ ಮಾಡಿಕೊಂಡರೆ ಪ್ರಸ್ತುತ 5 ಪಂದ್ಯಗಳ ಟೆಸ್ಟ್ ಸರಣಿ ಭಾರತದ ಕೈ ಸೇರಲಿದೆ. ಈ ಮೂಲಕ ಬರೋಬ್ಬರಿ 14 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಗೆದ್ದಂತಾಗಲಿದೆ. ಹೌದು, ಟೀಮ್ ಇಂಡಿಯಾ ಇಂಗ್ಲೆಂಡ್ ನೆಲದಲ್ಲಿ ಕೊನೆಯ ಬಾರಿಗೆ ಟೆಸ್ಟ್ ಸರಣಿಯನ್ನು ಗೆದ್ದು 14 ವರ್ಷಗಳೇ ಕಳೆದಿವೆ. 2007ರಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ರಾಹುಲ್ ದ್ರಾವಿಡ್ ಪಡೆ ಇಂಗ್ಲೆಂಡ್ ನೆಲದಲ್ಲಿ ಸರಣಿಯನ್ನು ಗೆದ್ದು ಬೀಗಿತ್ತು. ಇದಾದ ಬಳಿಕ ಇಂಗ್ಲೆಂಡ್ ನೆಲದಲ್ಲಿ ನಡೆದಿರುವ ಯಾವುದೇ ಟೆಸ್ಟ್ ಸರಣಿಯನ್ನೂ ಟೀಮ್ ಇಂಡಿಯಾ ಗೆದ್ದಿಲ್ಲ, ಆದರೆ ಇದೀಗ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾಗೆ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವ ಅವಕಾಶ ಒದಗಿ ಬಂದಿದ್ದು ಕೊಹ್ಲಿ ಪಡೆ ಇತಿಹಾಸವನ್ನು ಮರು ಸೃಷ್ಟಿ ಮಾಡುವತ್ತ ಚಿತ್ತ ನೆಟ್ಟಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಸೆಪ್ಟೆಂಬರ್ 10ರ ಶುಕ್ರವಾರದಂದು ಮ್ಯಾಂಚೆಸ್ಟರ್‌ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

Story first published: Wednesday, September 8, 2021, 9:12 [IST]
Other articles published on Sep 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X