Ind vs Eng: ಮತ್ತೊಂದು ಶತಕ ಸಿಡಿಸಿದ ಬೈರ್‌ಸ್ಟೋವ್: ಭಾರತದ ಕನಸು ಭಗ್ನ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಜೋ ರೂಟ್ ಹಾಗೂ ಜಾನಿ ಬೈರ್‌ಸ್ಟೋವ್ ಆಟಕ್ಕೆ ಭಾರತ ಹಿನ್ನಡೆ ಅನುಭವಿಸಿದೆ. ಅದರಲ್ಲೂ ಅದ್ಭುತ ಫಾರ್ಮ್‌ನಲ್ಲಿರುವ ಬ್ಯಾಟರ್ ಜಾನಿ ಬೈರ್‌ಸ್ಟೋವ್ ಈ ಪಂದ್ಯದ ಎರಡು ಇನ್ನಿಂಗ್ಸ್‌ನಲ್ಲಿಯೂ ಶತಕ ಸಿಡಿಸುವ ಮೂಲಕ ಭಾರತಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿಯೂ ಭಾರತದ ಬೌಲರ್‌ಗಳ ಪಾಲಿಗೆ ಸವಾಲಾಗಿಯೇ ಉಳಿದ ಬೈರ್‌ಸ್ಟೋವ್ ಭರ್ಜರಿ ಶತಕ ಸಿಡಿಸಿದ್ದಾರೆ.

ಬೈರ್‌ಸ್ಟೋವ್ ಹಾಗೂ ಜೋ ರೂಟ್ ಅವರ ಶತಕದೊಂದಿಗೆ ಇಂಗ್ಲೆಂಡ್ ಈ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಮೂಲಕ ಐದು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಆತಿಥೆಯ ಇಂಗ್ಲೆಂಡ್ ತಂಡ 2-2 ಅಂತರದಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.

ಭಾರತ vs ನಾರ್ತಂಪ್ಟನ್‌ಶೈರ್: ಅರ್ಧಶತಕ ಸಿಡಿಸಿ ಅಬ್ಬರಿಸಿದ ಹರ್ಷಲ್ ಪಟೇಲ್; ಭಾರತಕ್ಕೆ ರೋಚಕ ಜಯಭಾರತ vs ನಾರ್ತಂಪ್ಟನ್‌ಶೈರ್: ಅರ್ಧಶತಕ ಸಿಡಿಸಿ ಅಬ್ಬರಿಸಿದ ಹರ್ಷಲ್ ಪಟೇಲ್; ಭಾರತಕ್ಕೆ ರೋಚಕ ಜಯ

ಜೋ ರೂಟ್ ಜೊತೆಗೆ ಭರ್ಜರಿ ಜೊತೆಯಾಟ

ಜೋ ರೂಟ್ ಜೊತೆಗೆ ಭರ್ಜರಿ ಜೊತೆಯಾಟ

ಭಾರತ ತಂಡ ನಿಡಿದ 378 ರನ್‌ಗಳನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡಕ್ಕೆ ಅದ್ಭುತ ಆರಂಭ ದೊರೆಯಿತು. ಮೊದಲ ವಿಕೆಟ್‌ಗೆ ಶತಕದ ಜೊತೆಯಾಟ ಬಂದ ಬಳಿಕ ಮೂರು ರನ್‌ಗಳ ಅಂತರದಲ್ಲಿ ಮೂತು ವಿಕೆಟ್ ಕಳೆದುಕೊಳ್ಳುವ ಮೂಲಕ ಇಂಗ್ಲೆಂಡ್ ಆತಂಕಕ್ಕೆ ಸಿಲುಕಿತ್ತು. ಆದರೆ ಈ ಸಂದರ್ಭದಲ್ಲಿ ಜೊತೆಯಾಟ ಜೋ ಟೂಟ್ ಹಾಗು ಜಾನಿ ಬೈರ್‌ಸ್ಟೋವ್ ಸ್ವಿಶತಕದ ಜೊತೆಯಾಟವನ್ನು ನೀಡಿದ್ದಾರೆ. ಜೋ ರುಟ್ ಕೂಡ ತಮ್ಮ ಶತಕವನ್ನು ಪೂರ್ಣಗೊಳಿಸಿದ್ದಾರೆ.

ಅದ್ಭುತ ಫಾರ್ಮ್‌ನಲ್ಲಿ ಬೈರ್‌ಸ್ಟೋವ್

ಅದ್ಭುತ ಫಾರ್ಮ್‌ನಲ್ಲಿ ಬೈರ್‌ಸ್ಟೋವ್

ಈ ವರ್ಷ ಜಾನಿ ಬೈರ್‌ಸ್ಟೋವ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ಬಾಜಿ ಬೈರ್‌ಸ್ಟೋವ್ ಸಿಡಿಸಿದ ನಾಲ್ಕನೇ ಶತಕ ಇದಾಗಿದೆ. ಅಲ್ಲದೆ ಈ ವರ್ಷ ಸಿಡಿಸಿದ 6ನೇ ಟೆಸ್ಟ್ ಶತಕವಾಗಿದೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಅಂತಿಮ ಎರಡು ಪಂದ್ಯಗಳಲ್ಲಿ ಶತಕ ಬಾರಿಸಿದ್ದರು. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಪಂದ್ಯದ ಈ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿಯೂ ಶತಕ ಸಿಡಿಸಿದ್ದಾರೆ. ಈ ಪಂದ್ಯದ ಮೂಲಕ ಅವರು ಈ ವರ್ಷ ಟೆಸ್ಟ್ ಮಾದರಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇದು ಜಾನಿ ಬೈರ್‌ಸ್ಟೋವ್ ಅವರ ಒಟ್ಟಾರೆ 12ನೇ ಟೆಸ್ಟ್ ಶತಕವಾಗಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಏಕಾಂಗಿಯಾಗಿ ಹೋರಾಡಿದ್ದ ಬೈರ್‌ಸ್ಟೋವ್

ಮೊದಲ ಇನ್ನಿಂಗ್ಸ್‌ನಲ್ಲಿ ಏಕಾಂಗಿಯಾಗಿ ಹೋರಾಡಿದ್ದ ಬೈರ್‌ಸ್ಟೋವ್

ಇನ್ನು ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ವಿಭಾಗ ಸಂಪೂರ್ಣ ವಿಫಲವಾಗಿತ್ತು. ಆದರೆ ಜಾನಿ ಬೈರ್‌ಸ್ಟೋವ್ ಏಕಾಂಗಿಯಾಗಿ ಹೋರಾಟ ನಡೆಸಿ ಭರ್ಜರಿ ಶತಕದೊಂದಿಗೆ ಇಂಗ್ಲೆಂಡ್ ತಂಡ 284 ರನ್‌ಗಳ ಮೊತ್ತವನ್ನು ಗಳಿಸಲು ಕಾರಣವಾದರು. ಮೊದಲ ಇನ್ನಿಂಗ್ಸ್‌ನಲ್ಲಿ 140 ಎಸೆತ ಎದುರಿಸಿದ್ದ ಅವರು 106 ರನ್‌ಗಳಿಸಿ ಶಮಿಗೆ ವಿಕೆಟ್ ಒಪ್ಪಿಸಿದ್ದರು.

7 ವಿಕೆಟ್‌ಗಳಿಂದ ಗೆಲುವು ಸಾಧಿಸಿದ ಇಂಗ್ಲೆಂಡ್

7 ವಿಕೆಟ್‌ಗಳಿಂದ ಗೆಲುವು ಸಾಧಿಸಿದ ಇಂಗ್ಲೆಂಡ್

ಇನ್ನು ಈ ಪಂದ್ಯವನ್ನು ಇಂಗ್ಲೆಂಡ್ ತಂಡ 7 ವಿಕೆಟ್‌ಗಳ ಅಂತರದಿಂದ ಭರ್ಜರಿಯಾಗಿ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೊದಲ ಮೂರು ದಿನಗಳ ಕಾಲ ಸಂಪೂರ್ಣ ಮೇಲುಗೈ ಭಾರತ ತಂಡ ಸಾಧಿಸಿದ್ದರೂ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪಡೆ ಭಾರತಕ್ಕೆ ಮೇಲುಗೈ ಸಾಧಿಸದಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಬೌಲಿಂಗ್‌ನಲ್ಲಿ ಮಿಂಚಿದ ಇಂಗ್ಲೆಂಡ್ ತಂಡ ನಂತರ ಬ್ಯಾಟಿಂಗ್‌ನಲ್ಲಿಯೂ ಅದ್ಭುತ ಪ್ರದರ್ಶನ ನೀಡಿದೆ. ಈ ಮೂಲಕ ಟೆಸ್ಟ್ ಸರಣಿಯಲ್ಲಿ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಗಿದೆ.

For Quick Alerts
ALLOW NOTIFICATIONS
For Daily Alerts
Story first published: Tuesday, July 5, 2022, 16:54 [IST]
Other articles published on Jul 5, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X