ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ಈ ದಾಖಲೆಗಳ ಮೇಲೆ ಕೊಹ್ಲಿ, ರೋಹಿತ್ ಮತ್ತು ಜೋ ರೂಟ್ ಕಣ್ಣು

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು ಇಂಗ್ಲೆಂಡ್ ವಿರುದ್ಧ ಭಾರತ ತಂಡ 1-0 ಅಂತರದ ಮುನ್ನಡೆಯನ್ನು ಸಾಧಿಸಿದೆ.

ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲನೇ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು. ನಂತರ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜೋ ರೂಟ್ ಪಡೆಯನ್ನು 151 ರನ್‌ಗಳಿಂದ ಸದೆಬಡಿದು ಹೊಸ ಮೈಲಿಗಲ್ಲನ್ನು ನಿರ್ಮಿಸಿತು. ಹೀಗೆ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿರುವ ಟೀಮ್ ಇಂಡಿಯಾ ಸದ್ಯ ಬುಧವಾರದಿಂದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಜಯ ಸಾಧಿಸುವುದರ ಮೂಲಕ ಸರಣಿಯನ್ನು ಬಹುತೇಕ ತನ್ನ ಕೈವಶ ಮಾಡಿಕೊಳ್ಳಲು ತಯಾರಿ ನಡೆಸುತ್ತಿದೆ.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿಯೂ ಅಶ್ವಿನ್‌ಗೆ ಅವಕಾಶ ಸಿಗುವುದಿಲ್ಲ ಎನ್ನುತ್ತಿವೆ ಈ ಅಂಶಗಳು!ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿಯೂ ಅಶ್ವಿನ್‌ಗೆ ಅವಕಾಶ ಸಿಗುವುದಿಲ್ಲ ಎನ್ನುತ್ತಿವೆ ಈ ಅಂಶಗಳು!

ಅತ್ತ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2 ಪಂದ್ಯಗಳು ಮುಗಿದ ನಂತರವೂ ಗೆಲುವಿನ ಖಾತೆಯನ್ನು ತೆರೆಯುವಲ್ಲಿ ವಿಫಲರಾಗಿರುವ ಇಂಗ್ಲೆಂಡ್ ಆಟಗಾರರು ಬುಧವಾರದಿಂದ ಆರಂಭವಾಗಲಿರುವ ಲೀಡ್ಸ್ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ವಿರುದ್ಧ ಜಯ ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸುವ ಯೋಜನೆಯಲ್ಲಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಶಾರ್ದೂಲ್ ಠಾಕೂರ್ ಆಡದಿದ್ದರೆ ಉತ್ತಮ ಎನ್ನುತ್ತಿವೆ ಈ 3 ಕಾರಣಗಳುಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಶಾರ್ದೂಲ್ ಠಾಕೂರ್ ಆಡದಿದ್ದರೆ ಉತ್ತಮ ಎನ್ನುತ್ತಿವೆ ಈ 3 ಕಾರಣಗಳು

ಹೀಗೆ ಭಾರತ ಮತ್ತು ಇಂಗ್ಲೆಂಡ್ ತಂಡಗಳೆರಡೂ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಗೆಲುವನ್ನು ಸಾಧಿಸಬೇಕೆಂಬ ಯೋಜನೆಯಲ್ಲಿವೆ. ಇನ್ನು ಆಟಗಾರರ ವೈಯಕ್ತಿಕ ದಾಖಲೆ ಮತ್ತು ಮೈಲಿಗಲ್ಲುಗಳ ವಿಷಯಕ್ಕೆ ಬಂದರೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದ ಮೂಲಕ ಎರಡೂ ತಂಡಗಳ ಆಟಗಾರರು ತಮ್ಮದೇ ಆದ ವಿಭಿನ್ನ ಮೈಲಿಗಲ್ಲುಗಳನ್ನು ಸೃಷ್ಟಿಸಲಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿಯೂ ಅಶ್ವಿನ್‌ಗೆ ಅವಕಾಶ ಸಿಗುವುದಿಲ್ಲ ಎನ್ನುತ್ತಿವೆ ಈ ಅಂಶಗಳು!ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿಯೂ ಅಶ್ವಿನ್‌ಗೆ ಅವಕಾಶ ಸಿಗುವುದಿಲ್ಲ ಎನ್ನುತ್ತಿವೆ ಈ ಅಂಶಗಳು!

ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದ ಮೂಲಕ ಮೈಲಿಗಲ್ಲುಗಳನ್ನು ಸೃಷ್ಟಿಸಲಿರುವ ಎರಡೂ ತಂಡಗಳ ಆಟಗಾರರ ವಿವರ ಮುಂದೆ ಇದೆ ಓದಿ..

23,000 ಅಂತಾರಾಷ್ಟ್ರೀಯ ರನ್ ಪೂರೈಸಲಿರುವ ಕೊಹ್ಲಿ

23,000 ಅಂತಾರಾಷ್ಟ್ರೀಯ ರನ್ ಪೂರೈಸಲಿರುವ ಕೊಹ್ಲಿ

ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 23,000 ಅಂತಾರಾಷ್ಟ್ರೀಯ ರನ್‌ಗಳನ್ನು ಪೂರೈಸುವ ಸಾಧ್ಯತೆಯಿದೆ. ಇದುವರೆಗೂ ಒಟ್ಟು 487 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 22,937 ರನ್‌ಗಳನ್ನು ಹೊಂದಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ 23,000 ಅಂತಾರಾಷ್ಟ್ರೀಯ ರನ್ ಪೂರೈಸಲು 63 ರನ್‌ಗಳ ಅಗತ್ಯತೆ ಇದ್ದು ಬುಧವಾರದಿಂದ ಆರಂಭವಾಗಲಿರುವ ಹೇಡಿಂಗ್ಲೆ ಟೆಸ್ಟ್ ಮೂಲಕ ಈ ಮೈಲಿಗಲ್ಲನ್ನು ವಿರಾಟ್ ಕೊಹ್ಲಿ ಮುಟ್ಟುವ ಸಂಭವವಿದೆ.

450 ವಿಕೆಟ್ ಮೈಲಿಗಲ್ಲು ಮುಟ್ಟಲಿರುವ ರವೀಂದ್ರ ಜಡೇಜಾ

450 ವಿಕೆಟ್ ಮೈಲಿಗಲ್ಲು ಮುಟ್ಟಲಿರುವ ರವೀಂದ್ರ ಜಡೇಜಾ

ರವೀಂದ್ರ ಜಡೇಜಾ ಇದುವರೆಗೂ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 448 ವಿಕೆಟ್‍ಗಳನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಬುಧವಾರದಿಂದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ 2 ವಿಕೆಟ್ ಪಡೆದರೆ 450 ಅಂತಾರಾಷ್ಟ್ರೀಯ ವಿಕೆಟ್‍ಗಳನ್ನು ಪಡೆದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ. ಆದರೆ ರವೀಂದ್ರ ಜಡೇಜಾ ನಾಟಿಂಗ್ ಹ್ಯಾಮ್ ಮತ್ತು ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಯಾವುದೇ ವಿಕೆಟ್ ಪಡೆಯುವಲ್ಲಿ ಸಫಲರಾಗಿಲ್ಲ. ಹೌದು, ಪ್ರಸ್ತುತ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಒಟ್ಟು 44 ಓವರ್ ಬೌಲಿಂಗ್ ಮಾಡಿರುವ ರವೀಂದ್ರ ಜಡೇಜಾ ಯಾವುದೇ ವಿಕೆಟ್ ಪಡೆದಿಲ್ಲ. ಆದರೆ ಹೆಡಿಂಗ್ಲೆ ಪಿಚ್ ಸ್ಪಿನ್ ಬೌಲರ್‌ಗಳಿಗೂ ಸಹ ಸಹಕಾರಿಯಾಗಿದ್ದು ರವೀಂದ್ರ ಜಡೇಜಾ ಆಡುವ ಅವಕಾಶ ಪಡೆದರೆ ವಿಕೆಟ್ ಕಬಳಿಸುವ ಸಾಧ್ಯತೆಯಿದೆ.

15,000 ಅಂತಾರಾಷ್ಟ್ರೀಯ ಪೂರೈಸುವತ್ತ ರೋಹಿತ್ ಚಿತ್ತ

15,000 ಅಂತಾರಾಷ್ಟ್ರೀಯ ಪೂರೈಸುವತ್ತ ರೋಹಿತ್ ಚಿತ್ತ

ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 83 ರನ್ ಬಾರಿಸುವ ಮೂಲಕ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದ ರೋಹಿತ್ ಶರ್ಮ 15,000 ಅಂತಾರಾಷ್ಟ್ರೀಯ ರನ್ ಪೂರೈಸುವ ಸನಿಹದಲ್ಲಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 14,900 ರನ್ ಪೂರೈಸಿರುವ ರೋಹಿತ್ ಶರ್ಮಾಗೆ 15,000 ರನ್ ಪೂರೈಸಲು 100 ರನ್‌ಗಳ ಅಗತ್ಯತೆ ಇದೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ 100 ರನ್ ಬಾರಿಸಿ 15,000 ಅಂತಾರಾಷ್ಟ್ರೀಯ ರನ್ ಪೂರೈಸಿದ ಮೈಲಿಗಲ್ಲನ್ನು ಮುಟ್ಟುವ ಸಾಧ್ಯತೆಯಿದೆ. ಈ ಮೂಲಕ 15,000 ಅಂತಾರಾಷ್ಟ್ರೀಯ ರನ್ ಪೂರೈಸಿದ ಎಂಟನೇ ಭಾರತೀಯ ಆಟಗಾರ ಎಂಬ ಖ್ಯಾತಿಗೆ ರೋಹಿತ್ ಶರ್ಮಾ ಪಾತ್ರರಾಗಲಿದ್ದಾರೆ.

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನ ಅತಿಹೆಚ್ಚು ಯಶಸ್ವಿ ನಾಯಕನಾಗುವ ಸನಿಹದಲ್ಲಿ ಜೋ ರೂಟ್

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನ ಅತಿಹೆಚ್ಚು ಯಶಸ್ವಿ ನಾಯಕನಾಗುವ ಸನಿಹದಲ್ಲಿ ಜೋ ರೂಟ್

ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಅದು ಜೋ ರೂಟ್ ನಾಯಕತ್ವದಲ್ಲಿ ಇಂಗ್ಲೆಂಡ್ ತಂಡ ಜಯಿಸಲಿರುವ 27ನೇ ಟೆಸ್ಟ್ ಗೆಲುವಾಗಲಿದೆ. ಈ ಮೂಲಕ ಜೋ ರೂಟ್ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ( 26 ಟೆಸ್ಟ್ ಗೆಲುವು ) ದಾಖಲೆಯನ್ನು ಅಳಿಸಿಹಾಕಿ ಇಂಗ್ಲೆಂಡ್ ತಂಡದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎಂಬ ದಾಖಲೆಯನ್ನು ಬರೆಯಲಿದ್ದಾರೆ.

ನಾನು RCB ತಂಡದ ದೊಡ್ಡ ಫ್ಯಾನ್ ಅಂದ ಹಸರಂಗ | Oneindia Kannada
100 ವಿಕೆಟ್ ಮೈಲಿಗಲ್ಲು ಮುಟ್ಟುವತ್ತ ಬುಮ್ರಾ

100 ವಿಕೆಟ್ ಮೈಲಿಗಲ್ಲು ಮುಟ್ಟುವತ್ತ ಬುಮ್ರಾ

ಸದ್ಯಕ್ಕೆ ಭಾರತ ತಂಡದ ಪ್ರತಿಭಾವಂತ ಬೌಲರ್ ಜಸ್ ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್‍ನಲ್ಲಿ ಒಟ್ಟು 95 ವಿಕೆಟ್‍ಗಳನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ಜಸ್ ಪ್ರೀತ್ ಬುಮ್ರಾ 5 ವಿಕೆಟ್‍ಗಳನ್ನು ಪಡೆದುಕೊಂಡರೆ 100 ಟೆಸ್ಟ್ ವಿಕೆಟ್ ಪೂರೈಸಿ ಹೊಸ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Tuesday, August 24, 2021, 21:34 [IST]
Other articles published on Aug 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X