ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಓವಲ್ ಟೆಸ್ಟ್ ಪಂದ್ಯದಲ್ಲಿ ಬೃಹತ್ ದಾಖಲೆ ನಿರ್ಮಿಸಿದ ಎರಡೂ ತಂಡಗಳ ನಾಲ್ವರು ಆಟಗಾರರು

IND vs ENG: List of records created by players in Fourth Test

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಇತ್ತೀಚೆಗಷ್ಟೇ ಮುಗಿದಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 157 ರನ್‌ಗಳ ಅಮೋಘ ಜಯವನ್ನು ಸಾಧಿಸುವುದರ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಹೌದು, ಬರೋಬ್ಬರಿ 50 ವರ್ಷಗಳ ಬಳಿಕ ಓವಲ್ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಗೆಲುವನ್ನು ಸಾಧಿಸುವುದರ ಮೂಲಕ ಹೊಸದೊಂದು ಇತಿಹಾಸವನ್ನೇ ಕೊಹ್ಲಿ ಪಡೆ ಸೃಷ್ಟಿಸಿದೆ.

4ನೇ ಟೆಸ್ಟ್: ಭಾರತ ನೀಡಿರುವ ಗುರಿ ಮುಟ್ಟುವುದು ಸುಲಭದ ಮಾತಲ್ಲ ಎಂದ ಇಂಗ್ಲೆಂಡ್ ಆಟಗಾರ4ನೇ ಟೆಸ್ಟ್: ಭಾರತ ನೀಡಿರುವ ಗುರಿ ಮುಟ್ಟುವುದು ಸುಲಭದ ಮಾತಲ್ಲ ಎಂದ ಇಂಗ್ಲೆಂಡ್ ಆಟಗಾರ

ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ವಿರಾಟ್ ಕೊಹ್ಲಿ ಪಡೆ ಮೊದಲನೇ ಇನ್ನಿಂಗ್ಸ್‌ನಲ್ಲಿ 191 ರನ್‌ಗಳ ಸಾಮಾನ್ಯ ಮೊತ್ತವನ್ನು ಕಲೆ ಹಾಕಿತು. ಅತ್ತ ಮೊದಲನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 290 ರನ್ ಗಳಿಸುವುದರ ಮೂಲಕ 90 ರನ್‌ಗಳ ಮುನ್ನಡೆಯನ್ನು ಸಾಧಿಸಿತು. ಮೊದಲನೇ ಇನ್ನಿಂಗ್ಸ್‌ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡದ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿ 466 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 368 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ಟೀಮ್ ಇಂಡಿಯಾ ನೀಡಿದ ಈ ಗುರಿಯನ್ನು ಬೆನ್ನಟ್ಟಲು ಮುಂದಾದ ಇಂಗ್ಲೆಂಡ್ ಭಾರತೀಯ ಬೌಲರ್‌ಗಳ ಅಮೋಘ ಪ್ರದರ್ಶನದ ಮುಂದೆ ಮಂಕಾಗಿ 210 ರನ್‌ಗಳಿಗೆ ಆಲ್ ಔಟ್ ಆಗುವುದರ ಮೂಲಕ 157 ರನ್‌ಗಳ ಸೋಲನ್ನು ಕಂಡಿತು.

ಓವಲ್ ಜಯದ ಮೂಲಕ ದೊಡ್ಡ ದಾಖಲೆ ಬರೆದ ಕೊಹ್ಲಿ; ಬೆಸ್ಟ್ ಕ್ಯಾಪ್ಟನ್ ಎನ್ನಲು ಇದಕ್ಕಿಂತ ಇನ್ನೇನು ಬೇಕು?ಓವಲ್ ಜಯದ ಮೂಲಕ ದೊಡ್ಡ ದಾಖಲೆ ಬರೆದ ಕೊಹ್ಲಿ; ಬೆಸ್ಟ್ ಕ್ಯಾಪ್ಟನ್ ಎನ್ನಲು ಇದಕ್ಕಿಂತ ಇನ್ನೇನು ಬೇಕು?

ಹೀಗೆ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸುವುದರ ಮೂಲಕ ಟೀಮ್ ಇಂಡಿಯಾ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆಯನ್ನು ಸಾಧಿಸಿ 50 ವರ್ಷಗಳ ಬಳಿಕ ಓವಲ್ ಕ್ರೀಡಾಂಗಣದಲ್ಲಿ ಗೆಲುವು ಸಾಧಿಸಿದ ಇತಿಹಾಸವನ್ನು ಸೃಷ್ಟಿಸಿದೆ. ಟೀಮ್ ಇಂಡಿಯಾ ಹೀಗೆ ವಿಶೇಷ ಇತಿಹಾಸವನ್ನು ಸೃಷ್ಟಿಸಿದ್ದರೆ, ಮತ್ತೊಂದೆಡೆ ಈ ಪಂದ್ಯದ ಮೂಲಕ ಭಾರತ ಮತ್ತು ಇಂಗ್ಲೆಂಡ್ ತಂಡಗಳ ಕೆಲ ಆಟಗಾರರು ವಿಶೇಷ ದಾಖಲೆಗಳನ್ನು ನಿರ್ಮಿಸಿದ್ದು ಅವುಗಳ ವಿವರ ಈ ಕೆಳಕಂಡಂತಿದೆ ನೋಡಿ..

1. ಅತಿ ಹೆಚ್ಚು ಪಂದ್ಯ ಗೆಲ್ಲಿಸಿದ ದಾಖಲೆ ಬರೆದ ಕೊಹ್ಲಿ

1. ಅತಿ ಹೆಚ್ಚು ಪಂದ್ಯ ಗೆಲ್ಲಿಸಿದ ದಾಖಲೆ ಬರೆದ ಕೊಹ್ಲಿ


ಓವಲ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸುವುದರ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು, ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆಲ್ಲಿಸಿದ ಏಷ್ಯಾ ಖಂಡದ ನಾಯಕ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ. ವಿರಾಟ್ ಕೊಹ್ಲಿ ಇಂಗ್ಲೆಂಡ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ನೆಲದಲ್ಲಿ ಒಟ್ಟು 3 ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದನ್ನು ಹೊರತುಪಡಿಸಿದರೆ ಕಪಿಲ್ ದೇವ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ನೆಲದಲ್ಲಿ 2 ಟೆಸ್ಟ್‌ ಪಂದ್ಯಗಳಲ್ಲಿ ಜಯ ಸಾಧಿಸಿತ್ತು.

2. ಬುಮ್ರಾ ವೇಗದ 100 ಟೆಸ್ಟ್ ವಿಕೆಟ್‍ಗಳು

2. ಬುಮ್ರಾ ವೇಗದ 100 ಟೆಸ್ಟ್ ವಿಕೆಟ್‍ಗಳು

ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದ ಮೊದಲ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ತಲಾ ಎರಡೆರಡು ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ ಪಂದ್ಯದಲ್ಲಿ ಒಟ್ಟು 4 ವಿಕೆಟ್‍ಗಳನ್ನು ಪಡೆದುಕೊಳ್ಳುವುದಷ್ಟೇ ಅಲ್ಲದೆ ನೂತನ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಹೌದು, ಈ ಪಂದ್ಯದ ಮೂಲಕ ತನ್ನ 100 ಟೆಸ್ಟ್ ವಿಕೆಟ್ ಮೈಲಿಗಲ್ಲನ್ನು ಮುಟ್ಟಿರುವ ಜಸ್ಪ್ರೀತ್ ಬುಮ್ರಾ ಅತಿ ವೇಗವಾಗಿ 100 ಟೆಸ್ಟ್ ವಿಕೆಟ್‍ಗಳನ್ನು ಪಡೆದುಕೊಂಡ ಭಾರತದ ವೇಗಿ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. 24 ಟೆಸ್ಟ್ ಪಂದ್ಯಗಳಲ್ಲಿ 100 ವಿಕೆಟ್ ಮೈಲಿಗಲ್ಲನ್ನು ಮುಟ್ಟಿರುವ ಜಸ್ಪ್ರೀತ್ ಬುಮ್ರಾ, 25 ಟೆಸ್ಟ್ ಪಂದ್ಯಗಳಲ್ಲಿ 100 ವಿಕೆಟ್‍ಗಳನ್ನು ಪಡೆದಿದ್ದ ಕಪಿಲ್ ದೇವ್ ಅವರನ್ನು ಹಿಂದಿಕ್ಕಿದ್ದಾರೆ.

3. ಚೊಚ್ಚಲ ಓವರ್‌ಸೀಸ್ ಶತಕದ ದಾಖಲೆ ಬರೆದ ರೋಹಿತ್ ಶರ್ಮಾ

3. ಚೊಚ್ಚಲ ಓವರ್‌ಸೀಸ್ ಶತಕದ ದಾಖಲೆ ಬರೆದ ರೋಹಿತ್ ಶರ್ಮಾ

ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ 256 ಎಸೆತಗಳಿಗೆ 127 ರನ್ ಬಾರಿಸಿ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ ರೋಹಿತ್ ಶರ್ಮಾಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಲಭಿಸಿತು. ಹೀಗೆ ಓವೆಲ್ ಕ್ರೀಡಾಂಗಣದಲ್ಲಿ ಶತಕವನ್ನು ಸಿಡಿಸಿದ ರೋಹಿತ್ ಶರ್ಮಾ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದಲ್ಲಿಯೇ ಚೊಚ್ಚಲ ಓವರ್‌ಸೀಸ್ ಶತಕವನ್ನು ಬಾರಿಸಿ ಹೊಸ ಮೈಲಿಗಲ್ಲನ್ನು ನಿರ್ಮಿಸಿದ್ದಾರೆ.

ಗೆಲುವು ನಮ್ ಕಡೆ ಇದೆ ಅಂತ ಗೊತ್ತಾಗಿದ್ದು ಈ ಆಟಗಾರ ಬಂದ್ಮೇಲೆ ಎಂದ ವಿರಾಟ್ | Oneindia Kannada
4. ಅತಿ ಹೆಚ್ಚು ರನ್ ದಾಖಲೆ ಮಾಡಿದ ಜೋ ರೂಟ್

4. ಅತಿ ಹೆಚ್ಚು ರನ್ ದಾಖಲೆ ಮಾಡಿದ ಜೋ ರೂಟ್

ಟೀಮ್ ಇಂಡಿಯಾದ ಹಲವಾರು ಕ್ರಿಕೆಟಿಗರು ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಹಲವಾರು ಮೈಲಿಗಲ್ಲು ಮತ್ತು ದಾಖಲೆಗಳನ್ನು ನಿರ್ಮಿಸಿದ್ದರೆ, ಅತ್ತ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಬಾರಿಸಿರುವ ಸಕ್ರಿಯ ಕ್ರಿಕೆಟಿಗ ಎಂಬ ದಾಖಲೆಯನ್ನು ಮಾಡಿದ್ದಾರೆ.


ಪ್ರಸ್ತುತ ಸಕ್ರಿಯರಾಗಿರುವ ಆಟಗಾರರ ಪೈಕಿ ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿರುವ ಟಾಪ್ 4 ಬ್ಯಾಟ್ಸ್‌ಮನ್‌ಗಳ ಪಟ್ಟಿ ಈ ಕೆಳಕಂಡಂತಿದೆ..

1. ಜೋ ರೂಟ್: 5009 ರನ್
2. ಡೇವಿಡ್ ವಾರ್ನರ್: 4551 ರನ್
3. ರಾಸ್ ಟೇಲರ್: 3806 ರನ್
4. ಕೇನ್ ವಿಲಿಯಮ್ಸನ್: 3788 ರನ್

Story first published: Tuesday, September 7, 2021, 9:09 [IST]
Other articles published on Sep 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X