Yashasvi Jaiswal: 5ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್‌ಗಾಗಿ ಕಾಯುತ್ತಿರುವ ದಾಖಲೆಗಳಿವು!
ಮಾರ್ಚ್ 7ರಂದು ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧದ ಆರಂಭವಾಗಲಿರುವ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಫಾರ್ಮ್‌ನಲ್ಲಿರುವ ಯಶಸ್ವಿ ಜೈಸ್ವಾಲ್ ಅವರು ಕೆಲವು ಬೃಹತ್ ದಾಖಲೆಗಳನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ.
ಈಗಾಗಲೇ ಆತಿಥೇಯ ಭಾರತ ತಂಡ ಸರಣಿಯಲ್ಲಿ 3-1 ಅಂತರದ ಮುನ್ನಡೆಯನ್ನು ಹೊಂದಿರುವ ಕಾರಣ, ಯುವ ಬ್ಯಾಟರ್ ಈ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ.
ಯಶಸ್ವಿ ಜೈಸ್ವಾಲ್ ಈ ಸರಣಿಯಲ್ಲಿ ಎರಡು ದ್ವಿಶತಕಗಳ ಜೊತೆಗೆ ಎರಡು ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದೀಗ ಧರ್ಮಶಾಲಾದಲ್ಲಿ ಅವರು ನಿರ್ಮಿಸಬಹುದಾದ ದಾಖಲೆಗಳ ಪಟ್ಟಿ ಇಲ್ಲಿವೆ.

1,000 ಟೆಸ್ಟ್ ರನ್ ಬಾರಿಸಿದ ಎರಡನೇ ಅತಿ ವೇಗದ ಭಾರತೀಯ
ಯಶಸ್ವಿ ಜೈಸ್ವಾಲ್ ಪ್ರಸ್ತುತ ಎಂಟು ಟೆಸ್ಟ್ ಪಂದ್ಯಗಳ 15 ಇನ್ನಿಂಗ್ಸ್‌ಗಳಿಂದ 69.35ರ ಸರಾಸರಿಯಲ್ಲಿ 971 ರನ್‌ಗಳನ್ನು ಕಲೆಹಾಕಿದ್ದಾರೆ. ಇದೇ ವೇಳೆ ಮೂರು ಶತಕ, ಮೂರು ಅರ್ಧಶತಕಗಳನ್ನು ಗಳಿಸಿದ್ದಾರೆ.
1,000 ಟೆಸ್ಟ್ ರನ್‌ಗಳನ್ನು ತಲುಪಿದ ಎರಡನೇ ವೇಗದ ಭಾರತೀಯ ಎಂಬ ಹೆಗ್ಗಳಿಕೆಗೆ ಚೇತೇಶ್ವರ ಪೂಜಾರ ಅವರನ್ನು ಹಿಂದಿಕ್ಕಲು ತಮ್ಮ ಮುಂದಿನ ಎರಡು ಇನ್ನಿಂಗ್ಸ್‌ಗಳಲ್ಲಿ ಕೇವಲ 29 ರನ್‌ಗಳ ಅಗತ್ಯವಿದೆ. ಅನುಭವಿ ಬ್ಯಾಟರ್ ಚೇತೇಶ್ವರ ಪೂಜಾರ 18 ಇನ್ನಿಂಗ್ಸ್‌ಗಳಲ್ಲಿ 1,000 ರನ್‌ಗಳ ಮೈಲಿಗಲ್ಲನ್ನು ತಲುಪಿದ್ದರು.
ಈ ಹಿಂದೆ ವಿನೋದ್ ಕಾಂಬ್ಳಿ 14 ಇನ್ನಿಂಗ್ಸ್‌ಗಳಲ್ಲಿ 1,000 ಟೆಸ್ಟ್ ರನ್‌ಗಳ ಸಾಧನೆಯನ್ನು ವೇಗವಾಗಿ ಮಾಡಿದ ಭಾರತೀಯನಾಗಿ ಮುಂದುವರೆದಿದ್ದಾರೆ.
ಸುನಿಲ್ ಗವಾಸ್ಕರ್ ದಾಖಲೆ ಹಿಂದಿಕ್ಕುವ ಸನಿಹದಲ್ಲಿ ಯಶಸ್ವಿ ಜೈಸ್ವಾಲ್
ಎಡಗೈ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು 93.57ರ ಅದ್ಭುತ ಸರಾಸರಿಯಲ್ಲಿ 655 ರನ್‌ಗಳನ್ನು ಸಿಡಿಸಿರುವ ಮೂಲಕ ಸದ್ಯ ನಡೆಯುತ್ತಿರುವ ಟೆಸ್ಟ್ ಸರಣಿಯ ಟಾಪ್ ರನ್ ಸ್ಕೋರರ್ ಆಗಿದ್ದಾರೆ.
ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ನಂತರ ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ 700ಕ್ಕೂ ಅಧಿಕ ರನ್ ಗಳಿಸಿದ ಎರಡನೇ ಭಾರತೀಯ ಆಟಗಾರನಾಗಬಹುದು.
ಸುನಿಲ್ ಗವಾಸ್ಕರ್ 1971ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ವಿದೇಶ ಸರಣಿಯಲ್ಲಿ 774 ರನ್ ಮತ್ತು ಅದೇ ತಂಡದ ವಿರುದ್ಧ 1978-79 ತವರಿನ ಸರಣಿಯಲ್ಲಿ 732 ರನ್ ಗಳಿಸಿದ್ದರು.

ವಿರಾಟ್ ಕೊಹ್ಲಿ ಹಿಂದಿಕ್ಕಲು ಜೈಸ್ವಾಲ್‌ಗೆ 1 ರನ್ ಬೇಕು
ಇಂಗ್ಲೆಂಡ್ ವಿರುದ್ಧದ ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಲು ಮತ್ತು ವಿರಾಟ್ ಕೊಹ್ಲಿಯ ದಾಖಲೆ ಮುರಿಯಲು ಯಶಸ್ವಿ ಜೈಸ್ವಾಲ್‌ಗೆ ಒಂದು ರನ್ ಅಗತ್ಯವಿದೆ.
ಇದೇ ವೇಳೆ, ಯಶಸ್ವಿ ಜೈಸ್ವಾಲ್ ಅವರು ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ 700ಕ್ಕೂ ಅಧಿಕ ರನ್ ಗಳಿಸಿದ ಮೂರನೇ ಬ್ಯಾಟರ್ ಆಗಬಹುದು. ಇಂಗ್ಲೆಂಡ್ ಬ್ಯಾಟರ್‌ಗಳಾದ ಗ್ರಹಾಂ ಗೂಚ್ (1990ರಲ್ಲಿ 752 ರನ್) ಮತ್ತು ಜೋ ರೂಟ್ (2021-22ರಲ್ಲಿ 737 ರನ್) ಅವರ ಪಟ್ಟಿಗೆ ಸೇರಲಿದ್ದಾರೆ.
ಸಿಕ್ಸರ್ ದಾಖಲೆಯ ಮೇಲೆ ಕಣ್ಣಿಟ್ಟಿರುವ ಯಶಸ್ವಿ ಜೈಸ್ವಾಲ್
ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ ಭಾರತದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಪ್ರಸ್ತುತ 23 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ನ್ಯೂಜಿಲೆಂಡ್‌ನ ಟಿಮ್ ಸೌಥಿ (25) ಅವರನ್ನು ಹಿಂದಿಕ್ಕಲು ಮತ್ತು ಇಂಗ್ಲೆಂಡ್ ತಂಡದ ವಿರುದ್ಧ ಎರಡನೇ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ಗಳನ್ನು ಗಳಿಸಿದ ಬ್ಯಾಟರ್ ಆಗಲು ಅವರಿಗೆ ಕೇವಲ ಮೂರು ಸಿಕ್ಸರ್‌ಗಳ ಅಗತ್ಯವಿದೆ.
ವೆಸ್ಟ್ ಇಂಡೀಸ್ ಲೆಜೆಂಡ್ ವಿವಿಯನ್ ರಿಚರ್ಡ್ಸ್ (34 ಸಿಕ್ಸರ್) ಈ ವಿಷಯದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಯಶಸ್ವಿ ಜೈಸ್ವಾಲ್ ಅವರನ್ನು ಹಿಂದಿಕ್ಕಲು 12 ಸಿಕ್ಸರ್‌ಗಳು ಬೇಕಾಗಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications