ಕೊಹ್ಲಿ ಮತ್ತು ರೋಹಿತ್ ನಡುವೆ ಬಿರುಕು!; ಬಿರುಕಿಗೆ ಈ ವಿಡಿಯೋ ಸಾಕ್ಷಿ ಎನ್ನುತ್ತಿದ್ದಾರೆ ನೆಟ್ಟಿಗರು

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು ಭಾರತ ಮತ್ತು ಇಂಗ್ಲೆಂಡ್ ತಂಡಗಳೆರಡೂ ತಲಾ ಒಂದೊಂದು ಪಂದ್ಯವನ್ನು ಗೆಲ್ಲುವುದರ ಮೂಲಕ ಸಮಬಲವನ್ನು ಸಾಧಿಸಿವೆ. ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಮಳೆಯ ಕಾರಣದಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತ್ತು. ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 151 ರನ್‌ಗಳ ಭರ್ಜರಿ ಜಯವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿತ್ತು. ನಂತರ ಇತ್ತೀಚೆಗಷ್ಟೇ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಇಂಗ್ಲೆಂಡ್ 76 ರನ್‌ಗಳ ಇನ್ನಿಂಗ್ಸ್ ಗೆಲುವನ್ನು ದಾಖಲಿಸಿತು.
ಹೀಗೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಸರಣಿಯಲ್ಲಿ ಇಂಗ್ಲೆಂಡ್ ಸಮಬಲವನ್ನು ಸಾಧಿಸಿದೆ. ಇನ್ನು ಲಾರ್ಡ್ಸ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಟೀಮ್ ಇಂಡಿಯಾ ಆಟಗಾರರು ಲೀಡ್ಸ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಅಕ್ಷರಶಃ ಕಳಪೆ ಪ್ರದರ್ಶನ ನೀಡಿದರು.
ಹೀಗೆ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋತ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಈ ಪಂದ್ಯದ ಕುರಿತು ಸಾಕಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆಗಳಾಗುತ್ತಿವೆ. ಈ ಚರ್ಚೆಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವೆ ಬಿರುಕು ಮೂಡಿದೆ ಎಂಬ ವಿಚಾರ ಅತಿ ಹೆಚ್ಚಾಗಿ ಕೇಳಿಬರುತ್ತಿದೆ. ಹೌದು, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಮನಸ್ತಾಪವಿದೆ, ಇಬ್ಬರ ನಡುವೆಯೂ ಬಿರುಕು ಮೂಡಿದೆ ಎಂದೆಲ್ಲಾ ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದು, ಈ ಕೆಳಕಂಡ ವಿಡಿಯೋನಿಂದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಬಿರುಕು ಮೂಡಿದೆ ಎಂದು ನೆಟ್ಟಿಗರು ಈ ಕೆಳಕಂಡಂತೆ ಚರ್ಚೆಗಳನ್ನು ನಡೆಸುತ್ತಿದ್ದಾರೆ.

ವಿಡಿಯೋದಲ್ಲಿ ಇರೋದಾದ್ರೂ ಏನು?
ಲೀಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ವೇಳೆ ಮೊಹಮ್ಮದ್ ಶಮಿ ಎಸೆತದಲ್ಲಿ ಇಂಗ್ಲೆಂಡ್ ತಂಡದ ಆಟಗಾರ ಜಾನಿ ಬೇರ್‌ಸ್ಟೋ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿ ಪೆವಿಲಿಯನ್ ಕಡೆ ಪಯಣ ಬೆಳೆಸಿದರು. ಹೀಗೆ ಜಾನಿ ಬೇರ್‌ಸ್ಟೋ ಕ್ಯಾಚ್ ಪಡೆದ ವಿರಾಟ್ ಕೊಹ್ಲಿ ತನ್ನ ಸಹ ಆಟಗಾರರ ಜೊತೆ ಸಂಭ್ರಮಾಚರಣೆ ನಡೆಸಿದರು.ಈ ಸಂದರ್ಭದಲ್ಲಿ ಪರಸ್ಪರ ಎದುರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅಪ್ಪುಗೆ ನೀಡುವುದರ ಮೂಲಕ ಸಂಭ್ರಮಾಚರಣೆಯನ್ನು ನಡೆಸಿದರು ಆದರೆ ರೋಹಿತ್ ಶರ್ಮಾ ಮುಖದಲ್ಲಿ ಯಾವುದೇ ರೀತಿಯ ನಗು ಕಂಡು ಬಂದಿರಲಿಲ್ಲ. ಹಾಗೂ ಹೆಚ್ಚು ಹೊತ್ತು ಇಬ್ಬರೂ ಜೊತೆಗಿರದೇ ಬೇರೆ ಬೇರೆಯಾದದ್ದನ್ನು ವಿಡಿಯೊದಲ್ಲಿ ವೀಕ್ಷಿಸಿದ ನೆಟ್ಟಿಗರು ಇಬ್ಬರ ನಡುವೆ ಬಿರುಕು ಮೂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ರೋಹಿತ್ ಮುಖದಲ್ಲಿ ನಗುವೇ ಇಲ್ಲ ಎಂದ ನೆಟ್ಟಿಗ!
ಹೀಗೆ ಜಾನಿ ಬೇರ್‌ಸ್ಟೋ ಕ್ಯಾಚ್ ಪಡೆದ ಕೂಡಲೇ ಸಹ ಆಟಗಾರರ ಜೊತೆ ಸಂಭ್ರಮಾಚರಣೆ ಮಾಡಿದ ವಿರಾಟ್ ಕೊಹ್ಲಿ ಎದುರಾದಾಗ ರೋಹಿತ್ ಶರ್ಮಾ ಕೊಹ್ಲಿ ಜೊತೆ ಸೇರಿ ಸಂಭ್ರಮಾಚರಣೆಯನ್ನು ನಡೆಸಿದರು. ಆದರೆ ರೋಹಿತ್ ಶರ್ಮಾ ಮುಖದಲ್ಲಿ ನಿಜವಾದ ನಗುವೇ ಕಾಣಿಸಲಿಲ್ಲ ಎಂದು ನೆಟ್ಟಿಗನೊಬ್ಬ ಟ್ವೀಟ್ ಮಾಡಿದ್ದು ಇಬ್ಬರ ನಡುವೆಯೂ ಬಿರುಕು ಮೂಡಿದೆ ಎಂದಿದ್ದಾರೆ.

ಕೊಹ್ಲಿ ಮುಖವನ್ನೂ ಸಹ ರೋಹಿತ್ ಶರ್ಮಾ ನೋಡಲಿಲ್ಲ
ಈ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಮತ್ತೊಬ್ಬ ನೆಟ್ಟಿಗ ರೋಹಿತ್ ಶರ್ಮa ಸಂಭ್ರಮಾಚರಣೆಯ ವೇಳೆ ವಿರಾಟ್ ಕೊಹ್ಲಿಯವರ ಮುಖವನ್ನೇ ನೋಡುತ್ತಿಲ್ಲ, ಬೇಕಾಬಿಟ್ಟಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ ಅಷ್ಟೆ ಎಂದು ಟ್ವೀಟ್ ಮಾಡುವ ಮೂಲಕ ಇಬ್ಬರ ನಡುವೆಯೂ ಬಿರುಕು ಇರುವುದು ಸತ್ಯ ಎಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications