ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ಹೆಚ್ಚು ಪಂದ್ಯ ಗೆದ್ದಿರುವರಾರು ಗೊತ್ತಾ?

IND vs ENG: Lords pitch history and Test records

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದ ಕೊನೆಯ ಹಂತದಲ್ಲಿ ಟೀಮ್ ಇಂಡಿಯಾ ಗೆಲುವಿನ ಸನಿಹಕ್ಕೆ ಹತ್ತಿರವಾಗುತ್ತಿದ್ದಂತೆ ಮಳೆರಾಯನ ಆಗಮನವಾದ ಕಾರಣದಿಂದ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿತು. ಹೀಗೆ ಮೊದಲನೇ ಪಂದ್ಯದಲ್ಲಿ ಯಾವುದೇ ಫಲಿತಾಂಶ ಲಭಿಸಲಿಲ್ಲ, ಹೀಗಾಗಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಆಗಸ್ಟ್ 12ರಿಂದ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ.

ಭಾರತ vs ಇಂಗ್ಲೆಂಡ್: ಮಯಾಂಕ್ ಅಗರ್ವಾಲ್ ಅಗತ್ಯತೆಯಿಲ್ಲ ಎಂದು ಪರೋಕ್ಷವಾಗಿ ಹೇಳಿದ ಕೊಹ್ಲಿ!ಭಾರತ vs ಇಂಗ್ಲೆಂಡ್: ಮಯಾಂಕ್ ಅಗರ್ವಾಲ್ ಅಗತ್ಯತೆಯಿಲ್ಲ ಎಂದು ಪರೋಕ್ಷವಾಗಿ ಹೇಳಿದ ಕೊಹ್ಲಿ!

ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳೆಂದರೆ ಕ್ರೀಡಾಭಿಮಾನಿಗಳಲ್ಲಿ ಇತರೆ ಪಂದ್ಯಗಳಿಗಿಂತ ಹೆಚ್ಚು ಕುತೂಹಲ ಮತ್ತು ಆಸಕ್ತಿ ಹುಟ್ಟಿಕೊಂಡು ಬಿಡುತ್ತದೆ. ಅದರಲ್ಲೂ ಲಾರ್ಡ್ಸ್ ಅಂಗಳದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯಗಳಿಗೆ ಎಷ್ಟರ ಮಟ್ಟಿಗಿನ ಕ್ರೇಜ್ ಇದೆ ಎಂಬುದು ನಿಮಗೆಲ್ಲರಿಗೂ ತಿಳಿದಿರುವ ವಿಷಯವೇ. ಈ ಹಿಂದೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯಗಳಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಜಯ ಗಳಿಸಿದಾಗ ಫ್ಲಿಂಟಾಫ್ ಬಟ್ಟೆ ಬಿಚ್ಚಿ ಸಂಭ್ರಮಿಸಿದ್ದರು. ಅದೇ ರೀತಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಜಯ ಸಾಧಿಸಿದಾಗ ಆಗಿನ ಟೀಮ್ ಇಂಡಿಯಾ ನಾಯಕ ಸೌರವ್ ಗಂಗೂಲಿ ಬಟ್ಟೆ ಬಿಚ್ಚಿ ಸಂಭ್ರಮಿಸಿದ್ದ ಕ್ಷಣವನ್ನು ಕ್ರಿಕೆಟ್ ಅಭಿಮಾನಿಗಳು ಹೇಗೆ ತಾನೆ ಮರೆಯಲು ಸಾಧ್ಯ ಹೇಳಿ..

ಭಾರತ vs ಇಂಗ್ಲೆಂಡ್: ಟೆಸ್ಟ್ ಸರಣಿಯಿಂದ ಹೊರಬಿದ್ದು ಭಾವುಕರಾದ ಸ್ಟುವರ್ಟ್ ಬ್ರಾಡ್ಭಾರತ vs ಇಂಗ್ಲೆಂಡ್: ಟೆಸ್ಟ್ ಸರಣಿಯಿಂದ ಹೊರಬಿದ್ದು ಭಾವುಕರಾದ ಸ್ಟುವರ್ಟ್ ಬ್ರಾಡ್

ಹೀಗೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಮರೆಯಲಾಗದಂತಹ ಪಂದ್ಯಗಳು ನಡೆದಿದ್ದು, ಲಾರ್ಡ್ಸ್ ಅಂಗಳದಲ್ಲಿ ನಡೆದಿರುವ ಟೆಸ್ಟ್ ಪಂದ್ಯಗಳು ಕೂಡ ಮಹತ್ವದ್ದಾಗಿವೆ. ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಿರುವ ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ಮೇಲುಗೈ ಸಾಧಿಸಿದ್ದರೂ ಸಹ ಪ್ರಸ್ತುತ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕೂಡ ಗೆದ್ದು ಸರಣಿಯಲ್ಲಿ ಗೆಲುವಿನ ಖಾತೆ ತೆರೆಯುವಷ್ಟು ಬಲಿಷ್ಠವಾಗಿದೆ ಮತ್ತು ವಿಶ್ವಾಸ ಹೊಂದಿದೆ. ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಿರುವ ಟೆಸ್ಟ್ ಪಂದ್ಯಗಳಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದವರಾರು ಎಂಬುದರ ಕುರಿತ ಮಾಹಿತಿ ಈ ಕೆಳಕಂಡಂತಿದೆ ನೋಡಿ..

ಒಟ್ಟಾರೆ ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ಮೇಲುಗೈ

ಒಟ್ಟಾರೆ ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ಮೇಲುಗೈ

ಹೋಂ ಪಿಚ್ ಆಗಿರುವ ಕಾರಣ ಲಾರ್ಡ್ಸ್ ಅಂಗಳದಲ್ಲಿ ಇಂಗ್ಲೆಂಡ್ ತಂಡಕ್ಕೆ ತುಸು ಹೆಚ್ಚೇ ಅನುಕೂಲಗಳಿವೆ ಎಂದರೆ ತಪ್ಪಾಗಲಾರದು. ಹೀಗಾಗಿಯೇ ಲಾರ್ಡ್ಸ್ ಅಂಗಳದಲ್ಲಿ ನಡೆದಿರುವ ಒಟ್ಟಾರೆ ಟೆಸ್ಟ್ ಪಂದ್ಯಗಳ ಪೈಕಿ ಇಂಗ್ಲೆಂಡ್ ತಂಡ ಮೇಲುಗೈ ಸಾಧಿಸಿದೆ. ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಇದುವರೆಗೂ ಒಟ್ಟು 140 ಟೆಸ್ಟ್ ಪಂದ್ಯಗಳು ನಡೆದಿದ್ದು, ಇಂಗ್ಲೆಂಡ್ 55 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪ್ರವಾಸ ಕೈಗೊಂಡ ತಂಡಗಳು 32 ಪಂದ್ಯಗಳಲ್ಲಿ ಜಯ ಸಾಧಿಸಿವೆ ಹಾಗೂ 55 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಮುಖಾಮುಖಿ

ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಮುಖಾಮುಖಿ

ಮೊದಲೇ ಹೇಳಿದ ಹಾಗೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಎಂದಿಗೂ ಮರೆಯಲಾಗದಂತಹ ಪೈಪೋಟಿಯುತ ಪಂದ್ಯಗಳು ನಡೆದಿವೆ. ಇದುವರೆಗೂ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಒಟ್ಟು 18 ಟೆಸ್ಟ್ ಪಂದ್ಯಗಳು ಲಾರ್ಡ್ಸ್ ಅಂಗಳದಲ್ಲಿ ನಡೆದಿದ್ದು ಇದರಲ್ಲಿ 12 ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ಜಯಿಸಿದ್ದರೆ, ಭಾರತ ಕೇವಲ 2 ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿದೆ ಹಾಗೂ ಭಾರತ ಮತ್ತು ಇಂಗ್ಲೆಂಡ್ ನಡುವಿನ 4 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್ ಅಶ್ವಿನ್ಗೆ ಅವಕಾಶವೇ ಇಲ್ಲ | Oneindia Kannada
ಲಾರ್ಡ್ಸ್ ಅಂಗಳದಲ್ಲಿ ಮಿಂಚಿರುವ ಆಟಗಾರರು

ಲಾರ್ಡ್ಸ್ ಅಂಗಳದಲ್ಲಿ ಮಿಂಚಿರುವ ಆಟಗಾರರು

ಪ್ರಸ್ತುತ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿರುವ ಆಟಗಾರರ ಪೈಕಿ ಲಾರ್ಡ್ಸ್ ಅಂಗಳದಲ್ಲಿ ಮಿಂಚಿರುವವರೆಂದರೆ, ಲಾರ್ಡ್ಸ್ ಅಂಗಳದಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ 28 ಇನ್ನಿಂಗ್ಸ್‌ನಲ್ಲಿ 1271 ರನ್ ಕಲೆ ಹಾಕುವುದರ ಮೂಲಕ ಈಗಿನ ಬ್ಯಾಟ್ಸ್‌ಮನ್‌ಗಳ ಪೈಕಿ ಲಾರ್ಡ್ಸ್ ಅಂಗಳದಲ್ಲಿ ಅತಿಹೆಚ್ಚು ರನ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇಶಾಂತ್ ಶರ್ಮಾ ಲಾರ್ಡ್ಸ್ ಅಂಗಳದಲ್ಲಿ 3 ಪಂದ್ಯಗಳ ಪೈಕಿ 12 ವಿಕೆಟ್ ಪಡೆದು ಮಿಂಚಿದ್ದರೆ, ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆ್ಯಂಡರ್ಸನ್ 24 ಟೆಸ್ಟ್ ಪಂದ್ಯಗಳನ್ನಾಡಿ 105 ವಿಕೆಟ್‍ಗಳನ್ನು ಪಡೆದಿದ್ದಾರೆ. 2014ರಲ್ಲಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಶತಕ ಬಾರಿಸಿ ಮಿಂಚಿದ್ದ ಅಜಿಂಕ್ಯಾ ರಹಾನೆ ಮೇಲೂ ಸಾಕಷ್ಟು ನಿರೀಕ್ಷೆಗಳಿವೆ.

Story first published: Thursday, August 12, 2021, 14:06 [IST]
Other articles published on Aug 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X