ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾಗೆ ಸ್ವಾಗತ ಕೋರಿದ ಲಾರ್ಡ್ಸ್

IND vs ENG: Lord’s Twitter handle welcomes Team India to the venue with a Virat Kohli GIF

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಇದೇ ಗುರುವಾರ ಆಗಸ್ಟ್ 12ರಿಂದ ಆರಂಭವಾಗಲಿದ್ದು, ಈ ಪಂದ್ಯ ಕ್ರಿಕೆಟ್ ಕಾಶಿ ಎಂದು ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ಮೊದಲನೆ ಟೆಸ್ಟ್ ಪಂದ್ಯದಲ್ಲಿ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಿದವು. ಆದರೆ ಪಂದ್ಯ ವರುಣನ ಆಗಮನದಿಂದ ಡ್ರಾನಲ್ಲಿ ಅಂತ್ಯಗೊಂಡಿತು. ಹೀಗೆ ಪಂದ್ಯ ಡ್ರಾಗೊಂಡ ನಂತರ ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯವನ್ನಾಡಲು ಟೀಮ್ ಇಂಡಿಯಾ ಲಾರ್ಡ್ಸ್ ಕ್ರೀಡಾಂಗಣಕ್ಕೆ ಬಂದು ತಲುಪಿದೆ. ಹೀಗೆ ಲಾರ್ಡ್ಸ್ ಕ್ರೀಡಾಂಗಣವನ್ನು ತಲುಪಿದ ಟೀಮ್ ಇಂಡಿಯಾಗೆ ಲಾರ್ಡ್ಸ್ ಸ್ಟೇಡಿಯಂ ಸುಸ್ವಾಗತವನ್ನು ಕೋರಿದೆ. ತನ್ನ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಟೀಮ್ ಇಂಡಿಯಾಗೆ ಸ್ವಾಗತ ಕೋರಿ ಲಾರ್ಡ್ಸ್‌ ಟ್ವೀಟ್ ಮಾಡಿದೆ.

ವಿರಾಟ್ ಕೊಹ್ಲಿಯ ಜಿಐಎಫ್ ಒಂದನ್ನು ಬಳಸುವುದರ ಮೂಲಕ ಲಾರ್ಡ್ಸ್ ಸ್ಟೇಡಿಯಂನ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಟೀಮ್ ಇಂಡಿಯಾ ಆಟಗಾರರನ್ನು ಲಾರ್ಡ್ಸ್ ಕ್ರೀಡಾಂಗಣಕ್ಕೆ ಸ್ವಾಗತಿಸಲಾಗಿದೆ. ಇನ್ನು ಲಾರ್ಡ್ಸ್‌ ಕ್ರೀಡಾಂಗಣವನ್ನು ತಲುಪಿರುವ ಟೀಮ್ ಇಂಡಿಯಾ ಆಟಗಾರರು ಈಗಾಗಲೇ ಅಭ್ಯಾಸಗಳನ್ನು ಆರಂಭಿಸಿದ್ದು ಕ್ರಿಕೆಟ್ ಕಾಶಿ ಲಾರ್ಡ್ಸ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವುದರ ಮೂಲಕ ಟೂರ್ನಿಯಲ್ಲಿ ಮೊದಲನೇ ಗೆಲುವನ್ನು ಪಡೆದುಕೊಳ್ಳುವ ನಿರೀಕ್ಷೆಯಲ್ಲಿದೆ.

ಭಾರತ vs ಇಂಗ್ಲೆಂಡ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾದಿಂದ ಈ ಇಬ್ಬರು ಆಟಗಾರರು ಹೊರಬೀಳುವ ಸಾಧ್ಯತೆ!ಭಾರತ vs ಇಂಗ್ಲೆಂಡ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾದಿಂದ ಈ ಇಬ್ಬರು ಆಟಗಾರರು ಹೊರಬೀಳುವ ಸಾಧ್ಯತೆ!

ಹೀಗೆ ಲಾರ್ಡ್ಸ್ ಅಂಗಳದಲ್ಲಿ ಟೀಮ್ ಇಂಡಿಯಾ ಆಟಗಾರರು ಅಭ್ಯಾಸವನ್ನು ಆರಂಭಿಸಿದ್ದು ಈ ಅಭ್ಯಾಸದಲ್ಲಿ ಟೀಮ್ ಇಂಡಿಯಾದ ಆಟಗಾರರ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ ಕಾಣಿಸಿಕೊಂಡಿರುವುದು ಇದೀಗ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲವನ್ನು ಹೆಚ್ಚಿಸಿದೆ. ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಆಡುವ ಬಳಗದಲ್ಲಿ ಕಾಣಿಸಿಕೊಳ್ಳದೇ ಇದ್ದ ಭಾರತ ತಂಡದ ಆಟಗಾರರಾದ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ ಸದ್ಯ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಅಭ್ಯಾಸದಲ್ಲಿ ತೊಡಗಿಕೊಂಡಿದ್ದು, ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಈ ಇಬ್ಬರೂ ಕಣಕ್ಕಿಳಿಯುವುದು ಇದೀಗ ಬಹುತೇಕ ಖಚಿತವೆನಿಸಿದೆ. ಈ ನಿಟ್ಟಿನಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಲಿರುವ ಟೀಮ್ ಇಂಡಿಯಾ ತಂಡದಲ್ಲಿ ಕೆಲವೊಂದಿಷ್ಟು ಬದಲಾವಣೆಗಳಾಗಲಿದ್ದು ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾಗೆ ತಂಡದಲ್ಲಿ ಸ್ಥಾನ ನೀಡಿದರೆ, ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಯಾರಾದರೂ ಇಬ್ಬರು ಆಟಗಾರರನ್ನು ಎರಡನೇ ಟೆಸ್ಟ್ ಪಂದ್ಯದ ಆಡುವ ಬಳಗದಿಂದ ಕೈಬಿಡಬೇಕಾಗುತ್ತದೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಯಾವ ಇಬ್ಬರು ಆಟಗಾರರನ್ನು ಕೈಬಿಟ್ಟು ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾಗೆ ತಂಡದಲ್ಲಿ ಸ್ಥಾನ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ಗೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ ಎದುರಾಗಿದೆ!ಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ಗೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ ಎದುರಾಗಿದೆ!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಭಾರಿ ಬದಲಾವಣೆಗಳು ಆಗುವ ನಿರೀಕ್ಷೆಯಿದ್ದು ಅತ್ತ ಇಂಗ್ಲೆಂಡ್ ತಂಡದಲ್ಲಿಯೂ ಸಹ ದೊಡ್ಡ ಮಟ್ಟದ ಬದಲಾವಣೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಅಭ್ಯಾಸದ ವೇಳೆ ಕಾಲಿನ ಹಿಂಬದಿಯ ಭಾಗಕ್ಕೆ ಗಾಯ ಮಾಡಿಕೊಂಡಿರುವ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಸ್ಟುವರ್ಟ್ ಬ್ರಾಡ್ ಎರಡನೇ ಪಂದ್ಯಕ್ಕೆ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಮೊದಲನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದ ಸ್ಟುವರ್ಟ್ ಬ್ರಾಡ್ ಎರಡನೇ ಪಂದ್ಯಕ್ಕೆ ಅಲಭ್ಯರಾಗಲಿದ್ದು ಈ ಜಾಗಕ್ಕೆ ಯಾವ ಆಟಗಾರನನ್ನು ಇಂಗ್ಲೆಂಡ್ ಕಣಕ್ಕಿಳಿಸಲಿದೆ ಎಂಬುದು ಸದ್ಯಕ್ಕೆ ಕುತೂಹಲ ಕೆರಳಿಸಿದೆ. ಅಷ್ಟೇ ಅಲ್ಲದೆ ಇಂಗ್ಲೆಂಡ್ ತಂಡಕ್ಕೆ ಪ್ರಮುಖ ಆಲ್ ರೌಂಡರ್ ಮೊಯಿನ್ ಅಲಿ ಆಗಮನವಾಗುತ್ತಿದ್ದು ಮತ್ತೆ ಆಡುವ ಬಳಗವನ್ನು ಸೇರಿಕೊಳ್ಳಲಿದ್ದಾರೆ. ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊಯಿನ್ ಅಲಿ ಆಡುವ ಸಾಧ್ಯತೆಯಿದ್ದು ಇಂಗ್ಲೆಂಡ್ ತಂಡದ ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗಗಳೆರಡೂ ಕೊಂಚ ಬಲಿಷ್ಠವಾಗುವುದು ಖಚಿತ.

Story first published: Wednesday, August 11, 2021, 9:34 [IST]
Other articles published on Aug 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X