ಭಾರತದ ಈ ನಾಲ್ವರು ಬ್ಯಾಟ್ಸ್‌ಮನ್‌ಗಳಿಗೆ ಬೌಲಿಂಗ್‌ ಮಾಡುವುದು ಬಲು ಕಠಿಣ: ಮಾರ್ಕ್ ವುಡ್

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಗೀಡಾಗಿರುವ ವಿಷಯವೆಂದರೆ ಅದು ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ. ಹೌದು, ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಈ ಸರಣಿ ಅಂತಿಮ ಘಟ್ಟಕ್ಕೆ ತಲುಪಿದ್ದು ಯಾವ ತಂಡ ಸರಣಿಯಲ್ಲಿ ವಿಜೇತ ತಂಡವಾಗಿ ಹೊರಹೊಮ್ಮಲಿದೆ ಅಥವಾ ಸರಣಿ ಡ್ರಾನಲ್ಲಿ ಅಂತ್ಯಗೊಳ್ಳಲಿದೆಯಾ ಎಂಬ ಕುತೂಹಲ ಮತ್ತು ಕಾತರತೆ ಇದೀಗ ಎಲ್ಲರಲ್ಲಿಯೂ ಮೂಡಿದೆ. ಸರಣಿಯಲ್ಲಿ ಈಗಾಗಲೇ ಮುಗಿದಿರುವ 4 ಪಂದ್ಯಗಳ ಪೈಕಿ ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಜಯವನ್ನು ಸಾಧಿಸಿ ಸರಣಿಯಲ್ಲಿ ಮೇಲುಗೈ ಸಾಧಿಸಿದ್ದರೆ, ಅತ್ತ ಇಂಗ್ಲೆಂಡ್ ಕೇವಲ ಒಂದೇ ಒಂದು ಪಂದ್ಯದಲ್ಲಿ ಜಯ ಗಳಿಸುವುದರ ಮೂಲಕ ಅಂತಿಮ ಪಂದ್ಯವನ್ನು ಗೆಲ್ಲಲೇಬೇಕಾದ ಪರಿಸ್ಥಿತಿಯಲ್ಲಿದೆ.

4 ಟೆಸ್ಟ್‌ಗಳಲ್ಲಿ ಭಾರತದ ಈ 3 ಆಟಗಾರರನ್ನು ಕಟ್ಟಿಹಾಕಲು ನಮ್ಮಿಂದ ಆಗಲಿಲ್ಲ: ಮಾರ್ಕ್ ವುಡ್4 ಟೆಸ್ಟ್‌ಗಳಲ್ಲಿ ಭಾರತದ ಈ 3 ಆಟಗಾರರನ್ನು ಕಟ್ಟಿಹಾಕಲು ನಮ್ಮಿಂದ ಆಗಲಿಲ್ಲ: ಮಾರ್ಕ್ ವುಡ್

ಹೌದು, ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ತಂಡ ಗೆದ್ದರೆ ಸರಣಿ ಡ್ರಾ ಆಗಲಿದೆ, ಒಂದುವೇಳೆ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕೂಡ ಟೀಮ್ ಇಂಡಿಯಾ ಗೆದ್ದರೆ ಅಥವಾ ಪಂದ್ಯ ಡ್ರಾ ಆದರೆ ಸರಣಿ ವಿರಾಟ್ ಕೊಹ್ಲಿ ಪಡೆಯ ಕೈವಶವಾಗಲಿದೆ. ಹೀಗಾಗಿ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಪಂದ್ಯದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆಗಳು ಹುಟ್ಟಿಕೊಂಡಿವೆ. ಇನ್ನು ಈ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಮಾರ್ಕ್ ವುಡ್ ಭಾರತ ಕ್ರಿಕೆಟ್ ತಂಡದ ವಿವಿಧ ಆಟಗಾರರ ಬಗ್ಗೆ ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಈ ತಂಡ ಇಟ್ಟುಕೊಂಡು ಟಿ20 ವಿಶ್ವಕಪ್‌ ಗೆಲ್ಲುತ್ತಾ ಇಂಗ್ಲೆಂಡ್?; 3 ಬಲಿಷ್ಠ ಆಟಗಾರರಿಗೆ ಇಲ್ಲ ಸ್ಥಾನ!ಈ ತಂಡ ಇಟ್ಟುಕೊಂಡು ಟಿ20 ವಿಶ್ವಕಪ್‌ ಗೆಲ್ಲುತ್ತಾ ಇಂಗ್ಲೆಂಡ್?; 3 ಬಲಿಷ್ಠ ಆಟಗಾರರಿಗೆ ಇಲ್ಲ ಸ್ಥಾನ!

ಟೀಮ್ ಇಂಡಿಯಾದ ಬೌಲರ್‌ಗಳು ಲಾರ್ಡ್ಸ್ ಮತ್ತು ಓವಲ್ ಟೆಸ್ಟ್ ಪಂದ್ಯಗಳಲ್ಲಿ ನೀಡಿದ ಅತ್ಯದ್ಭುತ ಪ್ರದರ್ಶನವನ್ನು ಶ್ಲಾಘಿಸಿದ್ದ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಮಾರ್ಕ್ ವುಡ್ ಟೀಮ್ ಇಂಡಿಯಾದ ನಾಲ್ವರು ಬ್ಯಾಟ್ಸ್‌ಮನ್‌ಗಳಿಗೆ ಬೌಲಿಂಗ್ ಮಾಡುವುದು ತೀರಾ ಕಷ್ಟದ ಕೆಲಸ ಎಂದು ಹೇಳಿಕೆ ನೀಡಿದ್ದಾರೆ. ಹೌದು, ಭಾರತ ತಂಡದ ಬ್ಯಾಟಿಂಗ್ ಲೈನ್ ಅಪ್ ತುಂಬಾ ಬಲಿಷ್ಠವಾಗಿದ್ದು ಈ ಕೆಳಕಂಡ ನಾಲ್ವರು ಬ್ಯಾಟ್ಸ್‌ಮನ್‌ಗಳಿಗೆ ಬೌಲಿಂಗ್ ಮಾಡುವುದು ಬಲು ಕಠಿಣ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಈ ನಾಲ್ವರು ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಬೌಲಿಂಗ್ ಮಾಡುವುದು ಬಲು ಕಠಿಣ

ಈ ನಾಲ್ವರು ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಬೌಲಿಂಗ್ ಮಾಡುವುದು ಬಲು ಕಠಿಣ

ಟೀಮ್ ಇಂಡಿಯಾದ ವಿವಿಧ ಆಟಗಾರರ ಕುರಿತು ಮಾತನಾಡಿರುವ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಮಾರ್ಕ್ ವುಡ್ ಭಾರತದ ನಾಲ್ವರು ಪ್ರಮುಖ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆ ಎಲ್ ರಾಹುಲ್ ಮತ್ತು ಚೇತೇಶ್ವರ್ ಪೂಜಾರಾಗೆ ಬೌಲಿಂಗ್ ಮಾಡುವುದು ತೀರಾ ಕಷ್ಟದ ಕೆಲಸ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಭಾರತದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ರೋಹಿತ್ ಶರ್ಮಾ ಅವರಿಗೆ ಎಂತಹ ಪರಿಸ್ಥಿತಿಯಲ್ಲಿಯೂ ಸಹ ಬೌಲಿಂಗ್ ಮಾಡುವುದು ತೀರಾ ಕಷ್ಟದ ಕೆಲಸ ಎಂದು ಮಾರ್ಕ್ ವುಡ್ ಹೇಳಿಕೆ ನೀಡಿದ್ದಾರೆ. ಇನ್ನು ರೋಹಿತ್ ಶರ್ಮಾ ಜೊತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಕೆಎಲ್ ರಾಹುಲ್ ಕೂಡ ಜಾಣ್ಮೆಯ ಆಟವನ್ನಾಡುತ್ತಾರೆ, ಆರಂಭದಲ್ಲಿಯೇ ದೊಡ್ಡ ಹೊಡೆತಗಳಿಗೆ ಕೈ ಹಾಕದೇ ತುಂಬಾ ಜಾಗರೂಕತೆಯಿಂದ ಆಡುವ ಕೆಎಲ್ ರಾಹುಲ್ ಭಾರತ ತಂಡದ ಬಲಿಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂದು ಮಾರ್ಕ್ ವುಡ್ ಹೇಳಿದ್ದಾರೆ. ನಂತರ ಚೇತೇಶ್ವರ್ ಪೂಜಾರ ಕೂಡ ಟೀಮ್ ಇಂಡಿಯಾ ತಂಡದ ಬಲಿಷ್ಠ ಆಟಗಾರರಲ್ಲಿ ಓರ್ವರು, ಪೂಜಾರ ಮೈದಾನಕ್ಕೆ ಹೊಂದಿಕೊಂಡ ನಂತರ ಆತನ ವಿಕೆಟ್ ಪಡೆಯುವುದು ಸುಲಭದ ಮಾತಲ್ಲ ಎಂದು ಮಾರ್ಕ್ ವುಡ್ ಹೇಳಿದ್ದಾರೆ. ಕೊನೆಯದಾಗಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿರುವ ಮಾರ್ಕ್ ವುಡ್ ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲಿಯೇ ತಾನು ಎದುರಿಸಿರುವ ಕೆಲ ಕಠಿಣವಾದ ಬ್ಯಾಟ್ಸ್‌ಮನ್‌ಗಳಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು ಎಂದು ಶ್ಲಾಘಿಸಿದ್ದಾರೆ.

ಟೀಮ್ ಇಂಡಿಯಾದ್ದು ವರ್ಲ್ಡ್-ಕ್ಲಾಸ್ ಬ್ಯಾಟಿಂಗ್ ಲೈನ್ ಅಪ್

ಟೀಮ್ ಇಂಡಿಯಾದ್ದು ವರ್ಲ್ಡ್-ಕ್ಲಾಸ್ ಬ್ಯಾಟಿಂಗ್ ಲೈನ್ ಅಪ್

ಹೀಗೆ ಭಾರತದ ಈ ಮೇಲ್ಕಂಡ ನಾಲ್ವರು ಬ್ಯಾಟ್ಸ್‌ಮನ್‌ಗಳಿಗೆ ಬೌಲಿಂಗ್ ಮಾಡುವುದು ತೀರಾ ಕಷ್ಟದ ಕೆಲಸ ಎಂದು ಹೇಳಿಕೆ ನೀಡಿರುವ ಮಾರ್ಕ್ ವುಡ್ ಭಾರತದ ಬ್ಯಾಟಿಂಗ್ ಲೈನ್ ಅಪ್ ವಿಶ್ವದಲ್ಲಿಯೇ ಶ್ರೇಷ್ಠವಾದದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಟೀಮ್ ಇಂಡಿಯಾದ ಪ್ರತಿಯೊಬ್ಬ ಬ್ಯಾಟ್ಸ್‌ಮನ್‌ ಕಣಕ್ಕೆ ಬಂದಾಗಲೂ ಸಹ ಈತ ಅಪಾಯಕಾರಿ ಬ್ಯಾಟ್ಸ್‌ಮನ್‌ ಎನ್ನುವ ಅಂಶ ಎದುರಾಳಿ ಆಟಗಾರರ ತಲೆಗೆ ಬಂದೇ ಬರುತ್ತದೆ ಎಂದು ಮಾರ್ಕ್ ವುಡ್ ಹೇಳಿಕೆ ನೀಡಿದ್ದಾರೆ.

Kohli ಹಾಗು Siraj ನಾಳೆ RCB camp ಸೇರಲಿದ್ದಾರೆ | Oneindia Kannada
ಟೀಮ್ ಇಂಡಿಯಾ ಸರಣಿ ಗೆದ್ದರೆ 14 ವರ್ಷಗಳ ಬಳಿಕ ಇತಿಹಾಸ ಮರುನಿರ್ಮಾಣ

ಟೀಮ್ ಇಂಡಿಯಾ ಸರಣಿ ಗೆದ್ದರೆ 14 ವರ್ಷಗಳ ಬಳಿಕ ಇತಿಹಾಸ ಮರುನಿರ್ಮಾಣ

ಸದ್ಯ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆಯನ್ನು ಸಾಧಿಸಿರುವ ಟೀಮ್ ಇಂಡಿಯಾ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯವನ್ನು ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿಯಲ್ಲಿ ವಿಜೇತ ತಂಡವಾಗಿ ಹೊರಹೊಮ್ಮಲಿದೆ. ಹೀಗೆ ನಡೆದರೆ ಇಂಗ್ಲೆಂಡ್ ನೆಲದಲ್ಲಿ ಬರೋಬ್ಬರಿ 14 ವರ್ಷಗಳ ಬಳಿಕ ಟೆಸ್ಟ್ ಸರಣಿಯನ್ನು ಗೆಲ್ಲುವುದರ ಮೂಲಕ ವಿರಾಟ್ ಕೊಹ್ಲಿ ಪಡೆ ಇತಿಹಾಸವನ್ನು ಮರು ಸೃಷ್ಟಿ ಮಾಡಲಿದೆ.

For Quick Alerts
ALLOW NOTIFICATIONS
For Daily Alerts
Story first published: Friday, September 10, 2021, 8:17 [IST]
Other articles published on Sep 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X