For Quick Alerts
ALLOW NOTIFICATIONS  
For Daily Alerts
 

ಓವಲ್ ಟೆಸ್ಟ್: ಇಂಗ್ಲೆಂಡ್ ತಂಡಕ್ಕೆ ನೂತನ ಉಪನಾಯಕನ ನೇಮಕ

Ind vs Eng: Moeen Ali appointed vice-captain in place of Jos Buttler for Oval test

ಲಂಡನ್, ಸೆಪ್ಟೆಂಬರ್ 1: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಗುರುವಾರ ನಡೆಯಲಿದೆ. ಈ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಉಪನಾಯಕ ಹಾಗೂ ವಿಕೆಟ್ ಕೀಪರ್ ಜೋಸ್ ಬಟ್ಲರ್ ಹೊರಗುಳಿಯಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡಕ್ಕೆ ನೂತನ ಉಪನಾಯಕನನ್ನು ಹೆಸರಿಸಲಾಗಿದೆ. ಆಲ್‌ರೌಂಡರ್ ಮೊಯೀನ್ ಅಲಿ ಆತಿಥೇಯ ತಂಡದ ನೂತನ ಉಪನಾಯಕನಾಗಿ ಜವಾಬ್ಧಾರಿಯನ್ನು ವಹಿಸಲಿದ್ದಾರೆ.

ಇಂಗ್ಲೆಂಡ್ ತಂಡದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಹಾಗೂ ತಂಡದ ಉಪನಾಯಕನಾಗಿದ್ದ ಜೋಸ್ ಬಟ್ಲರ್ ಸರಣಿಯ ಮುಂದಿನ ಎರಡು ಪಂದ್ಯಗಳಿಂದ ವಿಶ್ರಾಂತಿಯನ್ನು ಪಡೆಯಲಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಬಟ್ಲರ್ ಪಿತೃತ್ವದ ರಜೆಯನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ತಂಡದಲ್ಲಿ ಈ ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. ಭಾರತದ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಂದ ಮಾತ್ರವಲ್ಲದೆ ಜೋಸ್ ಬಟ್ಲರ್ ಈ ತಿಂಗಳಿನಲ್ಲಿ ಆರಂಭವಾಗಲಿರುವ ಐಪಿಎಲ್‌ನ ಉಳಿದ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ.

ಇಂಗ್ಲೆಂಡ್ ತಂಡದ ಉಪನಾಯಕನಾಗಿ ನೇಮಕವಾಗಿರುವ 34ರ ಹರೆಯದ ಮೊಯೀನ್ ಅಲಿ ಈವರೆಗೆ ಇಂಗ್ಲೆಂಡ್ ತಂಡದ ಪರವಾಗಿ 63 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. 2879 ರನ್‌ಗಳನ್ನು ಗಳಿಸಿರುವ ಅಲಿ ಐದು ಶತಕಗಳನ್ನು ಬಾರಿಸಿದ್ದಾರೆ. ಇನ್ನು ಬೌಲಿಂಗ್‌ನಲ್ಲಿ 193 ವಿಕೆಟ್ ಕಬಳಿಸಿರುವ ಈ ಆಟಗಾರ ಐದು ಬಾರಿ ಐದು ವಿಕೆಟ್‌ಗಳ ಗೊಂಚಲು ಪಡೆದುಕೊಂಡಿದ್ದಾರೆ.

ಭಾರತದ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಕೆಲ ಪ್ರಮುಖ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಭುಜದ ನೋವಿನ ಕಾರಣ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗಿಳಿದಿದ್ದ ಮಾರ್ಕ್‌ವುಡ್ ನಾಲ್ಕನೇ ಟೆಸ್ಟ್‌ನಲ್ಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಗಾಯದ ಕಾರಣದಿಂದಾಗಿಯೇ ಮೊದಲ ಮೂರು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ಕ್ರಿಸ್ ವೋಕ್ಸ್ ನಾಲ್ಕನೇ ಪಂದ್ಯಕ್ಕೆ ಲಭ್ಯವಾಗಲಿದ್ದಾರೆ. ಇನ್ನು ಅನುಭವಿ ಜೇಮ್ಸ್ ಆಂಡರ್ಸನ್‌ಗೆ ನಾಲ್ಕನೇ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.

ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳೂ ಸಹ ಸಮಬಲವನ್ನು ಸಾಧಿಸಿರುವ ಕಾರಣದಿಂದ ನಾಲ್ಕನೇ ಟೆಸ್ಟ್ ಪಂದ್ಯದ ಮೇಲಿನ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಓವಲ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 2 ರಂದು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಈಗ ಅಂತಿಮ ಎರಡು ಪಂದ್ಯಗಳು ಮಾತ್ರ ಬಾಕಿಯರುವ ಕಾರಣ ಇತ್ತಂಡಗಳ ನಡುವಿನ ಪೈಪೋಟಿ ಜೋರಾಗಿರಲಿದೆ.

ಇನ್ನು ನಾಲ್ಕನೇ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಕೂಡ ಕೆಲ ಬದಲಾವಣೆಗಳೊಮದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಆರ್ ಅಶ್ವಿನ್ ಸೇರ್ಪಡೆ ಬಗ್ಗೆ ಕುತೂಹಲ ನಾಲ್ಕನೇ ಪಂದ್ಯಕ್ಕೂ ಮುಂದುವರಿದಿದ್ದು ಈ ನಿಟ್ಟಿನಲ್ಲಿ ತಂಡ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬುದು ಗುರುವಾರವೇ ಸ್ಪಷ್ಟವಾಗಲಿದೆ.

ಭಾರತದ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್‌), ರವೀಂದ್ರ ಜಡೇಜಾ / ಆರ್ ಅಶ್ವಿನ್, ಇಶಾಂತ್ ಶರ್ಮಾ/ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ

ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಹಸೀಬ್ ಹಮೀದ್, ರೋರಿ ಬರ್ನ್ಸ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊವ್ (ವಿಕೆಟ್ ಕೀಪರ್‌), ಡೇನಿಯಲ್ ಲಾರೆನ್ಸ್/ ಒಲ್ಲಿ ಪೋಪ್, ಮೊಯೀನ್ ಅಲಿ, ಒಲ್ಲಿ ರಾಬಿನ್ಸನ್, ಸ್ಯಾಮ್ ಕರನ್/ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್ ಮತ್ತು ಮಾರ್ಕ್ ವುಡ್

Story first published: Wednesday, September 1, 2021, 17:45 [IST]
Other articles published on Sep 1, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+