ಭಾರತ vs ಇಂಗ್ಲೆಂಡ್: ಅಶ್ವಿನ್‌ಗೆ ಅವಕಾಶ ಸಿಗದಿರಲು ಕಾರಣ ಯಾರೆಂಬುದನ್ನು ತಿಳಿಸಿದ ಮೊಹಮ್ಮದ್ ಶಮಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 1-0 ಮುನ್ನಡೆಯನ್ನು ಸಾಧಿಸಿದೆ.
ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಯಾವುದೇ ಫಲಿತಾಂಶ ಲಭಿಸದೇ ಡ್ರಾನಲ್ಲಿ ಅಂತ್ಯಗೊಂಡಿತ್ತು. ನಂತರ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಬೌಲರ್‌ಗಳ ಅತ್ಯದ್ಭುತ ಪ್ರದರ್ಶನದ ಕಾರಣ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 151 ರನ್‌ಗಳ ಜಯವನ್ನು ಸಾಧಿಸುವುದರ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಗೆಲುವಿನ ಖಾತೆ ತೆರೆದು ಮುನ್ನಡೆಯನ್ನು ಸಾಧಿಸಿತು.
ಹೀಗೆ ಲಾರ್ಡ್ಸ್ ಅಂಗಳದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಇಂಗ್ಲೆಂಡ್ ವಿರುದ್ಧ ಭರ್ಜರಿಯಾಗಿ ಗೆದ್ದು ಬೀಗಿದ್ದ ಟೀಂ ಇಂಡಿಯಾ ಲೀಡ್ಸ್ ಅಂಗಣದಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಅಕ್ಷರಶಃ ಮಂಕಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ 78 ರನ್‌ಗಳಿಗೆ ಆಲ್ ಔಟ್ ಆಯಿತು. ಅತ್ತ ಮೊದಲನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಪರ ಅಗ್ರ ಕ್ರಮಾಂಕದ ಆಟಗಾರರಾದ ರೊರಿ ಬರ್ನ್ಸ್ 61, ಹಸೀಬ್ ಹಮೀದ್ 68, ಡೇವಿಡ್ ಮಲನ್ 71 ಮತ್ತು ಜೋ ರೂಟ್ 121 ರನ್ ಬಾರಿಸುವುದರ ಮೂಲಕ ಇಂಗ್ಲೆಂಡ್ ಎರಡನೇ ದಿನದಾಟದಂತ್ಯಕ್ಕೆ 8 ವಿಕೆಟ್ ನಷ್ಟಕ್ಕೆ 423 ರನ್ ಗಳಿಸಿ ಭಾರತದ ವಿರುದ್ಧ 345 ರನ್ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಹೀಗೆ ಎರಡನೆ ದಿನದಾಟದಲ್ಲಿ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನವನ್ನು ನೀಡುವಲ್ಲಿ ಭಾರತದ ಬೌಲರ್‌ಗಳು ವಿಫಲರಾದರು. ಎರಡನೇ ದಿನದಾಟ ಮುಗಿದ ನಂತರ ಪಂದ್ಯದ ಕುರಿತು ಮಾತನಾಡಿದ ಮೊಹಮ್ಮದ್ ಶಮಿಗೆ ಪತ್ರಕರ್ತರು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ತಂಡದಿಂದ ಹೊರಗಿಟ್ಟಿರುವುದ್ದೇಕೆ ಎಂಬ ಪ್ರಶ್ನೆಯನ್ನು ಕೇಳಿದರು. ಈ ಸಂದರ್ಭದಲ್ಲಿ ರವಿಚಂದ್ರನ್ ಅಶ್ವಿನ್ ತಂಡದಿಂದ ಹೊರಗುಳಿದಿರುವುದರ ಕುರಿತು ಮೊಹಮ್ಮದ್ ಶಮಿ ಈ ಕೆಳಕಂಡಂತೆ ಉತ್ತರ ನೀಡಿದರು..

ಅಶ್ವಿನ್ ಕುರಿತು ಮಾತನಾಡುವುದಿಲ್ಲ ಎಂದ ಮೊಹಮ್ಮದ್ ಶಮಿ
ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ರವಿಂಚಂದ್ರನ್ ಅಶ್ವಿನ್ ಅವರಿಗೆ ತಂಡದಲ್ಲಿ ಸ್ಥಾನವೇಕೆ ಸಿಕ್ಕಿಲ್ಲ ಎಂಬ ಪ್ರಶ್ನೆ ಕೇಳಿದಾಗ, ಪಂದ್ಯವೊಂದಕ್ಕೆ ಆಡುವ ಬಳಗವನ್ನು ಆಯ್ಕೆ ಮಾಡುವುದು ಟೀಮ್ ಮ್ಯಾನೇಜ್‌ಮೆಂಟ್‌ನ ಕೆಲಸ. ಮ್ಯಾನೇಜ್‌ಮೆಂಟ್ ಆಯ್ಕೆ ಮಾಡಿದ ತಂಡದ ಕುರಿತು ಮಾತನಾಡುವುದು ಸರಿಯಲ್ಲ, ಮ್ಯಾನೇಜ್‌ಮೆಂಟ್ ಆಯ್ಕೆ ಮಾಡಿದ ತಂಡದ ಜೊತೆ ಬೆರೆತು ಉತ್ತಮ ಪ್ರದರ್ಶನ ನೀಡುವುದಷ್ಟೇ ನಮ್ಮ ಕೆಲಸ ಎಂದು ಹೇಳಿಕೆ ನೀಡುವುದರ ಮೂಲಕ ಮೊಹಮ್ಮದ್ ಶಮಿ ರವಿಚಂದ್ರನ್ ಅಶ್ವಿನ್ ಅವರಿಗೆ ತಂಡದಲ್ಲಿ ಸ್ಥಾನ ನೀಡದೆ ಇರುವುದರ ಕುರಿತು ಮಾತನಾಡಲು ನಿರಾಕರಿಸಿದರು.

ವಿಕೆಟ್ ಬೀಳದಿರಲು ಪಿಚ್ ಕಾರಣ
ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಇಂಗ್ಲೆಂಡ್ ಆಟಗಾರರ ವಿಕೆಟ್ ಪಡೆಯಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಾರತದ ಬೌಲರ್‌ಗಳು ವಿಕೆಟ್ ಪಡೆಯಲು ಹರಸಾಹಸ ಪಡುತ್ತಿದ್ದರೆ ಅತ್ತ ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್‌ಗಳು ಭರ್ಜರಿ ಬ್ಯಾಟಿಂಗ್ ನಡೆಸಿ ದೊಡ್ಡ ಮೊತ್ತವನ್ನು ಕಲೆ ಹಾಕಿದರು. ಹೀಗೆ ಮುಂದುವರೆದು ಲೀಡ್ಸ್ ಕ್ರೀಡಾಂಗಣದ ಪಿಚ್ ಕುರಿತು ಮಾತನಾಡಿದ ಮೊಹಮ್ಮದ್ ಶಮಿ ಎರಡನೇ ದಿನದಾಟದಲ್ಲಿ ಇಂಗ್ಲೆಂಡ್ ಆಟಗಾರರ ವಿಕೆಟ್ ಪಡೆಯಲು ಕಷ್ಟವಾದದ್ದು ಹೆಡಿಂಗ್ಲೆ ಕ್ರೀಡಾಂಗಣದ ಪಿಚ್ ಎಂದು ಕಾರಣ ನೀಡಿದರು. ಹೆಡಿಂಗ್ಲೆ ಕ್ರೀಡಾಂಗಣದ ಪಿಚ್ ನಿಧಾನಗತಿಯಲ್ಲಿತ್ತು, ಹೀಗಾಗಿಯೇ ವಿಕೆಟ್ ಪಡೆದುಕೊಳ್ಳುವುದು ತೀರಾ ಕಷ್ಟದ ಕೆಲಸವಾಯಿತು ಎಂದು ಮೊಹಮ್ಮದ್ ಶಮಿ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು.

ಮೊದಲನೇ ಇನ್ನಿಂಗ್ಸ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಶಮಿ
ಇಂಗ್ಲೆಂಡ್ ವಿರುದ್ಧ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 28 ಓವರ್ ಬೌಲಿಂಗ್ ಮಾಡಿರುವ ಮೊಹಮ್ಮದ್ ಶಮಿ 4 ವಿಕೆಟ್‍ಗಳನ್ನು ಪಡೆದುಕೊಳ್ಳುವುದರ ಮೂಲಕ ಮೊದಲನೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications