ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ತುಟಿ ಮೇಲೆ ಬೆರಳಿಟ್ಟು ಸಂಭ್ರಮಿಸುವುದು ಯಾರ ವಿರುದ್ಧ ಎಂಬುದನ್ನು ಬಹಿರಂಗಪಡಿಸಿದ ಸಿರಾಜ್

IND vs ENG: Mohammed Siraj opens up about his ‘finger on lips’ celebration

ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್ ನಾಯಕ ಜೋ ರೂಟ್ ಟೀಮ್ ಇಂಡಿಯಾಗೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ಬಿಟ್ಟುಕೊಟ್ಟರು.

ಭಾರತ vs ಇಂಗ್ಲೆಂಡ್: ಭಾರತೀಯರ ಪರಿಸ್ಥಿತಿ ನೋಡಿದರೆ ನಗು ಬರುತ್ತದೆ ಎಂದು ಕಾಲೆಳೆದ ಮಾಜಿ ಕ್ರಿಕೆಟಿಗಭಾರತ vs ಇಂಗ್ಲೆಂಡ್: ಭಾರತೀಯರ ಪರಿಸ್ಥಿತಿ ನೋಡಿದರೆ ನಗು ಬರುತ್ತದೆ ಎಂದು ಕಾಲೆಳೆದ ಮಾಜಿ ಕ್ರಿಕೆಟಿಗ

ಹೀಗೆ ಎರಡನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ 364 ರನ್ ಕಲೆಹಾಕಿತು. ಟೀಮ್ ಇಂಡಿಯಾದ ಪರ ರೋಹಿತ್ ಶರ್ಮಾ 83, ಕೆಎಲ್ ರಾಹುಲ್ 129, ವಿರಾಟ್ ಕೊಹ್ಲಿ 42, ರವೀಂದ್ರ ಜಡೇಜಾ 40 ಮತ್ತು ರಿಷಭ್ ಪಂತ್ 37ರನ್ ಬಾರಿಸಿ ಮಿಂಚಿದರು. ಈ ಆಟಗಾರರನ್ನು ಹೊರತು ಪಡಿಸಿದರೆ ಟೀಮ್ ಇಂಡಿಯಾದ ಬೇರೆ ಯಾವುದೇ ಆಟಗಾರರು ಸಹ ಎರಡಂಕಿಯ ಮೊತ್ತವನ್ನು ಮುಟ್ಟಲು ಸಫಲರಾಗಲಿಲ್ಲ.

ಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾ ಸೇರಿದ ಇಬ್ಬರು ಹೊಸ ಆಟಗಾರರುಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾ ಸೇರಿದ ಇಬ್ಬರು ಹೊಸ ಆಟಗಾರರು

ಇನ್ನು ಮೊದಲನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ತಂಡದ ಪರ ನಾಯಕ ಜೋ ರೂಟ್ ಅಜೇಯ 180 ರನ್ ಬಾರಿಸುವುದರ ಮೂಲಕ ಇಂಗ್ಲೆಂಡ್ ತಂಡಕ್ಕೆ ಆಸರೆಯಾದರು. ಜೋ ರೂಟ್ ಅಮೋಘ ಇನ್ನಿಂಗ್ಸ್‌ನ ಸಹಾಯದಿಂದ ಇಂಗ್ಲೆಂಡ್ ತಂಡ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 391 ರನ್ ಗಳಿಸಿ 27 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತು. ಇನ್ನು ಮೊದಲ ಇನ್ನಿಂಗ್ಸ್ ಬೌಲಿಂಗ್‌ನಲ್ಲಿ ಭಾರತದ ಮೊಹಮ್ಮದ್ ಸಿರಾಜ್ 4 ವಿಕೆಟ್, ಇಶಾಂತ್ ಶರ್ಮಾ 3 ವಿಕೆಟ್ ಮತ್ತು ಮೊಹಮ್ಮದ್ ಶಮಿ 2 ವಿಕೆಟ್‍ಗಳನ್ನು ಪಡೆದುಕೊಂಡು ಮಿಂಚಿದರು.

ಭಾರತ vs ಇಂಗ್ಲೆಂಡ್: ಇಂಗ್ಲೆಂಡ್ ವಿರುದ್ಧ ನಾನೂ ಆಡುತ್ತೇನೆಂದು ಮೈದಾನಕ್ಕೆ ನುಗ್ಗಿದ ಜಾರ್ವೋ!ಭಾರತ vs ಇಂಗ್ಲೆಂಡ್: ಇಂಗ್ಲೆಂಡ್ ವಿರುದ್ಧ ನಾನೂ ಆಡುತ್ತೇನೆಂದು ಮೈದಾನಕ್ಕೆ ನುಗ್ಗಿದ ಜಾರ್ವೋ!

ಭಾರತದ ಪರ 4 ವಿಕೆಟ್ ಪಡೆದು ಮಿಂಚಿದ ಮೊಹಮ್ಮದ್ ಸಿರಾಜ್ ಮೂರನೇ ದಿನದಾಟ ಮುಗಿದ ನಂತರ ಪಂದ್ಯದ ಕುರಿತು ಮತ್ತು ತಮ್ಮ ಬೌಲಿಂಗ್ ಕುರಿತು ಮಾತನಾಡಿದ್ದಾರೆ. ಹೀಗೆ ಪಂದ್ಯದ ಕುರಿತು ಮಾತನಾಡುವಾಗ ಮೊಹಮ್ಮದ್ ಸಿರಾಜ್ ತಾವು ವಿಕೆಟ್ ಪಡೆದ ನಂತರ ತುಟಿಗಳ ಮೇಲೆ ಬೆರಳಿಟ್ಟು ಮಾಡುವ ವಿಶಿಷ್ಟವಾದ ಸಂಭ್ರಮಾಚರಣೆಯ ಕುರಿತು ಸಹ ಮಾತನಾಡಿದ್ದು ಆ ರೀತಿಯ ವಿಭಿನ್ನವಾದ ಸಂಭ್ರಮಾಚರಣೆಯ ಹಿಂದಿನ ಕಾರಣವನ್ನು ಈ ಕೆಳಕಂಡಂತೆ ತಿಳಿಸಿದ್ದಾರೆ.

ನನ್ನ ಎದುರಾಳಿಗಳಿಗೆ ಕೊಡುವ ಉತ್ತರವಿದು

ನನ್ನ ಎದುರಾಳಿಗಳಿಗೆ ಕೊಡುವ ಉತ್ತರವಿದು

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್ ಪಡೆದು ಮಿಂಚಿದ ಮೊಹಮ್ಮದ್ ಸಿರಾಜ್ ವಿಕೆಟ್ ಪಡೆದ ನಂತರ ತುಟಿಗಳ ಮೇಲೆ ಬೆರಳಿಟ್ಟು 'ಶ್..' ಎನ್ನುತ್ತಾ ವಿಭಿನ್ನವಾಗಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ. ಮೊಹಮ್ಮದ್ ಸಿರಾಜ್ ಮಾಡಿದ ಈ ಸಂಭ್ರಮಾಚರಣೆಯ ಕುರಿತು ಸಾಕಷ್ಟು ಚರ್ಚೆಗಳಾಗುತ್ತಿದ್ದವು. ಇದೀಗ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ನಂತರ ಮಾತನಾಡಿರುವ ಮೊಹಮ್ಮದ್ ಸಿರಾಜ್ ತಮ್ಮ ವಿಭಿನ್ನವಾದ ಸಂಭ್ರಮಾಚರಣೆಗೆ ಕಾರಣ ತಮ್ಮನ್ನು ದ್ವೇಷಿಸುವ ವಿರೋಧಿಗಳು ಎಂದಿದ್ದಾರೆ. ಈ ಹಿಂದೆ ತಮ್ಮ ಕಾಲೆಳೆದ ದ್ವೇಷಿಗಳಿಗೆ ಈ ರೀತಿಯ ಸಂಭ್ರಮಾಚರಣೆಯ ಮೂಲಕ ಉತ್ತರ ನೀಡುತ್ತೇನೆಂದು ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.

ಈ ಹಿಂದೆ ಸಿರಾಜ್ ಕಾಲೆಳೆದಿದ್ದ ನೆಟ್ಟಿಗರು

ಈ ಹಿಂದೆ ಸಿರಾಜ್ ಕಾಲೆಳೆದಿದ್ದ ನೆಟ್ಟಿಗರು

ಮೊಹಮ್ಮದ್ ಸಿರಾಜ್ ಕ್ರಿಕೆಟ್‌ಗೆ ಕಾಲಿಟ್ಟ ಆರಂಭದ ದಿನಗಳಲ್ಲಿ ಐಪಿಎಲ್ ಟೂರ್ನಿಗಳಿಂದಲೂ ಸಾಕಷ್ಟು ಟ್ರೋಲ್ ಮತ್ತು ಟೀಕೆಗಳು ಹರಿದು ಬಂದಿದ್ದವು. ಆರಂಭದ ದಿನಗಳಲ್ಲಿ ತನ್ನನ್ನು ಕಾಲೆಳೆದ ಯಾರಿಗೂ ಸಹ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದ ಮೊಹಮ್ಮದ್ ಸಿರಾಜ್ ಈಗ ಉತ್ತಮ ಪ್ರದರ್ಶನ ತೋರುವ ಮೂಲಕ ಈ ಹಿಂದೆ ಕಾಲೆಳೆದವರಿಗೆಲ್ಲ ಈಗ ಪ್ರತ್ಯುತ್ತರ ನೀಡುತ್ತಿದ್ದಾರೆ.

ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್‌ ಪಡೆದು ಮಿಂಚಿದ ಮೊಹಮ್ಮದ್ ಸಿರಾಜ್

ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್‌ ಪಡೆದು ಮಿಂಚಿದ ಮೊಹಮ್ಮದ್ ಸಿರಾಜ್

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡದ ಪರ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಮೊಹಮ್ಮದ್ ಸಿರಾಜ್. ಡೊಮಿನಿಕ್ ಸಿಬ್ಲೇ, ಹಸೀಬ್ ಹಮೀದ್, ಜಾನಿ ಬೇರ್‌ಸ್ಟೋ ಮತ್ತು ರಾಬಿನ್ಸನ್ ವಿಕೆಟ್‍ಗಳನ್ನು ಪಡೆಯುವುದರ ಮೂಲಕ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್‍ಗಳನ್ನು ಪಡೆದು ಉತ್ತಮ ಪ್ರದರ್ಶನ ನೀಡಿದ್ದಾರೆ.

Story first published: Sunday, August 15, 2021, 13:49 [IST]
Other articles published on Aug 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X