IND vs ENG: ಭಾರತದ ಡ್ರೆಸ್ಸಿಂಗ್ ರೂಂಗೆ ವಿಶೇಷ ಭೇಟಿ ನೀಡಿದ ಎಂಎಸ್ ಧೋನಿ

ಟೀಂ ಇಂಡಿಯಾ ಸದ್ಯ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು ಕಳೆದ ವರ್ಷದಿಂದ ಮುಂದೂಡಲ್ಪಟ್ಟಿದ್ದ ಐದನೇ ಟೆಸ್ಟ್ ಪಂದ್ಯ, 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಇತ್ತಂಡಗಳ ನಡುವಿನ ಟೆಸ್ಟ್ ಪಂದ್ಯ ಹಾಗೂ ಟಿ ಟ್ವೆಂಟಿ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಕ್ತಾಯಗೊಂಡಿದ್ದು, ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯಗಳಿಸಿದರೆ, ಟಿ ಟ್ವೆಂಟಿ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಗೆದ್ದಿರುವ ಟೀಂ ಇಂಡಿಯಾ ಸರಣಿಯನ್ನು ವಶಪಡಿಸಿಕೊಂಡಿದೆ.
ಸೌತಾಂಪ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗದಲ್ಲಿ ಜುಲೈ 7ರಂದು ನಡೆದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಬರೋಬ್ಬರಿ 50 ರನ್‌ಗಳಿಂದ ಗೆಲುವನ್ನು ಕಂಡ ಟೀಮ್ ಇಂಡಿಯಾ ನಿನ್ನೆ ( ಜುಲೈ 9 ) ಎಡ್ಜ್ ಬ್ಯಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ 49 ರನ್‌ಗಳ ಜಯ ಸಾಧಿಸಿದ್ದು ಮೂರನೇ ಟಿ ಟ್ವೆಂಟಿ ಪಂದ್ಯವನ್ನೂ ಗೆದ್ದು ವೈಟ್ ವಾಶ್ ಬಳಿಯುವ ತವಕದಲ್ಲಿದೆ.
ಇನ್ನು ಇತ್ತಂಡಗಳ ನಡುವೆ ನಡೆದ ಎರಡನೇ ಟಿ ಟ್ವೆಂಟಿ ಪಂದ್ಯ ಮುಕ್ತಾಯವಾದ ನಂತರ ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಭಾರತ ತಂಡದ ಆಟಗಾರರ ಡ್ರೆಸ್ಸಿಂಗ್ ರೂಂಗೆ ಭೇಟಿ ನೀಡಿದ್ದಾರೆ. ಎಂಎಸ್ ಧೋನಿ ಈ ವಿಶೇಷ ಭೇಟಿ ನೀಡಿದ್ದನ್ನು ಕಂಡ ಟೀಮ್ ಇಂಡಿಯಾ ಆಟಗಾರರು ಸಂತಸದಿಂದ ಧೋನಿ ಜೊತೆ ಕಾಲ ಕಳೆದಿದ್ದಾರೆ. ಎಂಎಸ್ ಧೋನಿ ಟೀಮ್ ಇಂಡಿಯಾ ಆಟಗಾರರ ಜತೆ ಡ್ರೆಸಿಂಗ್ ರೂಂನಲ್ಲಿ ಚರ್ಚೆ ನಡೆಸುತ್ತಿರುವ ಚಿತ್ರವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
Always all ears when the great msdhoni talks! 👍 👍#TeamIndia | #ENGvIND pic.twitter.com/YKQS8taVcH
— BCCI (BCCI) July 9, 2022
ರಿಷಭ್ ಪಂತ್ ಮತ್ತು ಇಶಾನ್ ಕಿಶಾನ್ ಬಳಿ ಚರ್ಚಿಸಿದ ಧೋನಿ
ಎಂಎಸ್ ಧೋನಿ ಟೀಮ್ ಇಂಡಿಯಾದ ಯುವ ಆಟಗಾರರಾದ ಇಶಾನ್ ಕಿಶನ್ ಮತ್ತು ರಿಷಭ್ ಪಂತ್ ಜತೆ ಚರ್ಚೆ ನಡೆಸಿ ಕೆಲ ಸಲಹೆಗಳನ್ನು ನೀಡಿದ್ದಾರೆ. ಎಂ ಎಸ್ ಧೋನಿ ಸಲಹೆಗಳನ್ನು ನೀಡುವಾಗ ಎಲ್ಲರೂ ಗಮನವಿಟ್ಟು ಕೇಳುತ್ತಾರೆ ಎಂದು ಬರೆದುಕೊಂಡಿರುವ ಬಿಸಿಸಿಐ ಇಶಾನ್ ಕಿಶನ್ ಮತ್ತು ಎಂಎಸ್ ಧೋನಿ ಚಿತ್ರಗಳನ್ನು ಹಂಚಿಕೊಂಡಿದೆ ಹಾಗೂ ರಿಷಭ್ ಪಂತ್ ಎಡ್ಜ್ ಬಾಸ್ಟನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎಂಎಸ್ ಧೋನಿ ಜತೆಗಿರುವ ಚಿತ್ರವನ್ನು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಳೆದೊಂದು ವಾರದಿಂದ ಇಂಗ್ಲೆಂಡ್‌ನಲ್ಲೇ ಇರುವ ಧೋನಿ
ಒಂದೆಡೆ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಸೆಣಸಾಟ ನಡೆಸಲು ಪ್ರವಾಸವನ್ನು ಕೈಗೊಂಡಿದ್ದರೆ, ಎಂ ಎಸ್ ಧೋನಿ ತಮ್ಮ ಪತ್ನಿ ಸಾಕ್ಷಿ ಧೋನಿ ಮತ್ತು ಮಗಳು ಝಿವಾ ಧೋನಿ ಜೊತೆ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದಾರೆ. ಇತ್ತೀಚೆಗಷ್ಟೆ ಎಂಎಸ್ ಧೋನಿ ಅವರ ಹುಟ್ಟುಹಬ್ಬವನ್ನು ಕೂಡ ಲಂಡನ್‌ನ ಹೋಟೆಲ್ ಒಂದರಲ್ಲಿ ಆಚರಿಸಲಾಗಿತ್ತು.

ಆರಂಭಿಕನಾಗಿ ಕಣಕ್ಕಿಳಿದ ರಿಷಭ್ ಪಂತ್
ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಅತಿ ವಿಶೇಷವೆನಿಸಿದ ಅಂಶವೆಂದರೆ ಮಧ್ಯಮ ಕ್ರಮಾಂಕದ ಆಟಗಾರ ರಿಷಭ್ ಪಂತ್ ಆರಂಭಿಕನಾಗಿ ಕಣಕ್ಕಿಳಿದದ್ದು. ಹೌದು, ರಿಷಭ್ ಪಂತ್ ಮತ್ತು ರೋಹಿತ್ ಶರ್ಮ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದು ಅಚ್ಚರಿ ಮೂಡಿಸಿದರು. ಇಬ್ಬರ ಜೋಡಿ 49 ರನ್‌ಗಳ ಜತೆಯಾಟವಾಡಿ ತಂಡಕ್ಕೆ ಉತ್ತಮ ಆರಂಭವನ್ನೇ ಕಟ್ಟಿಕೊಟ್ಟಿತು. ರೋಹಿತ್ ಶರ್ಮಾ 20 ಎಸೆತಗಳಲ್ಲಿ 31 ರನ್ ಗಳಿಸಿದರೆ, ರಿಷಭ್ ಪಂತ್ 15 ಎಸೆತಗಳಲ್ಲಿ 26 ರನ್ ಕಲೆ ಹಾಕಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications