ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

'ಆ ಪಂದ್ಯವನ್ನು ನೆನಪಿಸಿಕೊಳ್ಳಿ'; ಉತ್ಸಾಹದಲ್ಲಿರುವ ಆಂಗ್ಲರಿಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗನ ಎಚ್ಚರಿಕೆ!

IND vs ENG: Nasser Hussain warns England to not write off India ahead of Oval Test

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಮುಗಿದಿದ್ದು, ಸರಣಿಯಲ್ಲಿ ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆಲ್ಲುವುದರ ಮೂಲಕ ಸಮಬಲವನ್ನು ಸಾಧಿಸಿವೆ. ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು ಮತ್ತು ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 151 ರನ್‌ಗಳ ಸೋಲನ್ನು ಅನುಭವಿಸಿತ್ತು. ಹೀಗೆ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಯಾವುದೇ ಗೆಲುವನ್ನು ಸಾಧಿಸದ ಇಂಗ್ಲೆಂಡ್ ಸರಣಿಯಲ್ಲಿ ಹಿನ್ನಡೆಯನ್ನು ಸಾಧಿಸಿತ್ತು.

ಕೊಹ್ಲಿ ತನ್ನ ಆ ಗುಣವನ್ನು ಬಿಟ್ಟರೆ ಹೆಚ್ಚು ರನ್ ಗಳಿಸಬಹುದು; ಕೊಹ್ಲಿಯ ಸಮಸ್ಯೆಯನ್ನು ಬಿಚ್ಚಿಟ್ಟ ಇರ್ಫಾನ್ ಪಠಾಣ್ಕೊಹ್ಲಿ ತನ್ನ ಆ ಗುಣವನ್ನು ಬಿಟ್ಟರೆ ಹೆಚ್ಚು ರನ್ ಗಳಿಸಬಹುದು; ಕೊಹ್ಲಿಯ ಸಮಸ್ಯೆಯನ್ನು ಬಿಚ್ಚಿಟ್ಟ ಇರ್ಫಾನ್ ಪಠಾಣ್

ಆದರೆ, ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಅಬ್ಬರದ ಪ್ರದರ್ಶನವನ್ನು ನೀಡಿದ ಇಂಗ್ಲೆಂಡ್ ತಂಡದ ಆಟಗಾರರು ಟೀಮ್ ಇಂಡಿಯಾ ವಿರುದ್ಧ ಅದ್ಭುತ ಆಟವನ್ನು ಪ್ರದರ್ಶಿಸುವುದರ ಮೂಲಕ 76 ರನ್‌ಗಳ ಇನಿಂಗ್ಸ್ ಸಹಿತ ಗೆಲುವನ್ನು ದಾಖಲಿಸಿದರು. ಹೌದು, ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಇಂಗ್ಲೆಂಡ್ ತಂಡ ಭಾರತೀಯರ ಮೇಲೆ ಹಿಡಿತವನ್ನು ಸಾಧಿಸುವುದರ ಮೂಲಕ ಸರಣಿ ಸಹಿತವಾಗಿ ಪಂದ್ಯವನ್ನು ತಮ್ಮದಾಗಿಸಿಕೊಂಡು ಸರಣಿಯಲ್ಲಿ ಸಮಬಲವನ್ನು ಸಾಧಿಸಿತು.

 ಸತತ ಕಳಪೆ ಪ್ರದರ್ಶನ ನೀಡಿದರೂ ತಂಡದಲ್ಲಿ ಸ್ಥಾನ; ಆ ಒಬ್ಬ ಆಟಗಾರನನ್ನು ನಂಬಿ ಬೆನ್ನಿಗೆ ನಿಂತ ಕೊಹ್ಲಿ ಸತತ ಕಳಪೆ ಪ್ರದರ್ಶನ ನೀಡಿದರೂ ತಂಡದಲ್ಲಿ ಸ್ಥಾನ; ಆ ಒಬ್ಬ ಆಟಗಾರನನ್ನು ನಂಬಿ ಬೆನ್ನಿಗೆ ನಿಂತ ಕೊಹ್ಲಿ

ಹೀಗೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿರುವ ಇಂಗ್ಲೆಂಡ್ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿಯೂ ಗೆಲುವು ಸಾಧಿಸುವುದರ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸುವ ತವಕದಲ್ಲಿದೆ. ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 78 ರನ್‌ಗೆ ಟೀಮ್ ಇಂಡಿಯಾವನ್ನು ಆಲ್ ಔಟ್ ಮಾಡಿದ್ದ ಇಂಗ್ಲೆಂಡ್ ಸದ್ಯ ಹೆಚ್ಚಿನ ಉತ್ಸಾಹದಲ್ಲಿದೆ. ಆದರೆ, ಇಂಗ್ಲೆಂಡ್ ತಂಡಕ್ಕೆ ನಾಲ್ಕನೇ ಟೆಸ್ಟ್ ಆರಂಭವಾಗುವ ಮುನ್ನವೇ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ನಾಸಿರ್ ಹುಸೇನ್ ಎಚ್ಚರಿಕೆಯೊಂದನ್ನು ನೀಡಿದ್ದು ಈ ಕೆಳಕಂಡ ಸಂದೇಶವನ್ನು ರವಾನಿಸಿದ್ದಾರೆ.

ಭಾರತೀಯರನ್ನು ಕಡೆಗಣಿಸಬೇಡಿ ಎಂದು ಎಚ್ಚರಿಸಿದ ನಾಸಿರ್ ಹುಸೇನ್

ಭಾರತೀಯರನ್ನು ಕಡೆಗಣಿಸಬೇಡಿ ಎಂದು ಎಚ್ಚರಿಸಿದ ನಾಸಿರ್ ಹುಸೇನ್

ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಸರಣಿ ಸಹಿತ 76 ರನ್‌ಗಳ ಸೋಲನ್ನು ಕಂಡಿರುವ ಟೀಮ್ ಇಂಡಿಯಾವನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬೇಡಿ ಎಂದು ನಾಸಿರ್ ಹುಸೈನ್ ಎಚ್ಚರಿಕೆಯನ್ನು ನೀಡಿದ್ದಾರೆ. ಇದೇ ರೀತಿ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದ್ದ ಟೀಮ್ ಇಂಡಿಯಾ ಕೇವಲ 36 ರನ್‌ಗಳಿಗೆ ಆಲ್ ಔಟ್ ಆಗಿ ತದನಂತರ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದ್ದನ್ನು ನೆನಪಿಸಿಕೊಳ್ಳಿ ಎಂದು ನಾಸಿರ್ ಹುಸೇನ್ ಇಂಗ್ಲೆಂಡ್ ಆಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಭಾರತದಲ್ಲಿ ಸಾಕಷ್ಟು ಬಲಶಾಲಿ ಆಟಗಾರರಿದ್ದಾರೆ

ಭಾರತದಲ್ಲಿ ಸಾಕಷ್ಟು ಬಲಶಾಲಿ ಆಟಗಾರರಿದ್ದಾರೆ

ಇನ್ನೂ ಮುಂದುವರಿದು ಮಾತನಾಡಿರುವ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ನಾಸಿರ್ ಹುಸೇನ್ ಭಾರತ ತಂಡದಲ್ಲಿ ಸಾಕಷ್ಟು ಬಲಿಷ್ಠ ಆಟಗಾರರು ಇದ್ದಾರೆ, ಆ ಆಟಗಾರರಿಗೆ ತಿರುಗಿ ಬೀಳುವ ಗುಣವಿದೆ ಹಾಗೂ ಕುಸಿದಾಗ ಮತ್ತೆ ಉತ್ತಮ ಪ್ರದರ್ಶನ ನೀಡುವ ಹವ್ಯಾಸವಿದೆ ಮತ್ತು ಇದಕ್ಕೆಲ್ಲಾ ಕೇಂದ್ರ ಬಿಂದುವಾಗಿ ನಾಯಕ ವಿರಾಟ್ ಕೊಹ್ಲಿ ಇದ್ದಾರೆ ಎಂದು ಹೇಳಿಕೆ ನೀಡುವುದರ ಮೂಲಕ ನಾಸಿರ್ ಹುಸೇನ್ ಇಂಗ್ಲೆಂಡ್ ತಂಡದ ಆಟಗಾರರಿಗೆ ಮುಂಬರುವ ಸವಾಲಿನ ಕುರಿತು ಎಚ್ಚರಿಕೆ ನೀಡಿದ್ದಾರೆ.

Dale Steyn ಅವರಿಗೆ IPL ಅನುಭವ ಮರೆಯಲಾಗದ ಅನುಭವವಂತೆ | Oneindia Kannada
ನಾಲ್ಕನೇ ಟೆಸ್ಟ್ ಪಂದ್ಯ ಯಾವಾಗ ಮತ್ತು ಎಲ್ಲಿ?

ನಾಲ್ಕನೇ ಟೆಸ್ಟ್ ಪಂದ್ಯ ಯಾವಾಗ ಮತ್ತು ಎಲ್ಲಿ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 2 ರಿಂದ ಸೆಪ್ಟೆಂಬರ್‌ 6 ರವರೆಗೆ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ ಇದುವರೆಗೂ ತಲಾ ಒಂದೊಂದು ಪಂದ್ಯಗಳಲ್ಲಿ ಜಯವನ್ನು ಸಾಧಿಸಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು 1-1 ಸಮಬಲವನ್ನು ಸಾಧಿಸಿದ್ದು ನಾಲ್ಕನೇ ಟೆಸ್ಟ್ ಪಂದ್ಯದ ಮೇಲಿನ ಕುತೂಹಲ ಮತ್ತು ನಿರೀಕ್ಷೆಗಳು ದೊಡ್ಡ ಮಟ್ಟಕ್ಕೆ ತಲುಪಿವೆ.

Story first published: Tuesday, August 31, 2021, 17:30 [IST]
Other articles published on Aug 31, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X