'ಕೊಹ್ಲಿ ತೆಗೆದುಕೊಂಡ ಈ ತಪ್ಪು ನಿರ್ಧಾರದಿಂದ 4ನೇ ಟೆಸ್ಟ್ ಭಾರತದ ಕೈತಪ್ಪುತ್ತೆ'; ಕಿಡಿಕಾರಿದ ಮಾಜಿ ಕ್ರಿಕೆಟಿಗ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು, ಸದ್ಯ ನಾಲ್ಕನೇ ಟೆಸ್ಟ್ ಪಂದ್ಯ ಲಂಡನ್ ನಗರದ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳಲ್ಲಿ ಎರಡೂ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಜಯ ಗಳಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ಹೀಗಾಗಿ ಪ್ರಸ್ತುತ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದರ ಕುರಿತು ನಿರೀಕ್ಷೆ ಮತ್ತು ಕುತೂಹಲಗಳು ಹೆಚ್ಚಿವೆ.
ಇನ್ನು ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಮುಗಿಯುವ ಹಂತಕ್ಕೆ ತಲುಪಿದ್ದು ಇಂದು ( ಸೆಪ್ಟೆಂಬರ್ 6 ) ಕೊನೆಯ ದಿನದಾಟ ನಡೆಯಲಿದೆ. ಮೊದಲನೇ ಇನ್ನಿಂಗ್ಸ್‌ನಲ್ಲಿ 191 ರನ್‌ಗಳಿಗೆ ಆಲ್ ಔಟ್ ಆಗಿ ಮಂಕಾಗಿದ್ದ ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 466 ರನ್ ಗಳಿಸಿ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 368 ರನ್‌ಗಳ ಗುರಿಯನ್ನು ನೀಡಿದ್ದು, ನಾಲ್ಕನೇ ದಿನದಂದು ತನ್ನ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 77 ರನ್ ಗಳಿಸಿದೆ. ಇನ್ನು ಸೆಪ್ಟೆಂಬರ್ 6ರ ಸೋಮವಾರದಂದು ನಡೆಯಲಿರುವ ಕೊನೆಯ ದಿನದಂದು ಇಂಗ್ಲೆಂಡ್ ತಂಡ ಪಂದ್ಯದಲ್ಲಿ ಜಯ ಸಾಧಿಸಬೇಕೆಂದರೆ 291 ರನ್‌ಗಳನ್ನು ಬಾರಿಸುವ ಅಗತ್ಯವಿದೆ.
ನಾಲ್ಕನೇ ದಿನದಾಟದ ಅಂತ್ಯದ ವೇಳೆಗೆ ಎರಡೂ ತಂಡಗಳು ಸಹ ಪಂದ್ಯ ಗೆಲ್ಲುವ ಅವಕಾಶಗಳನ್ನು ಹೊಂದಿದ್ದು ಸದ್ಯ ಓವಲ್ ಕ್ರೀಡಾಂಗಣದ ಪಿಚ್ ಲಕ್ಷಣಗಳನ್ನು ಗಮನಿಸಿದರೆ ರನ್ ಗುರಿಯನ್ನು ಬೆನ್ನತ್ತುತ್ತಿರುವ ಇಂಗ್ಲೆಂಡ್ ತಂಡ ಗೆಲ್ಲುವ ಸಾಧ್ಯತೆಗಳೇ ಹೆಚ್ಚಿವೆ ಎಂದು ಕ್ರೀಡಾ ಪಂಡಿತರು ಹಾಗೂ ಕ್ರೀಡಾಭಿಮಾನಿಗಳು ಚರ್ಚೆಗಳನ್ನು ನಡೆಸುತ್ತಿದ್ದಾರೆ. ಕೊನೆಯ ದಿನದಂದು ಟೀಮ್ ಇಂಡಿಯಾ ಪಂದ್ಯವನ್ನು ತನ್ನ ಕೈವಶ ಮಾಡಿಕೊಳ್ಳಬೇಕಾದರೆ ಇಂಗ್ಲೆಂಡ್ ತಂಡದ ಆಟಗಾರರ ವಿಕೆಟ್‍ಗಳನ್ನು ವೇಗವಾಗಿ ಪಡೆದುಕೊಳ್ಳಬೇಕಿದೆ. ಹೀಗಾಗಿ ನಾಲ್ಕನೇ ದಿನದಾಟದ ಪಂದ್ಯ ಕುತೂಹಲವನ್ನು ಕೆರಳಿಸಿದ್ದು ಸಾಕಷ್ಟು ಮಾಜಿ ಕ್ರಿಕೆಟಿಗರು ಈ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗನಾದ ನಿಕ್ ಕಾಂಪ್ಟನ್ ಕೂಡ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಕೊನೆಯ ದಿನದಾಟದ ಕುರಿತು ಮಾತನಾಡಿದ್ದು ವಿರಾಟ್ ಕೊಹ್ಲಿ ತೆಗೆದುಕೊಂಡ ಆ ಒಂದು ನಿರ್ಧಾರದ ವಿರುದ್ಧ ಈ ಕೆಳಕಂಡಂತೆ ಕಿಡಿಕಾರಿದ್ದಾರೆ.

ಕೊಹ್ಲಿ ನಿರ್ಧಾರದ ವಿರುದ್ಧ ವ್ಯಂಗ್ಯವಾಡಿದ ನಿಕ್ ಕಾಂಪ್ಟನ್
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಕೊನೆಯ ದಿನದಾಟದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ನಿಕ್ ಕಾಂಪ್ಟನ್ ತಂಡದಲ್ಲಿ ರವಿಚಂದ್ರನ್ ಅಶ್ವಿನ್ ಅವರಿಗೆ ಸ್ಥಾನ ನೀಡದೆ ಇರುವುದರ ಕುರಿತು ಮತ್ತೊಮ್ಮೆ ವಿರಾಟ್ ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ. 'ಈ ಪಂದ್ಯ ಡ್ರಾನಲ್ಲಿ ಅಂತ್ಯವಾಗುವುದು ಬಿಟ್ಟರೆ ಬೇರೆ ಯಾವುದೇ ಸಾಧ್ಯತೆಗಳು ಕಾಣಿಸುತ್ತಿಲ್ಲ, ಕೊನೆಯ ದಿನದಾಟದಂದು ಜಸ್ಪ್ರೀತ್ ಬುಮ್ರಾ ಹೊರತುಪಡಿಸಿ ಭಾರತದ ಉಳಿದ ಎಲ್ಲಾ ಬೌಲರ್‌ಗಳೂ ಸಹ ವಿಕೆಟ್ ಪಡೆಯಲು ಹರಸಾಹಸ ಪಡಲಿದ್ದಾರೆ. ಒಂದುವೇಳೆ ಈ ಸಮಯದಲ್ಲಿ ರವಿಚಂದ್ರನ್ ಅಶ್ವಿನ್ ಇದ್ದಿದ್ದರೆ ಪಂದ್ಯ ಭಾರತದ ಪಾಲಾಗುತ್ತಿತ್ತು, ಆದರೆ ಭಾರತ ತಂಡದಲ್ಲಿ ವೈಯಕ್ತಿಕವಾಗಿ ನಿರ್ಧಾರ ತೆಗೆದುಕೊಳ್ಳುವ ಆಟಗಾರರಿದ್ದಾಗ ಈ ರೀತಿ ನಡೆಯುವುದು ಸಾಮಾನ್ಯ' ಎಂದು ನಿಕ್ ಕಾಂಪ್ಟನ್ ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ. ವಿರಾಟ್ ಕೊಹ್ಲಿ ತನ್ನ ವೈಯಕ್ತಿಕ ಹಾಗೂ ಸ್ವತಂತ್ರ ನಿರ್ಧಾರದಿಂದ ರವಿಚಂದ್ರನ್ ಅಶ್ವಿನ್ ಅವರನ್ನು ತಂಡದಿಂದ ಹೊರಗಿಟ್ಟಿದ್ದಾರೆ, ಹೀಗಾಗಿಯೇ ನಾಲ್ಕನೇ ಟೆಸ್ಟ್ ಪಂದ್ಯ ಭಾರತದ ಕೈತಪ್ಪಿ ಡ್ರಾ ನಲ್ಲಿ ಅಂತ್ಯಗೊಳ್ಳಲಿದೆ ಎಂದು ನಿಕ್ ಕಾಂಪ್ಟನ್ ವ್ಯಂಗ್ಯವಾಡಿದ್ದಾರೆ.

ಕೊಹ್ಲಿ ಮತ್ತು ಅಶ್ವಿನ್ ನಡುವೆ ವೈಯಕ್ತಿಕ ಮನಸ್ತಾಪವಿದೆ ಎಂದಿದ್ದ ನಿಕ್ ಕಾಂಪ್ಟನ್!
ವಿರಾಟ್ ಕೊಹ್ಲಿ ವಿರುದ್ಧ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ನಿಕ್ ಕಾಂಪ್ಟನ್ ಕಿಡಿಕಾರಿರುವುದು ಇದೇ ಮೊದಲೇನಲ್ಲ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಆಡುತ್ತಿಲ್ಲ ಎಂಬ ವಿಷಯ ತಿಳಿದ ಸಮಯದಲ್ಲಿಯೂ ಸಹ ನಿಕ್ ಕಾಂಪ್ಟನ್ ವಿರಾಟ್ ಕೊಹ್ಲಿ ವಿರುದ್ಧ ಕಿಡಿಕಾರಿದ್ದರು. ರವಿಚಂದ್ರನ್ ಅಶ್ವಿನ್ ಜತೆಗೆ ನಾಯಕ ವಿರಾಟ್ ಕೊಹ್ಲಿಗಿರುವ ವೈಯಕ್ತಿಕ ಮನಸ್ತಾಪದ ಕಾರಣದಿಂದಲೇ ಅಶ್ವಿನ್ ಅವರಿಗೆ ತಂಡದಲ್ಲಿ ಸ್ಥಾನ ನೀಡದೇ ತಂಡದಿಂದ ಹೊರಗಿಡಲಾಗಿದೆ ಎಂದು ವಿರಾಟ್ ಕೊಹ್ಲಿ ವಿರುದ್ಧ ನಿಕ್ ಕಾಂಪ್ಟನ್ ಆರೋಪವನ್ನು ಮಾಡಿದ್ದರು.

ಕೊಹ್ಲಿ ಓರ್ವ ಹೊಲಸು ಬಾಯಿಯ ಕ್ರಿಕೆಟಿಗ ಎಂದಿದ್ದ ನಿಕ್ ಕಾಂಪ್ಟನ್!
ಇನ್ನು ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 151 ರನ್‌ಗಳ ಭರ್ಜರಿ ಜಯವನ್ನು ದಾಖಲಿಸಿತ್ತು. ಈ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ಆಟಗಾರರ ನಡುವೆ ಪಂದ್ಯದುದ್ದಕ್ಕೂ ಮಾತಿನ ಚಕಮಕಿಗಳು ನಡೆದಿದ್ದವು. ವಿರಾಟ್ ಕೊಹ್ಲಿ ಇಂಗ್ಲೆಂಡ್ ತಂಡದ ಕೆಲವು ಆಟಗಾರರ ವಿರುದ್ಧ ಮೈದಾನದಲ್ಲಿಯೇ ರೋಷಾವೇಶವನ್ನು ತೋರಿಸಿದ್ದರು. ಮೈದಾನದಲ್ಲಿ ವಿರಾಟ್ ಕೊಹ್ಲಿಯ ರೋಷಾವೇಶದ ಕುರಿತು ಲಾರ್ಡ್ಸ್ ಪಂದ್ಯ ಮುಗಿದ ಬಳಿಕ ಮಾತನಾಡಿದ್ದ ನಿಕ್ ಕಾಂಪ್ಟನ್ ವಿರಾಟ್ ಕೊಹ್ಲಿ ಓರ್ವ ಹೊಲಸು ಬಾಯಿ ಕ್ರಿಕೆಟಿಗ ಆತ ಕೇನ್ ವಿಲಿಯಮ್ಸನ್ ಮತ್ತು ಸಚಿನ್ ತೆಂಡೂಲ್ಕರ್ ರೀತಿಯ ಉತ್ತಮ ಆಟಗಾರನಲ್ಲ ಎಂದು ಕಿಡಿಕಾರಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications