For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಅಭಿಮಾನಿಗಳಿಗೆ ಸ್ಟೇಡಿಯಂಗೆ ಪ್ರವೇಶವಿಲ್ಲ

Ind vs Eng: No spectators allowed inside MAC Stadium in Chennai for first two Tests

ಚೆನ್ನೈ: ಸುದೀರ್ಘ ಸರಣಿಗಳಿಗಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡ ಭಾರತಕ್ಕೆ ಪ್ರವಾಸ ಬರಲಿದೆ. ಪ್ರವಾಸವು 4 ಪಂದ್ಯಗಳ ಟೆಸ್ಟ್ ಸರಣಿ, 5 ಪಂದ್ಯಗಳ ಟಿ20ಐ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಯನ್ನು ಒಳಗೊಂಡಿರಲಿದೆ. ಫೆಬ್ರವರಿ 5ರಂದು ಟೆಸ್ಟ್ ಸರಣಿಯೊಂದಿಗೆ ಪ್ರವಾಸ ಪಂದ್ಯಗಳು ಆರಂಭಗೊಳ್ಳಲಿವೆ.

ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಆರಂಭಿಕ ಎರಡು ಪಂದ್ಯಗಳು ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿವೆ. ಭಾರತ-ಇಂಗ್ಲೆಂಡ್ ಸರಣಿಯ ವೇಳೆ ಸ್ಟೇಡಿಯಂ ಒಳಗೆ ಒಂದಿಷ್ಟು ಅಭಿಮಾನಿಗಳಿಗೆ ಪ್ರವೇಶ ನೀಡಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಆರಂಭಿಕ ಎರಡು ಟೆಸ್ಟ್ ಪಂದ್ಯಗಳಿಗೆ ಅಭಿಮಾನಿಗಳ ಪ್ರವೇಶ ನೀಡಲಾಗುತ್ತಿಲ್ಲ ಎಂದು ತಿಳಿದು ಬಂದಿದೆ.

ಫೆಬ್ರವರಿ 5ರಿಂದ 9ರ ವರೆಗೆ ಮೊದಲ ಟೆಸ್ಟ್‌, ಫೆಬ್ರವರಿ 13ರಿಂದ ಫೆಬ್ರವರಿ 17ರ ವರೆಗೆ ದ್ವಿತೀಯ ಟೆಸ್ಟ್ ಪಂದ್ಯ ಚೆನ್ನೈಯಲ್ಲಿರುವ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿವೆ. ಈ ಸ್ಟೇಡಿಯಂನಲ್ಲಿ ಅಭಿಮಾನಿಗಳ ಪ್ರವೇಶಕ್ಕೆ ಅವಕಾಶ ನೀಡಲಾಗಿಲ್ಲ.

ಚೆನ್ನೈನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳಿಗೆ ಸ್ಟೇಡಿಯಂ ಒಳಗೆ ವೀಕ್ಷಕರಿಗೆ ಅವಕಾಶವಿಲ್ಲ ಎಂದು ತಮಿಳುನಾಡು ಕ್ರಿಕೆಟ್ ಅಸೋಸಿಯೇಶನ್ ಸುತ್ತೋಲೆ ನೀಡಿದೆ. ಕೊರೊನಾ ವೈರಸ್ ಪ್ರಕರಣಗಳು ಭಾರತದಲ್ಲಿ ಗಣನೀಯ ಮಟ್ಟದಲ್ಲಿ ಕಡಿಮೆಯೇನೂ ಆಗಿಲ್ಲವಾದ್ದರಿಂದ ಇನ್ನೂ ವೀಕ್ಷಕರ ಪ್ರವೇಶಕ್ಕೆ ರಾಜ್ಯಗಳ ಆಡಳಿತ ಸರ್ಕಾರ ಅವಕಾಶ ನೀಡುತ್ತಿಲ್ಲ.

Story first published: Friday, January 22, 2021, 18:24 [IST]
Other articles published on Jan 22, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+