Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Breaking News: ಇಂಗ್ಲೆಂಡ್ vs ಭಾರತ ODI, ಟಾಸ್ ಗೆದ್ದ ಭಾರತ, Live ಸ್ಕೋರ್, ಆಡುವ ಬಳಗ

IND vs ENG: ODI series 1st match, Live score and playing XI, Oval

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆತಿಥೆಯ ಇಂಗ್ಲೆಂಡ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯ ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿದ್ದು ಎರಡು ತಂಡಗಳು ಕೂಡ ಬಲಿಷ್ಠ ಬಳಗದೊಂದಿಗೆ ಕಣಕ್ಕಿಳಿದಿದೆ. ಇಂಗ್ಲೆಂಡ್ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸುತ್ತಿದ್ದು ಬ್ಯಾಟಿಂಗ್ ವಿಭಾಗ ಸಾಕಷ್ಟು ಪ್ರಬಲವಾಗಿ ಕಾಣಿಸುತ್ತಿದೆ. ಆದರೆ ಇಂಗ್ಲೆಂಡ್ ತಂಡದ ಬೌಲಿಂಗ್ ವಿಭಾಗದ ಪ್ರದರ್ಶನ ಕುತೂಹಲ ಮೂಡಿಸಿದೆ. ಇತ್ತ ಅನುಭವಿ ಆಟಗಾರ ಶಿಖರ್ ಧವನ್ ಭಾರತ ತಂಡಕ್ಕೆ ಮರಳಿದ್ದಾರೆ.

ವಿರಾಟ್ ಕೊಹ್ಲಿ ಅಲಭ್ಯ

ವಿರಾಟ್ ಕೊಹ್ಲಿ ಅಲಭ್ಯ

ಇನ್ನು ಅನುಭವಿ, ಮಾಜಿ ನಾಯಕ ವಿರಾಟ್ ಕೊಹ್ಲಿ ಈ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ. ಗಾಯದ ಕಾರಣದಿಮದಾಗಿ ಕೊಹ್ಲಿ ಕಣಕ್ಕಿಲಿಯುವುದು ಅನುಮಾನ ಎನ್ನಲಾಗಿತ್ತು. ಇದೀಗ ರೋಹಿತ್ ಶರ್ಮಾ ಅದನ್ನು ಖಚಿತಪಡಿಸಿದ್ದಾರೆ. ಹೀಗಾಗಿ ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಐಯ್ಯರ್ ಬ್ಯಾಟಿಂಗ್ ನಡೆಸಲಿದ್ದಾರೆ.

ರೋಹಿತ್‌ಗೆ ಸಾಥ್ ನೀಡಲಿದ್ದಾರೆ ಧವನ್

ರೋಹಿತ್‌ಗೆ ಸಾಥ್ ನೀಡಲಿದ್ದಾರೆ ಧವನ್

ಸುದೀರ್ಘ ಕಾಲದ ಬಳಿಕ ಭಾರತ ತಂಡದಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಕಣಕ್ಕಿಳಿಯಲಿದ್ದಾರೆ. ಶಿಖರ್ ಧವನ್ ಟಿ20 ತಂಡದಿಂದ ಹೊರಬಿದ್ದಿದ್ದು ಏಕದಿನ ಮಾದರಿಯಲ್ಲಿ ಆರಂಭಿಕನಾಗಿ ಮುಂದುವರಿದಿದ್ದಾರೆ. ಈ ಸರಣಿಯಲ್ಲಿ ಧವನ್ ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಇಂಗ್ಲೆಂಡ್ ಆಡುವ ಬಳಗ

ಇಂಗ್ಲೆಂಡ್ ಆಡುವ ಬಳಗ

ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ, ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಬೆಂಚ್: ಮ್ಯಾಥ್ಯೂ ಪಾರ್ಕಿನ್ಸನ್, ಸ್ಯಾಮ್ ಕುರಾನ್, ಫಿಲಿಪ್ ಸಾಲ್ಟ್, ಹ್ಯಾರಿ ಬ್ರೂಕ್

ಭಾರತ ಆಡುವ ಬಳಗ

ಭಾರತ ಆಡುವ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಐಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಬೆಂಚ್: ಅಕ್ಷರ್ ಪಟೇಲ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ವಿರಾಟ್ ಕೊಹ್ಲಿ, ಶಾರ್ದೂಲ್ ಠಾಕೂರ್

Story first published: Tuesday, July 12, 2022, 17:38 [IST]
Other articles published on Jul 12, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+