
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯ ಲಾರ್ಡ್ಸ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಎರಡನೇ ಪಂದ್ಯದಲ್ಲಿಯೂ ಭಾರತ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮತ್ತೊಮ್ಮೆ ಇಂಗ್ಲೆಂಡ್ ಮೊದಲಿಗೆ ಬ್ಯಾಟಿಂಗ್ ನಡೆಸಿ ಭಾರತಕ್ಕೆ ಗುರಿ ನಿಗದಿಪಡಿಸುವ ಸವಾಲು ಸ್ವೀಕರಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲವಾಗಿದ್ದು ಭಾರೀ ಅಂತರದಿಂದ ಸೋಲು ಕಂಡಿದೆ. ಲಾರ್ಡ್ಸ್ ಮೈದಾನದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ತಂಡ ಭಾರತವನ್ನು 146 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ 100 ರನ್‌ಗಳ ಬೃಹತ್ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿದೆ. ಈ ಮೂಲಕ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಇಂಗ್ಲೆಂಡ್ ನೀಡಿದ್ದ 247 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಆರಂಬದಿಂದಲೇ ಕಂಟುತ್ತಾ ಸಾಗಿತ್ತು. ನಂತರ ಒಂದರ ಬಳಿಕ ಒಂದರಂತೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಭಾರತ ತಂಡಕ್ಕೆ ಉತ್ತಮ ಜೊತೆಯಾಟ ದೊರೆಯಲಿಲ್ಲ. ಅಂತಿಮವಾಗಿ ಭಾರತ 146 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತು.
ಕಳೆದ ಪಂದ್ಯದಲ್ಲಿ ಗಾಯದ ಕಾರಣದಿಂದಾಗಿ ಆಡುವ ಬಳಗದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಶ್ರೇಯಸ್ ಐಯ್ಯರ್ ಆಡುವ ಬಳಗದಿಮದ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಉಳಿದಂತೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಇನ್ನು ಇಂಗ್ಲೆಂಡ್ ತಂಡ ಕೂಡ ಕಳೆದ ಬಾರಿ ಆಡಿದ್ದ ಬಳಗದೊಂದಿಗೆ ಕಣಕ್ಕಿಳಿಯುತ್ತಿದೆ.
Live ಸ್ಕೋರ್ ಹೀಗಿದೆ
ಗಾಯದ ಕಾರಣದಿಂದಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ತೊಡೆ ನೋವಿಗೆ ಒಳಗಾಗಿದ್ದ ಕೊಹ್ಲಿ ಎರಡನೇ ಪಂದ್ಯಕ್ಕೂ ಅಲಭ್ಯವಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಭಾರತ ತಂಡದ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅಭಿಮಾನಿಗಳಿಗೆ ಕಾಡುತ್ತಿದ್ದ ಪ್ರಶ್ನೆಗಳಿಗೆ ಉತ್ತರ ದೊರೆದಂತಾಗಿದೆ.
ಮೊದಲ ಪಂದ್ಯದಲ್ಲಿ ಅಮೋಘ ಗೆಲುವು
ಇನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಅಮೋಘ ಗೆಲುವು ಸಾಧಿಸಿತ್ತು. ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿ ಮಾರಕ ದಾಳಿಗೆ ನಲುಗಿದ್ದ ಇಂಗ್ಲೆಂಡ್ ಕೇವಲ 110 ರನ್ ಮಾತ್ರವೇ ಗಳಿಸಿತ್ತು. ಇದನ್ನು ಬೆನ್ನಟ್ಟಿದ ಭಾರತ ಯಾವಿದೇ ವಿಕೆಟ್ ಕಳೆದುಕೊಳ್ಳದೆ 10 ವಿಕೆಟ್‌ಗಳ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿಯನ್ನು ತನ್ನ ವಶಕ್ಕೆ ಪಡೆಯಲಿದೆ. ಇಂಗ್ಲೆಂಡ್ ತಂಡ ಸರಣಿಯಲ್ಲಿ ಜೀವಂತವಾಗುಳಿಯಬೇಕಾದರೆ ಈ ಪಂದ್ಯದಲ್ಲಿ ಗೆಲುವು ಅನುವಾರ್ಯವಾಗಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿಯೂ ಭಾರತ ತಂಡದ ಬೌಲಿಂಗ್ ವಿಭಾಗ ಮಿಂಚಿದೆ. ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತದ ಪರವಾಗಿ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅದ್ಭುತ ಪ್ರದರ್ಶನ ನೀಡಿದ್ದು ಇಂಗ್ಲೆಂಡ್‌ನ ಪ್ರಮುಖ ದಾಂಡಿಗರಿಗೆ ಆಘಾತ ನೀಡಿದರು. ಕೆಳ ಕ್ರಮಾಂಕದಲ್ಲಿ ಮೊಯೀನ್ ಅಲಿ ಹಾಗೂ ಡೇವಿಡ್ ವಿಲ್ಲಿ ಅವರಿಂದ ಬಂದ ಅದ್ಭುತ ಪ್ರದರ್ಶನದ ಕಾರಣದಿಂದಾಗಿ ಇಂಗ್ಲೆಂಡ್ ತಂಡ 247 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು.
ಇಂಗ್ಲೆಂಡ್ ತಂಡದ ಅಗ್ರ ಕ್ರಮಾಂಕ ಈ ಪಂದ್ಯದಲ್ಲಿಯೂ ಮಿಂಚಲು ವಿಫಲವಾಯಿತು. ಪ್ರಮುಖ ದಾಂಡಿಗರು ದೊಡ್ಡ ಮೊತ್ತದ ಕೊಡುಗೆಯನ್ನು ನೀಡಲು ಸಂಪೂರ್ಣವಾಗಿ ವಿಫಲವಾದರು. 102 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು ಇಂಗ್ಲೆಂಡ್.
ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಬೆಂಚ್: ಅಕ್ಷರ್ ಪಟೇಲ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಶ್ರೇಯಸ್ ಐಯ್ಯರ್, ಶಾರ್ದೂಲ್ ಠಾಕೂರ್
ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ, ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಬೆಂಚ್: ಮ್ಯಾಥ್ಯೂ ಪಾರ್ಕಿನ್ಸನ್, ಸ್ಯಾಮ್ ಕರಾನ್, ಫಿಲಿಪ್ ಸಾಲ್ಟ್, ಹ್ಯಾರಿ ಬ್ರೂಕ್