IND vs ENG ODI: ಸೋಲಿನ ಕಹಿಯನ್ನು ಮರೆಯಲು ಬೆಸ್ಟ್ ಚಾನ್ಸ್; ಪಂದ್ಯದ ಸಮಯ, ನೇರಪ್ರಸಾರದ ಮಾಹಿತಿ
ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಆಡಲಾದ ಟಿ20 ಸರಣಿಯಲ್ಲಿ ನೀರಸ ಪ್ರದರ್ಶನ ನೀಡಿ, ಸರಣಿ ಸೋಲಿನ ಕಹಿಯನ್ನು ಅನುಭವಿಸಿದೆ. ಈ ಸೋಲಿನ ಕಹಿ ಮರೆಯಲು ಬ್ಲ್ಯೂ ಬಾಯ್ಸ್‌ಗೆ ಒಳ್ಳೆಯ ಅವಕಾಶ ಸಿಗಲಿದೆ. ಮಂಗಳವಾರದಿಂದ ಇಂಗ್ಲೆಂಡ್‌ನಲ್ಲಿ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಪುಟಿದೇಳುವ ಲೆಕ್ಕಾಚಾರವನ್ನು ಹಾಕಿಕೊಂಡಿದೆ.
ಏಕದಿನ ಸರಣಿಗೆ ಭಾರತ ತಂಡದಲ್ಲಿ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮೈದಾನಕ್ಕೆ ಇಳಿಯಲಿದ್ದಾರೆ. ಹೀಗಾಗಿ ಎಲ್ಲರ ಕಣ್ಣುಗಳು ಇವರ ಮೇಲೆ ನೆಟ್ಟಿವೆ. ಇನ್ನು ಟಿ20 ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಎಡವಿದ್ದ ಶುಭಮನ್ ಗಿಲ್ ಮತ್ತೆ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ಇಂಗ್ಲೆಂಡ್ ವಿರುದ್ಧ ಅಬ್ಬರದ ಪ್ರದರ್ಶನ ನೀಡುವ ಆಸೆ ಭಾರತ ತಂಡದ್ದಾಗಿದೆ.
ಉಭಯ ತಂಡಗಳು ಈಗಾಗಲೇ 110 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ 61 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಇಂಗ್ಲೆಂಡ್ 44 ಪಂದ್ಯಗಳನ್ನು ಗೆದ್ದಿದೆ. ಇಂಗ್ಲೆಂಡ್‌ನಲ್ಲೂ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡಿದೆ.

ಟೀಮ್ ಇಂಡಿಯಾ ಪರ ಆರಂಭಿಕರಾಗಿ ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಕಣಕ್ಕೆ ಇಳಿಯಲಿದ್ದಾರೆ. ಭಾರತದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ನಾಯಕ ಗಿಲ್ ಅಮೋಘ ಪ್ರದರ್ಶನ ನೀಡಿದ್ದರು. ಇದೇ ಪ್ರದರ್ಶನ ಮುಂದುವರೆಸುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇನ್ನು ಬೌನ್ಸಿ ಪಿಚ್‌ಗಳಲ್ಲಿ ಆಡಿದ ಅನುಭವ ಹೊಂದಿರುವ ರೋಹಿತ್ ಶರ್ಮಾ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣಬಡಿಸಲು ಸಿದ್ಧರಾಗಿದ್ದಾರೆ.
ವಿರಾಟ್ ಆಕರ್ಷಣೆ
ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ವಿರಾಟ್ ಕೊಹ್ಲಿ ಆರು ತಿಂಗಳ ಬಳಿಕ ಕಣಕ್ಕೆ ಇಳಿಯುತ್ತಿದ್ದು ಎಲ್ಲರ ಚಿತ್ತ ಕದ್ದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಯ ವೇಳೆ ಇವರು ಗಾಯ ಕಾಣಿಸಿಕೊಂಡಿದ್ದರಿಂದ, ಹೊರ ನಡೆದಿದ್ದರು. ಹೀಗಾಗಿ ಇವರ ಮೇಲೆ ಎಲ್ಲ ಚಿತ್ತ ನೆಟ್ಟಿದೆ.
ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾಗಬಲ್ಲ ಪ್ಲೇಯರ್. ವಿಕೆಟ್ ಕೀಪರ್ ರೂಪದಲ್ಲಿ ಕೆಎಲ್ ರಾಹುಲ್ ಕಣಕ್ಕೆ ಇಳಿಯಲಿದ್ದು, ಇವರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಇನ್ನು ಆಲ್‌ರೌಂಡರ್ ರೂಪದಲ್ಲಿ ಅಕ್ಷರ್ ಪಟೇಲ್ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.
ವೇಗದ ಬೌಲರ್ ಆಗಿ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ಕಣಕ್ಕೆ ಇಳಿಯಲಿದ್ದಾರೆ. ಇವರಿಗೆ ಅರ್ಷದೀಪ್ ಸಿಂಗ್ ಹಾಗೂ ಪ್ರಸಿದ್ಧ್ ಕೃಷ್ಣ ಉತ್ತಮ ಸಾಥ್ ನೀಡಬೇಕಿದೆ. ಇನ್ನು ಕುಲ್‌ದೀಪ್ ಯಾದವ್ ನುರಿತ ಸ್ಪಿನ್ ಬೌಲರ್ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹೇಗಿರಲಿದೆ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್?
ಬೆನ್ ಡಕೆಟ್, ವಿಲ್ ಜಾಕ್ಸ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜಾಕಬ್ ಬೆಥೆಲ್, ಸ್ಯಾಮ್ ಕರನ್, ಜೋಶ್ ಟಂಗ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಗಸ್ ಅಟ್ಕಿನ್ಸನ್
ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಈ ಎಲ್ಲ ಆಟಗಾರರಿಗೆ ಸ್ಥಾನ
ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ,
ಪಂದ್ಯ ಆರಂಭವಾಗುವುದು ಯಾವಾಗ?
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಬರ್ಮಿಂಗ್‌ಹ್ಯಾಮ್‌ನಲ್ಲಿ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.
ಪಂದ್ಯವನ್ನು ವೀಕ್ಷಿಸುವುದು ಎಲ್ಲಿ?
ಮೊದಲ ಏಕದಿನ ಪಂದ್ಯವನ್ನ ಸೋನಿ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ಸ್ಟಾರ್ ಆಪ್‌ನಲ್ಲಿ ನೋಡಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications

