Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rohit Sharma: ಇಂಗ್ಲೆಂಡ್‌ ವಿರುದ್ದ ಐದು ದಾಖಲೆ ಮೇಲೆ ಹಿಟ್‌ಮ್ಯಾನ್‌ ಕಣ್ಣು

ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟಿ20 ಸರಣಿ ಮುಗಿದಿದೆ. ಈಗ ಎಲ್ಲರ ಚಿತ್ತ ಏಕದಿನ ಸರಣಿಯ ಮೇಲೆ ನೆಟ್ಟಿವೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರರು ಕಣಕ್ಕೆ ಇಳಿಯಲಿದ್ದಾರೆ. ಭಾರತದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಈ ವೇಳೆ ಅಭಿಮಾನಿಗಳ ಕಣ್ಣು ಸ್ಟಾರ್ ಆಟಗಾರರ ಮೇಲೆ ನೆಟ್ಟಿವೆ.

ರೋಹಿತ್ ಶರ್ಮಾ ಅಫ್ಘಾನಿಸ್ತಾನದ ವಿರುದ್ಧ ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲಿ ಕಣಕ್ಕೆ ಇಳಿದಿದ್ದರು. ಆದರೆ ವಿರಾಟ್‌ ಕೊಹ್ಲಿ ಗಾಯದ ಕಾರಣದಿಂದ ಅಫ್ಘಾನ್‌ ವಿರುದ್ಧದ ಸರಣಿಯಿಂದ ದೂರ ಉಳಿದಿದ್ದರು. ವಿರಾಟ್‌ ಇಂಗ್ಲೆಂಡ್‌ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ. ಇಂಗ್ಲೆಂಡ್‌ ಪ್ರವಾಸದಲ್ಲಿ ಸ್ಥಿರ ಪ್ರದರ್ಶನ ನೀಡಿ ತಮ್ಮ ಸಾಮರ್ಥ್ಯ ಸಾಬೀತು ಪಡಿಸುವತ್ತ ಅನುಭವಿ ಆಟಗಾರರು ಚಿತ್ತ ನೆಟ್ಟಿದ್ದಾರೆ.

Rohit Sharma

ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್‌ ವಿರುದ್ಧ ಅಬ್ಬರಿಸುವ ಕನಸು ಕಾಣುತ್ತಿದ್ದಾರೆ. ಅಲ್ಲದೆ ಈ ಸರಣಿಯಲ್ಲಿ ಇವರು ಐದು ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಆ ದಾಖಲೆಗಳ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಶತಕ ಬಾರಿಸಿದರೆ ದಾಖಲೆ

ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಶತಕ ದಾಖಲಿಸಿದಲ್ಲಿ ದೊಡ್ಡ ದಾಖಲೆಯನ್ನು ಬರೆಯಲಿದ್ದಾರೆ. ಇವರು ಶತಕ ಬಾರಿಸಿದ ಭಾರತದ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ತಮ್ಮದಾಗಿಸಿಕೊಳ್ಳಿದ್ದಾರೆ. ರೋಹಿತ್ ಶರ್ಮಾ ಅವರಿಗೆ ಸದ್ಯ 39 ವರ್ಷವಿದೆ.

280 ರನ್‌

ಮೂರು ಪಂದ್ಯಗಳ ಏಕದಿನ ಸರಣಿಯನ್ನು ರೋಹಿತ್ ಶರ್ಮಾ ಸ್ಥಿರ ಬ್ಯಾಟಿಂಗ್ ನಡೆಸುವಲ್ಲಿ ಯಶಸ್ವಿಯಾಗಿ 280 ರನ್ ಬಾರಿಸಿದಲ್ಲಿ, ಏಕದಿನ ಕ್ರಿಕೆಟ್‌ನಲ್ಲಿ ಇವರು 12 ಸಾವಿರ ರನ್‌ಗಳ ಮೈಲಿಗಲ್ಲು ಮುಟ್ಟಲಿದ್ದಾರೆ. ರೋಹಿತ್‌ ಒಮ್ಮೆ ನೆಲಕಚ್ಚಿ ನಿಂತಲ್ಲಿ ದೊಡ್ಡ ಇನಿಂಗ್ಸ್‌ ಕಟ್ಟುವಲ್ಲಿ ಹೆಸರುವಾಸಿ.

ಒಂದು ಸಿಕ್ಸರ್‌

ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಒಂದು ಸಿಕ್ಸರ್‌ ಬಾರಿಸಿದಲ್ಲಿ ಮತ್ತೊಂದು ದಾಖಲೆ ಬರೆಯಲಿದ್ದಾರೆ. ಈ ಮೂಲಕ ರೋಹಿತ್‌ ಇಂಗ್ಲೆಂಡ್‌ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್‌ ಎಂಬ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ.

9 ಸಾವಿರ ರನ್‌

ಇಂಗ್ಲೆಂಡ್‌ ಪ್ರವಾಸದಲ್ಲಿ ರೋಹಿತ್‌ 69 ರನ್ ಬಾರಿಸುವಲ್ಲಿ ಸಫಲರಾದರೆ, ಸೇನಾ ದೇಶಗಳಲ್ಲಿ 9 ಸಾವಿರ ರನ್‌ ಕಲೆ ಹಾಕಿದ ಏಷ್ಯಾದ ಮೊದಲ ಆರಂಭಿಕ ಆಟಗಾರ ಎಂಬ ದಾಖಲೆ ಬರೆಯಲಿದ್ದಾರೆ. ರೋಹಿತ್ ಶರ್ಮಾ ಆರಂಭಿಕರಾಗಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ.

49 ರನ್‌ಗೆ ಮತ್ತೊಂದು ದಾಖಲೆ

ರೋಹಿತ್ ಶರ್ಮಾ ಇಂಗ್ಲೆಂಡ್ ಸರಣಿಯಲ್ಲಿ ಅಬ್ಬರದ ಪ್ರದರ್ಶನ ನೀಡುವ ಇರಾದೆ ಹೊಂದಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಭಾರತ ಗೆದ್ದು ಅದರಲ್ಲಿ ರೋಹಿತ್ ಶರ್ಮಾ 49 ರನ್ ಬಾರಿಸಿದರೆ, ಆರಂಭಿಕ ಬ್ಯಾಟ್ಸ್‌ಮನ್ ಆಗಿ ಗೆಲುವಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗುವ ಅವಕಾಶ ಹೊಂದಿದ್ದಾರೆ.

Story first published: Monday, July 13, 2026, 7:20 [IST]
Other articles published on Jul 13, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+